ಲೋಕಸಭೆ  samsad tv
ದೇಶ

ಮುಂದೂಡಿಕೆ, ಅಡ್ಡಿ ಇನ್ನಿಲ್ಲ; ಸಂಸತ್ ಸುಗಮ ಕಲಾಪಕ್ಕೆ ವಿಪಕ್ಷಗಳ ಒಪ್ಪಿಗೆ

ಸಂವಿಧಾನದ ಬಗ್ಗೆ ಚರ್ಚೆ ನಡೆಸುವ ದಿನಾಂಕವನ್ನು ಘೋಷಿಸಿರುವ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಉಭಯ ಸದನಗಳು ಡಿ.03 ರಿಂದ ಸುಗಮವಾಗಿ ನಡೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆ ನಡೆಸುವುದಕ್ಕೆ ದಿನಾಂಕ ಘೋಷಣೆಯಾಗಿದ್ದು, ಸಂಸತ್ ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತಹ ನಿರ್ಣಯಕ್ಕೆ ವಿಪಕ್ಷಗಳು ಬಂದಿವೆ.

ಭಾರತ ತನ್ನ ಸಂವಿಧಾನ ಪಡೆದು 75 ವರ್ಷಗಳಾಗುತ್ತಿದ್ದು, ಈ ಬಗ್ಗೆ ಡಿ.13-14 ರಂದು ಲೋಕಸಭೆಯಲ್ಲಿ ಚರ್ಚೆ ನಡೆಯಲಿದ್ದರೆ, ಡಿ.16-17 ರಂದು ರಾಜ್ಯಸಭೆಯಲ್ಲಿ ಚರ್ಚೆಗೆ ದಿನಾಂಕ ಘೋಷಣೆಯಾಗಿದೆ.

ಸಂವಿಧಾನದ ಬಗ್ಗೆ ಚರ್ಚೆ ನಡೆಸುವ ದಿನಾಂಕವನ್ನು ಘೋಷಿಸಿರುವ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಉಭಯ ಸದನಗಳು ಡಿ.03 ರಿಂದ ಸುಗಮವಾಗಿ ನಡೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಲವು ಪಕ್ಷಗಳ ನಾಯಕರೊಂದಿಗೆ ಸ್ಪೀಕರ್ ಓಂ ಬಿರ್ಲಾ ಸಭೆ ನಡೆಸಿದ ಫಲಿತವಾಗಿ ವಿಪಕ್ಷಗಳು ಸಂಸತ್ ಕಲಾಪಗಳಿಗೆ ಅಡ್ಡಿಯುಂಟುಮಾಡದೇ ಇರುವುದಕ್ಕೆ ನಿರ್ಧರಿಸಿವೆ ಎಂದು ತಿಳಿದುಬಂದಿದೆ.

ಸಂವಿಧಾನ ಸಭೆಯು ಸಂವಿಧಾನವನ್ನು ಅಂಗೀಕರಿಸಿದ 75 ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಚರ್ಚೆಗೆ ವಿರೋಧ ಪಕ್ಷಗಳು ಒತ್ತಾಯಿಸಿದ್ದವು. ಸಭೆಯಲ್ಲಿ ಪಾಲ್ಗೊಂಡಿದ್ದ ಹಲವು ಪ್ರತಿಪಕ್ಷಗಳ ನಾಯಕರು ಕೂಡ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಭಾಲ್ ಹಿಂಸಾಚಾರ ಮತ್ತು ಮಣಿಪುರದಂತಹ ಇತರ ವಿಷಯಗಳನ್ನು ಪ್ರತಿಪಕ್ಷಗಳು ಎತ್ತುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ರಿಜಿಜು, ನಿಯಮಗಳಿಗೆ ಅನುಸಾರವಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಷ್ಟೇ ಹೇಳಿದ್ದಾರೆ.

ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಮತ್ತು ಇತರ ಕಂಪನಿ ಅಧಿಕಾರಿಗಳ ವಿರುದ್ಧ ಲಂಚ ಮತ್ತು ವಂಚನೆ ಆರೋಪದ ಮೇಲೆ ಯುಎಸ್ ಪ್ರಾಸಿಕ್ಯೂಟರ್‌ಗಳ ದೋಷಾರೋಪಣೆಯ ವಿಷಯವನ್ನಿಟ್ಟುಕೊಂಡು ಕಾಂಗ್ರೆಸ್ ಸಂಸತ್ ಕಲಾಪಕ್ಕೆ ಅಡ್ದಿ ಪಡಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೀಗೂ ಉಂಟೆ?: BJP ಶಾಸಕನ ಬಂಗಲೆ ತೊಳೆಯಲು ಹೋದ ಅಗ್ನಿಶಾಮಕ ವಾಹನ; ವಿಡಿಯೋ ವೈರಲ್‌ ಬೆನ್ನಲ್ಲೇ ₹2,700 ದಂಡ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!