ದೇವೇಂದ್ರ ಫಡ್ನವಿಸ್ online desk
ದೇಶ

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಫಡ್ನವಿಸ್ ಕೈಗೊಂಡ ಮೊದಲ ನಿರ್ಧಾರ ಯಾವುದು ಗೊತ್ತೇ?

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಇಂದು ಪದಗ್ರಹಣ ಮಾಡಿದ್ದು, ಅಧಿಕಾರ ವಹಿಸಿಕೊಂಡ ಮೊದಲ ದಿನ ಹಲವು ಕಡತಗಳಿಗೆ ಸಹಿ ಹಾಕಿದ್ದಾರೆ.

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಇಂದು ಪದಗ್ರಹಣ ಮಾಡಿದ್ದು, ಅಧಿಕಾರ ವಹಿಸಿಕೊಂಡ ಮೊದಲ ದಿನ ಹಲವು ಕಡತಗಳಿಗೆ ಸಹಿ ಹಾಕಿದ್ದಾರೆ.

ಮುಖ್ಯಮಂತ್ರಿಯಾದ ಬೆನ್ನಲ್ಲೇ ಮೂಳೆ ಮಜ್ಜೆಯ ಕಸಿಗಾಗಿ ಕಾಯುತ್ತಿರುವ ರೋಗಿಗಳಿಗೆ ತಲಾ 5 ಲಕ್ಷ ರೂಪಾಯಿ ಬಿಡುಗಡೆ ಮಾಡುವ ಪ್ರಸ್ತಾವನೆಯ ಕಡತಕ್ಕೆ ಸಹಿ ಹಾಕಿದ್ದಾರೆ. ಫಡ್ನವಿಸ್ ಸಹಿ ಹಾಕಿರುವ ಮೊದಲ ಕಡತ ಇದಾಗಿದೆ.

ಪುಣೆ ಮೂಲದ ಚಂದ್ರಕಾಂತ್ ಕುರ್ಹಾಡೆ ಅವರ ಪತ್ನಿ ಪತಿಯ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಕೋರಿದ್ದರು. ಮೊದಲ ಸಂಪುಟ ಸಭೆಯ ಅಧ್ಯಕ್ಷತೆ ವಹಿಸುವ ಮುನ್ನ ಮುಖ್ಯಮಂತ್ರಿಗಳು ಕಡತಕ್ಕೆ ಸಹಿ ಹಾಕಿದರು.

ಆಜಾದ್ ಮೈದಾನದಲ್ಲಿ ಸಂಜೆ ನಡೆದ ಸಮಾರಂಭದಲ್ಲಿ ಫಡ್ನವೀಸ್ ಮತ್ತು ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು, ಮೆಟ್ರೋ ಸಂಚಾರ ವ್ಯತ್ಯಯ!

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ತಿರಸ್ಕಾರ: 'ಸುಪ್ರೀಂ' ತೀರ್ಪು ಸ್ವಾಗತಿಸಿದ ಡಿಕೆ ಶಿವಕುಮಾರ್

ಮೂಲಭೂತವಾದಿಗಳ ಒತ್ತಡಕ್ಕೆ ಮಣಿದ ಪಾಕ್ ಸರ್ಕಾರ; ಹಿಂದೂ ಹೆಸರುಗಳ ಮರು ನಾಮಕರಣ ಮುಂದೂಡಿಕೆ!

SCROLL FOR NEXT