ಸಂಸತ್ತು ಆವರಣದಲ್ಲಿ ಜಾಕೆಟ್ ಧರಿಸಿ ಪ್ರತಿಭಟನೆ  
ದೇಶ

'Modi Adani Ek Hai': ಕಪ್ಪು ಜಾಕೆಟ್ ಧರಿಸಿ INDIA bloc ಸಂಸದರಿಂದ ಪ್ರತಿಭಟನೆ

ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್ ಸಂಸದರು, ಆರ್‌ಜೆಡಿ ಮತ್ತು ಎಡಪಕ್ಷಗಳ ಹಲವಾರು ವಿರೋಧ ಪಕ್ಷಗಳ ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ನವದೆಹಲಿ: ತೀವ್ರ ಪ್ರತಿಭಟನೆಯಲ್ಲಿ, ಹಲವಾರು ಇಂಡಿಯಾ ಬ್ಲಾಕ್‌ ಮೈತ್ರಿಕೂಟದ ನಾಯಕರು ಇಂದು ಗುರುವಾರ "ಮೋದಿ ಅದಾನಿ ಏಕ್ ಹೈ" ಮತ್ತು "ಅದಾನಿ ಸೇಫ್ ಹೈ" ಎಂಬ ಬರಹಗಳನ್ನು ಹೊಂದಿದ ಕಪ್ಪು ಜಾಕೆಟ್ ಗಳನ್ನು ಧರಿಸಿ ಅದಾನಿ ವಿರುದ್ಧ ಜಂಟಿ ಸಂಸದೀಯ ತನಿಖೆಗೆ ಒತ್ತಾಯಿಸಿ ಸಂಸತ್ತಿನ ಆವರಣದಲ್ಲಿ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು.

ತಮ್ಮ ಟ್ರೇಡ್ ಮಾರ್ಕ್ ಬಿಳಿ ಟೀ ಶರ್ಟ್ ಮೇಲೆ ಸ್ಟಿಕ್ಕರ್ ಅಂಟಿಸಿದ ಜಾಕೆಟ್ ಧರಿಸಿ ಬಂದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ವಿರುದ್ಧ ತನಿಖೆ ನಡೆಸಲು ಸಾಧ್ಯವಿಲ್ಲ ಏಕೆಂದರೆ ಅದು ಅವರ ವಿರುದ್ಧವೇ ತನಿಖೆ ನಡೆಸುವಂತೆ ಮಾಡುತ್ತದೆ ಎಂದರು.

ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್ ಸಂಸದರು, ಆರ್‌ಜೆಡಿ ಮತ್ತು ಎಡಪಕ್ಷಗಳ ಹಲವಾರು ವಿರೋಧ ಪಕ್ಷಗಳ ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಲಂಚ ಮತ್ತು ವಂಚನೆ ಆರೋಪದ ಮೇಲೆ ಅಮೆರಿಕ ನ್ಯಾಯಾಲಯದಲ್ಲಿ ಅದಾನಿ ವಿರುದ್ಧದ ದೋಷಾರೋಪಣೆಯ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಷಯದ ಬಗ್ಗೆ ಸದನದಲ್ಲಿ ಮಾತನಾಡಬೇಕು ಎಂದು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಇಬ್ಬರೂ ಒತ್ತಾಯಿಸಿದರು.

ಸ್ವಲ್ಪ ಸಮಯದ ನಂತರ, ಪ್ರತಿಭಟನಾ ನಿರತ ಸಂಸದರು ಸಂವಿದಾನ ಸದನದ ಮುಂದೆ ಸರತಿ ಸಾಲಿನಲ್ಲಿ ನಿಂತು ಮೋದಿ ಮತ್ತು ಅದಾನಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಂಸತ್ತು ಗೇಟ್ ಮುಂದೆ ಪ್ರತಿಭಟನೆ ನಡೆಸದಂತೆ ಸಂಸದರಿಗೆ ಲೋಕಸಭೆ ಸೆಕ್ರೆಟರಿಯೇಟ್ ನಿನ್ನೆ ಸೂಚಿಸಿದ್ದರು. ಮೊನ್ನೆ ಮತ್ತು ನಿನ್ನೆ ಮಕರ ದ್ವಾರದ ಮೆಟ್ಟಿಲುಗಳ ಮೇಲೆ ವಿರೋಧ ಪಕ್ಷದ ಸಂಸದರು ಪ್ರತಿಭಟನೆ ನಡೆಸಿದ್ದರು.

ಅದಾನಿ ವಿರುದ್ಧದ ಪ್ರತಿಭಟನೆಯಿಂದ ಟಿಎಂಸಿ ದೂರ ಉಳಿದಿದೆ. ಯುಎಸ್ ನ್ಯಾಯಾಲಯದಲ್ಲಿ ಅದಾನಿ ಮತ್ತು ಇತರ ಕಂಪನಿಯ ಅಧಿಕಾರಿಗಳ ವಿರುದ್ಧ ದೋಷಾರೋಪಣೆ ಮಾಡಿದ ನಂತರ ಕಾಂಗ್ರೆಸ್ ಮತ್ತು ಇತರ ಕೆಲವು ವಿರೋಧ ಪಕ್ಷಗಳು ಜಂಟಿ ಸಂಸದೀಯ ಸಮಿತಿ (JPC) ತನಿಖೆಗೆ ಒತ್ತಾಯಿಸುತ್ತಿವೆ. ಗೌತಮ್ ಅದಾನಿಯವರನ್ನು ತಕ್ಷಣ ಬಂಧಿಸುವಂತೆ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಆದರೆ ಅದಾನಿ ಸಮೂಹ ಎಲ್ಲಾ ಆರೋಪಗಳನ್ನು ಆಧಾರರಹಿತ ಎಂದು ತಳ್ಳಿಹಾಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT