ಸುಕೇಶ್ ಚಂದ್ರಶೇಖರ್ 
ದೇಶ

Bribery case: ಸುಕೇಶ್‌ ಚಂದ್ರಶೇಖರ್‌ಗೆ ಜಾಮೀನು; ಆದರೂ ಸೆರೆವಾಸ!

ಎಐಎಡಿಎಂಕೆ ಪಕ್ಷದ ಚುನಾವಣಾ ಚಿಹ್ನೆಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸುಕೇಶ್‌ ಚಂದ್ರಶೇಖರ್‌ಗೆ ದೆಹಲಿ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ.

ನವದೆಹಲಿ: 200 ಕೋಟಿ ರೂ ಸುಲಿಗೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣದಲ್ಲಿ ಆರೋಪಿಯಾಗಿರುವ ಸುಕೇಶ್ ಚಂದ್ರಶೇಖರ್ ಗೆ ಕೊನೆಗೂ ಜಾಮೀನು ಮಂಜೂರಾಗಿದ್ದು, ಆದರೂ ಆತನ ಸೆರೆವಾಸ ಮಾತ್ರ ಮುಂದುವರೆಯಲಿದೆ.

ಹೌದು.. ಎಐಎಡಿಎಂಕೆ ಪಕ್ಷದ ಚುನಾವಣಾ ಚಿಹ್ನೆಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸುಕೇಶ್‌ ಚಂದ್ರಶೇಖರ್‌ಗೆ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುಕೇಶ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿಶೇಷ ನ್ಯಾಯಾಧೀಶ ವಿಶಾಲ್‌ ಗೋಗ್ದೆ ಅವರಿದ್ದ ವಿಶೇಷ ಪೀಠವು ವಾದ-ಪ್ರತಿವಾದವನ್ನು ಆಲಿಸಿದ ಬಳಿಕ 5 ಲಕ್ಷ ರೂಪಾಯಿ ಮೌಲ್ಯದ ಬಾಂಡ್‌ ಅನ್ನು ಶ್ಯೂರಿಟಿಯಾಗಿರಿಸಿಕೊಂಡು ಜಾಮೀನು ಮಂಜೂರು ಮಾಡಿದ್ದಾರೆ.

ಎಐಎಡಿಎಂಕೆ ಪಕ್ಷದ ಚಿಹ್ನೆಯನ್ನು ವಿ.ಕೆ. ಶಶಿಕಲಾ ಅವರ ಬಣಕ್ಕೆ ಕೊಡಿಸುವ ಸಂಬಂಧ ಚುನಾವಣಾ ಆಯೋಗದ ಅಧಿಕಾರಿಯೊಬ್ಬರಿಗೆ ಲಂಚ ಆಮಿಷ ಒಡ್ಡಲಾಗಿತ್ತು. ಈ ವಿಚಾರವಾಗಿ ಸುಖೇಶ್‌ ಮಧ್ಯಸ್ಥಿಕೆ ವಹಿಸಿದ್ದ ಎಂದು ಹೇಳಲಾಗಿದೆ. ಇದೇ ಪ್ರಕರಣದಲ್ಲಿ ಇದೀಗ ಸುಕೇಶ್ ಗೆ ಜಾಮೀನು ಮಂಜೂರಾಗಿದೆ.

ಸೆರೆವಾಸ ಮುಂದುವರಿಕೆ

ಬೇಲ್‌ ಸಿಕ್ಕರೂ ಸದ್ಯಕ್ಕೆ ಸುಕೇಶ್‌ ಹೊರಬರುವುದಿಲ್ಲ. ಏಕೆಂದರೆ ಬೇರೆ ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, ಅವುಗಳ ವಿಚಾರಣೆ ನಡೆದ ಬಳಿಕ ಸುಕೇಶ್‌ ಸೆರೆವಾಸ ಅಂತ್ಯದ ಭವಿಷ್ಯ ತಿಳಿಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!