ಪ್ರಧಾನಿ ಮೋದಿ ಅವರು, ಆಗಸ್ಟ್ 31, 2024, ಶನಿವಾರ, ನವದೆಹಲಿಯಲ್ಲಿ ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನದ ಉದ್ಘಾಟನೆಯ ಸಂದರ್ಭದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರೊಂದಿಗೆ. Photo| PTI
ದೇಶ

Crime against women: ತ್ವರಿತ ನ್ಯಾಯಕ್ಕಾಗಿ ಉತ್ತಮ ಸಮನ್ವಯ ಅಗತ್ಯ- ಪ್ರಧಾನಿ ಮೋದಿ

ಮಹಿಳೆಯರ ವಿರುದ್ಧದ ಅಪರಾಧಗಳನ್ನು ಎದುರಿಸಲು ಹಲವಾರು ಕಠಿಣ ಕಾನೂನುಗಳಿವೆ ಮತ್ತು ತ್ವರಿತ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಅಪರಾಧ ನ್ಯಾಯ ವ್ಯವಸ್ಥೆಯ ನಡುವೆ ಉತ್ತಮ ಸಮನ್ವಯವನ್ನು ಖಚಿತಪಡಿಸಿಕೊಳ್ಳುವ ಅಗತ್ಯವಿದೆ- ಮೋದಿ

ನವದೆಹಲಿ: ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಲ್ಲಿ ತ್ವರಿತ ನ್ಯಾಯ ಒದಗಿಸುವ ತುರ್ತು ಅಗತ್ಯವಿದ್ದು, ತ್ವರಿತ ನ್ಯಾಯ ಮಹಿಳೆಯರ ಸುರಕ್ಷತೆಯೆಡೆಗೆ ಹೆಚ್ಚಿನ ಭರವಸೆ ಮೂಡಿಸುತ್ತದೆ ಎಂದು ಹೇಳಿದ್ದಾರೆ.

ನ್ಯಾಯಾಂಗವನ್ನು ಸಂವಿಧಾನದ ರಕ್ಷಕನೆಂದು ಪರಿಗಣಿಸಲಾಗುತ್ತದೆ. ಮತ್ತು ಸುಪ್ರೀಂ ಕೋರ್ಟ್ ಮತ್ತು ನ್ಯಾಯಾಂಗವು ಜವಾಬ್ದಾರಿಯನ್ನು ನಿರ್ವಹಿಸಿದೆ ಎಂದು ಮೋದಿ ಹೇಳಿದ್ದಾರೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ಉಪಸ್ಥಿತಿಯಲ್ಲಿ ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ರಾಷ್ಟ್ರೀಯ ಭದ್ರತೆಯ ವಿಷಯಗಳಲ್ಲಿ, ನ್ಯಾಯಾಂಗವು ರಾಷ್ಟ್ರೀಯ ಹಿತಾಸಕ್ತಿಗಳನ್ನು ಪ್ರಧಾನವಾಗಿಟ್ಟುಕೊಂಡು ರಾಷ್ಟ್ರೀಯ ಸಮಗ್ರತೆಯನ್ನು ರಕ್ಷಿಸಿದೆ ಎಂದು ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ವೈದ್ಯರೊಬ್ಬರ ಅತ್ಯಾಚಾರ ಮತ್ತು ಕೊಲೆ ಮತ್ತು ಥಾಣೆಯಲ್ಲಿ ಇಬ್ಬರು ಶಿಶುವಿಹಾರದ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯಗಳ ಹಿನ್ನೆಲೆಯಲ್ಲಿ, ಮಹಿಳೆಯರ ಮೇಲಿನ ದೌರ್ಜನ್ಯಗಳು ಮತ್ತು ಮಕ್ಕಳ ಸುರಕ್ಷತೆಯು ಸಮಾಜಕ್ಕೆ ಗಂಭೀರ ಕಾಳಜಿಯ ವಿಷಯವಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಎಷ್ಟು ವೇಗವಾಗಿ ನ್ಯಾಯವನ್ನು ನೀಡಲಾಗುತ್ತದೆ, ಜನಸಂಖ್ಯೆಯ ಅರ್ಧದಷ್ಟು ಜನರು ತಮ್ಮ ಸುರಕ್ಷತೆಯ ಬಗ್ಗೆ ಹೆಚ್ಚಿನ ಭರವಸೆಯನ್ನು ಹೊಂದಿರುತ್ತಾರೆ" ಎಂದು ಪ್ರಧಾನಿ ಹೇಳಿದ್ದಾರೆ.

ಮಹಿಳೆಯರ ವಿರುದ್ಧದ ಅಪರಾಧಗಳನ್ನು ಎದುರಿಸಲು ಹಲವಾರು ಕಠಿಣ ಕಾನೂನುಗಳಿವೆ ಮತ್ತು ತ್ವರಿತ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಅಪರಾಧ ನ್ಯಾಯ ವ್ಯವಸ್ಥೆಯ ನಡುವೆ ಉತ್ತಮ ಸಮನ್ವಯವನ್ನು ಖಚಿತಪಡಿಸಿಕೊಳ್ಳುವ ಅಗತ್ಯವಿದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ. (CJI) ಡಿವೈ ಚಂದ್ರಚೂಡ್ ಮಾತನಾಡಿ, ಜಿಲ್ಲಾ ನ್ಯಾಯಾಂಗವನ್ನು "ನ್ಯಾಯಾಂಗದ ಬೆನ್ನೆಲುಬು" ಎಂದು ಕರೆದಿದ್ದಾರೆ ಮತ್ತು ಇದು ಕಾನೂನಿನ ಆಡಳಿತದ ನಿರ್ಣಾಯಕ ಅಂಶವಾಗಿದೆ ಎಂದು ಹೇಳಿದರು. ಜಿಲ್ಲಾ ನ್ಯಾಯಾಂಗವನ್ನು ಅಧೀನ ನ್ಯಾಯಾಲಯ ಎಂದು ಕರೆಯುವುದನ್ನು ನಿಲ್ಲಿಸುವುದು ಅಗತ್ಯ ಎಂದು ಅವರು ತಿಳಿಸಿದರು.

"ಜಿಲ್ಲಾ ನ್ಯಾಯಾಂಗವು ನ್ಯಾಯದ ಹುಡುಕಾಟದಲ್ಲಿರುವ ನಾಗರಿಕರಿಗೆ ಸಂಪರ್ಕದ ಮೊದಲ ಬಿಂದುವಾಗಿದೆ. ಜಿಲ್ಲಾ ನ್ಯಾಯಾಂಗವು ಕಾನೂನಿನ ಆಳ್ವಿಕೆಯ ನಿರ್ಣಾಯಕ ಅಂಶವಾಗಿದೆ ಎಂದು ಸಿಜೆಐ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT