ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ಶೂಟಿಂಗ್ ನಲ್ಲಿ ಭಾರಿ ಭದ್ರತಾ ಲೋಪವಾಗಿದೆ. ವ್ಯಕ್ತಿಯೊಬ್ಬರು ಸೆಟ್ ಗೆ ಪ್ರವೇಶಿಸಿದ್ದಾರೆ.
ದಾದರ್ ವೆಸ್ಟ್‌ನಲ್ಲಿ ಸಲ್ಮಾನ್ ಖಾನ್ ಅವರ ಚಿತ್ರವೊಂದರ ಚಿತ್ರೀಕರಣದಲ್ಲಿ ಅಭಿಮಾನಿಯೊಬ್ಬರು ಶೂಟಿಂಗ್ ವೀಕ್ಷಿಸಲು ಬಯಸಿದ್ದಾರೆ. ಆದರೆ ಭದ್ರತಾ ಸಿಬ್ಬಂದಿ ಅವರನ್ನು ಪಕ್ಕಕ್ಕೆ ಸರಿಸಿದಾಗ ಅವರಿಬ್ಬರ ನಡುವೆ ಜಗಳ ಆಗಿದೆ.
ಬಳಿಕ ಕೋಪಗೊಂಡ ಆ ವ್ಯಕ್ತಿ ಲಾರೆನ್ಸ್ ಬಿಷ್ಣೋಯಿ ಹೆಸರು ಹೇಳಿದ್ದಾಗ ಭದ್ರತಾ ಸಿಬ್ಬಂದಿ ಪೊಲೀಸರನ್ನು ಕರೆಸಿ ಆತನನ್ನು ಒಪ್ಪಿಸಿದ್ದಾರೆ. ಆ ವ್ಯಕ್ತಿ ಮುಂಬೈ ನಿವಾಸಿ ಎಂಬುದು ತಿಳಿದುಬಂದಿದೆ.
ಅಕ್ಟೋಬರ್ 24 ರಂದು ಮುಂಬೈ ಸಂಚಾರಿ ಪೊಲೀಸರಿಗೆ ಬಂದ ಸಂದೇಶದಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಹೆಸರಿನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು.
ನಂತರ ಸಂದೇಶ ಕಳುಹಿಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.