ಚಿತ್ರ ವೀಕ್ಷಣೆ ಮಾಡಿದ ಅಲ್ಲು ಅರ್ಜುನ್ 
ದೇಶ

Pushpa 2 The Rule: 'ದುರದೃಷ್ಟಕರ.. ಸತ್ತಿಲ್ಲ.. ಸುಳ್ಳುಸುದ್ದಿ ಹರಡಬೇಡಿ'; ಥಿಯೇಟರ್ ನಲ್ಲಿ ಸಾವಿಗೀಡಾದ ಮಹಿಳಾ ಕುಟುಂಬಕ್ಕೆ Allu Arjun ನೆರವು ಘೋಷಣೆ

ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ಇಂದು ಬೆಳಗ್ಗೆ ಪುಷ್ಪಾ ಚಿತ್ರ ವೀಕ್ಷಣೆಗಾಗಿ ತೆರಳಿದ್ದ 39 ವರ್ಷದ ರೇವತಿ ಎಂಬ ಮಹಿಳೆ ಕಾಲ್ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿದ್ದರು.

ಹೈದರಾಬಾದ್: ಇಂದು ಬಿಡುಗಡೆಯಾದ ಪುಷ್ಪ 2 ಚಿತ್ರದ ವೀಕ್ಷಣೆ ವೇಳೆ ನಡೆದ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದ ಮಹಿಳೆಗೆ ನೆರವು ನೀಡುವುದಾಗಿ ನಟ ಅಲ್ಲು ಅರ್ಜುನ್ ತಂಡ ಘೋಷಣೆ ಮಾಡಿದೆ.

ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ಇಂದು ಬೆಳಗ್ಗೆ ಪುಷ್ಪಾ ಚಿತ್ರ ವೀಕ್ಷಣೆಗಾಗಿ ತೆರಳಿದ್ದ 39 ವರ್ಷದ ರೇವತಿ ಎಂಬ ಮಹಿಳೆ ಕಾಲ್ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿದ್ದರು. ಇದೇ ಘಟನೆಯಲ್ಲಿ ರೇವತಿ ಅವರ 9 ವರ್ಷದ ಮಗ ಕೂಡ ಕಾಲ್ತುಳಿತಕ್ಕೆ ಸಿಲುಕಿ ಗಂಭೀರವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಂಭೀರವಾಗಿರುವ 9 ವರ್ಷದ ಶ್ರೀತೇಜ್ ನನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಂಧ್ಯಾ ಥಿಯೇಟರ್ ಗೆ ನಟ ಅಲ್ಲು ಅರ್ಜುನ್ ಮತ್ತು ಪುಷ್ಪ 2 ಚಿತ್ರತಂಡ ಭೇಟಿ ನೀಡುತ್ತಿದ್ದ ಎಂಬ ಸುದ್ದಿ ಹಿನ್ನೆಲೆಯಲ್ಲಿ ಥಿಯೇಟರ್ ಗೆ ಅಪಾರ ಪ್ರಮಾಣದ ಅಭಿಮಾನಿಗಳು ಧಾವಿಸಿದ್ದು, ಈ ವೇಳೆ ನಡೆದ ಕಾಲ್ತುಳಿತದಲ್ಲಿ ರೇವತಿ ಮತ್ತು ಶ್ರೀತೇಜ್ ಸಿಲುಕಿದ್ದರು. ಈ ಪೈಕಿ ರೇವತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರೆ, ಶ್ರೀತೇಜ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೀಗ ಈ ದುರಂತದ ಕುರಿತು ನಟ ಅಲ್ಲು ಅರ್ಜುನ್ ತಂಡ ಪ್ರತಿಕ್ರಿಯೆ ನೀಡಿದ್ದು, 'ಈ ದುರಂತ ದುರಾದೃಷ್ಟಕರ. ಸದ್ಯ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕುಟುಂಬಕ್ಕೆ ಅಗತ್ಯ ನೆರವು ನೀಡುತ್ತೇವೆ ಎಂದು ಹೇಳಿದೆ.

ಸತ್ತಿಲ್ಲ.. ಸುಳ್ಳುಸುದ್ದಿ ಹರಡಬೇಡಿ

ಅಂತೆಯೇ ಬಾಲಕನ ಆರೋಗ್ಯದ ಕುರಿತು ಸುಳ್ಳು ಸುದ್ದಿ ಹಬ್ಬಿಸದಂತೆ ಮನವಿ ಮಾಡಲಾಗಿದ್ದು, 'ಗಾಯಗೊಂಡ ಬಾಲಕ ಶ್ರೀತೇಜ್ ಕಿಮ್ಸ್​​​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 78 ಗಂಟೆ ಕಳೆಯೋವರೆಗೂ ಬಾಲಕನ ಆರೋಗ್ಯದ ಬಗ್ಗೆ ಏನೂ ಹೇಳಲಾಗದು. ಸದ್ಯ ಶ್ರೀತೇಜ್‌ಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆದ್ರೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಹಲವು ಯೂಟ್ಯೂಬ್ ಚಾನಲ್​​ಗಳು ಬಾಲಕ ಮೃತಪಟ್ಟಿದ್ದಾನೆ ಎಂದು ಸುಳ್ಳು ಸುದ್ದಿ ಹರಡಿಸಲಾಗುತ್ತಿದೆ. ಈ ಬಗ್ಗೆ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ದಯವಿಟ್ಟು ಇಂತಹ ಸುದ್ದಿಗಳನ್ನು ಪ್ರಸಾರ ಮಾಡಬೇಡಿ ಎಂದು ತಂಡ ಮನವಿ ಮಾಡಿದೆ.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಚಿತ್ರ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀಸ್, ''ಕಳೆದ ರಾತ್ರಿಯ ಸ್ಕ್ರೀನಿಂಗ್ ಸಮಯದಲ್ಲಿ ಸಂಭವಿಸಿರುವ ದುರಂತ ನಮಗೆ ತೀವ್ರ ದುಃಖ ನೀಡಿದೆ. ನಮ್ಮ ಪ್ರಾರ್ಥನೆ ಆ ಕುಟುಂಬ ಮತ್ತು ಚಿಕಿತ್ಸೆಗೊಳಗಾಗಿರುವ ಚಿಕ್ಕ ಮಗುವಿನೊಂದಿಗಿದೆ. ಈ ಕಠಿಣ ಸಂದರ್ಭ ಅವರೊಂದಿಗೆ ನಿಲ್ಲಲು, ಸಾಧ್ಯವಿರುವ ಎಲ್ಲಾ ಬೆಂಬಲ ನೀಡಲು ನಾವು ಬದ್ಧರಾಗಿದ್ದೇವೆ' ಎಂದು ಬರೆದುಕೊಂಡಿದ್ದಾರೆ.

ಇನ್ನು ಸಂಧ್ಯಾ ಥಿಯೇಟರ್​​ನಲ್ಲಾದ ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆಂದು ವರದಿಯಾಗಿದೆ. ಈ ಕುರಿತು ಚಿಕ್ಕಡಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT