ಭೂ ಕುಸಿತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ 
ದೇಶ

ಫೆಂಗಲ್ ಎಫೆಕ್ಟ್: ತಿರುವಣ್ಣಾಮಲೈನಲ್ಲಿ ಭೂಕುಸಿತ, ಅವಶೇಷಗಳಡಿ 7 ಮಂದಿ; ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ, ಕಮಾಂಡೋ, ತಮಿಳುನಾಡಿನ ಅಗ್ನಿ ಶಾಮಕ ದಳ ಸೇರಿದಂತೆ ಸುಮಾರು 170 ಜನರು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ತಿರುವಣ್ಣಾಮಲೈ: ಫೆಂಗಲ್ ಚಂಡಮಾರುತದ ಪರಿಣಾಮವಾಗಿ ತಮಿಳನಾಡಿನ ತಿರುವಣ್ಣಾಮಲೈನಲ್ಲಿ ಭೂ ಕುಸಿತ ಸಂಭವಿಸಿದ್ದು, ಏಳು ಮಂದಿ ಭಾನುವಾರ ಸಂಜೆಯಿಂದ ಅವಶೇಷಗಳಡಿ ಸಿಲುಕಿದ್ದಾರೆ. ರಕ್ಷಣಾ ತಂಡವೊಂದು ಸ್ಥಳಕ್ಕೆ ಧಾವಿಸಿದ್ದು, ಸುಮಾರು 12 ಗಂಟೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ, ಕಮಾಂಡೋ, ತಮಿಳುನಾಡಿನ ಅಗ್ನಿ ಶಾಮಕ ದಳ ಸೇರಿದಂತೆ ಸುಮಾರು 170 ಜನರು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೃಹತ್ ಗಾತ್ರದ ಕಲ್ಲುಗಳು ಇರುವುದರಿಂದ ಸಂತ್ರಸ್ತರನ್ನು ಪತ್ತೆ ಹಚ್ಚಲು ಸ್ಕ್ಯಾನಿಂಗ್ ಯಂತ್ರಕ್ಕೆ ಕಷ್ಟವಾಗುತ್ತಿದೆ ಎಂದು ರಕ್ಷಣಾಧಿಕಾರಿ ಸುವಿಕ್ಕೈನ್ ರಾಜ್ TNIE ಗೆ ತಿಳಿಸಿದ್ದಾರೆ.

ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ಮಾನವಶಕ್ತಿಯನ್ನು ಅವಲಂಬಿಸಿದ್ದೇವೆ. ಸಂತ್ರಸ್ತರು ಕೆಸರಿನಡಿಯಲ್ಲಿ ಹೂತು ಹೋಗಿರುವುದು ದೃಢಪಟ್ಟಿದ್ದು, ಮೊದಲು ಕಲ್ಲುಗಳನ್ನು ತೆಗೆಯುವುದು ನಮ್ಮ ಆದ್ಯತೆಯಾಗಿದೆ ಎಂದು ಅವರು ಮಾಹಿತಿನೀಡಿದ್ದಾರೆ.

ತಂಡ ಪ್ರಸ್ತುತ ಅವಶೇಷಗಳನ್ನು ತೆರವುಗೊಳಿಸಲು ಅರೆ, ಪಿಕಾಸಿಯಂತಹ ಸರಳ ಸಾಧನಗಳನ್ನು ಬಳಸುತ್ತಿದೆ. ಜೆಸಿಬಿ, ಅಗೆಯುವ ಯಂತ್ರ ತರಲು ಪ್ರಯತ್ನಿಸುತ್ತಿದ್ದೇವೆ, ಆದರೆ ಭಾರವಾದ ಕಲ್ಲುಗಳು ಯಂತ್ರೋಪಕರಣಗಳನ್ನು ನಿರ್ವಹಿಸಲು ಸವಾಲಾಗುತ್ತಿವೆ ಎಂದು ಅಧಿಕೃತ ಮೂಲಗಳು ವಿವರಿಸಿವೆ.

ಸಚಿವ ಇ.ವಿ. ವೇಲು, ಕಲೆಕ್ಟರ್ ಬಾಸ್ಕರ ಪಾಂಡಿಯನ್ ಮತ್ತು ಇತರ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ಮಾಡಿದರು ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗಿದೆ ಎಂದು ಖಾತ್ರಿಪಡಿಸಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT