INDIA ಬಣದ ಸಂಸದರ ಪ್ರತಿಭಟನೆ 
ದೇಶ

ಅದಾನಿ ಲಂಚ ವಿವಾದ: ಸಂಸತ್ ಆವರಣದಲ್ಲಿ ವಿಪಕ್ಷಗಳ INDIA ಬಣದ ಸಂಸದರ ಪ್ರತಿಭಟನೆ

ಕಾಂಗ್ರೆಸ್, ಎಎಪಿ, ಆರ್ ಜೆಡಿ, ಶಿವಸೇನಾ (ಯುಬಿಟಿ) ಎಡರಂಗ ಸೇರಿದಂತೆ ಮತ್ತಿತರ ಪಕ್ಷಗಳ ಸಂಸದರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹೊಣೆಗಾರಿಕೆಗೆ ಒತ್ತಾಯಿಸಿದರು.

ನವದೆಹಲಿ: ಅದಾನಿ ಲಂಚ ವಿವಾದವನ್ನು ಜಂಟಿ ಸದನ ತನಿಖೆಗೆ ಆಗ್ರಹಿಸಿ ವಿಪಕ್ಷಗಳ INDIA ಬಣದ ಸಂಸದರು ಸಂಸತ್ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್, ಎಎಪಿ, ಆರ್ ಜೆಡಿ, ಶಿವಸೇನಾ (ಯುಬಿಟಿ) ಎಡರಂಗ ಸೇರಿದಂತೆ ಮತ್ತಿತರ ಪಕ್ಷಗಳ ಸಂಸದರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹೊಣೆಗಾರಿಕೆಗೆ ಒತ್ತಾಯಿಸಿದರು.

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಎಪಿಯ ಸಂಜಯ್ ಸಿಂಗ್, ಆರ್ ಜೆಡಿಯ ಮಿಶ್ರಾ ಭಾರತಿ ಮತ್ತು ಶಿವಸೇನೆಯ (ಯುಬಿಟಿ) ಅರವಿಂದ್ ಸಾವಂತ್ ಮತ್ತಿತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಲಂಚ ಮತ್ತು ವಂಚನೆ ಪ್ರಕರಣದಲ್ಲಿ ಅದಾನಿ ಸಮೂಹದ ಮುಖ್ಯಸ್ಥ ಗೌತಮ್ ಅದಾನಿ ಮತ್ತಿತರ ಕಂಪನಿಗಳ ಸಿಬ್ಬಂದಿ ವಿರುದ್ಧ ಅಮೆರಿಕ ಆರೋಪ ಪಟ್ಟಿ ದಾಖಲಿಸಿರುವ ಹಿನ್ನೆಲೆಯಲ್ಲಿ ಜಂಟಿ ಸದನ ಸಮಿತಿಯಿಂದ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ಮತ್ತಿತರ ಪಕ್ಷಗಳು ಆಗ್ರಹಿಸಿದವು.

ಗೌತಮ್ ಅದಾನಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ರಾಹುಲ್ ಗಾಂಧಿ ಸರ್ಕಾರವನ್ನು ಒತ್ತಾಯಿಸಿದರು. ಆದರೆ ಪ್ರತಿಪಕ್ಷಗಳ ಆರೋಪ ನಿರಾಧಾರ ಎಂದು ಅದಾನಿ ಸಮೂಹ ತಳ್ಳಿ ಹಾಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT