ದೇವೇಂದ್ರ ಫಡ್ನವೀಸ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾದ ನಂತರ ಬೆಂಬಲಿಗರು ಸಿಹಿತಿಂಡಿಗಳೊಂದಿಗೆ ಸಂಭ್ರಮಾಚರಿಸಿದರು.  
ದೇಶ

ಪ್ರಮಾಣವಚನಕ್ಕೆ ಕೆಲವೇ ಗಂಟೆಗಳು ಬಾಕಿ: ಮಹಾಯುತಿ ಸರ್ಕಾರದ ಭಾಗವಾಗುತ್ತಾರೆಯೇ ಏಕನಾಥ್ ಶಿಂಧೆ? ಕುತೂಹಲ ಉಳಿಸಿಕೊಂಡ ಶಿವಸೇನೆ ನಾಯಕ

ನಿನ್ನೆ ಸುದ್ದಿಗೋಷ್ಠಿ ವೇಳೆ ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ದೇವೇಂದ್ರ ಫಡ್ನವೀಸ್ ಮತ್ತು ಹೊಸ ಮಹಾಯುತಿ ಸರ್ಕಾರಕ್ಕೆ ತಮ್ಮ ಬೆಂಬಲವನ್ನು ಸಂತೋಷದಿಂದ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿಯಾಗಿ ಎನ್‌ಸಿಪಿ ನಾಯಕ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿರುವುದು. ಹಂಗಾಮಿ ಸಿಎಂ ಏಕನಾಥ್ ಶಿಂಧೆ ಅವರು ಮತ್ತೊಬ್ಬ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಬಗ್ಗೆ ಸ್ಪಷ್ಟತೆ ಇಲ್ಲ.

ನಿನ್ನೆ ಸುದ್ದಿಗೋಷ್ಠಿ ವೇಳೆ ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ದೇವೇಂದ್ರ ಫಡ್ನವೀಸ್ ಮತ್ತು ಹೊಸ ಮಹಾಯುತಿ ಸರ್ಕಾರಕ್ಕೆ ತಮ್ಮ ಬೆಂಬಲವನ್ನು ಸಂತೋಷದಿಂದ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು, ಆದರೆ ಅವರು ಡಿಸಿಎಂ ಆಗಿ ಹೊಸ ಸರ್ಕಾರದ ಭಾಗವಾಗುತ್ತಾರೆಯೇ ಎಂದು ಕೇಳಿದಾಗ ಉತ್ತರಿಸಲಿಲ್ಲ. ಈ ಬಗ್ಗೆ ಯೋಚಿಸಲು ಸಮಯಾವಕಾಶ ಬೇಕಿದ್ದು, ಬೆಂಬಲಿಗರ ಸಲಹೆ ಪಡೆದು ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಮತ್ತೊಂದೆಡೆ, ದೇವೇಂದ್ರ ಫಡ್ನವೀಸ್ ಅವರು ತಮ್ಮ ಸರ್ಕಾರದಲ್ಲಿ ಏಕನಾಥ್ ಶಿಂಧೆ ಅವರು ಕೂಡ ಇರಬೇಕೆಂದು ಬಯಸುತ್ತಿರುವುದಾಗಿ ಹೇಳಿದರು. ಮಹಾಯುತಿಯ ಮೂವರೂ ನಾಯಕರು ದೊಡ್ಡ ಗುರಿಯೊಂದಿಗೆ ಸರ್ಕಾರದಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದು, ಶಿಂಧೆ ಕೂಡ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಭರವಸೆ ಇದೆ ಎಂದರು.

ಶಿಂಧೆ ಅವರು ಫಡ್ನವಿಸ್ ನೇತೃತ್ವದ ಸರ್ಕಾರದಲ್ಲಿ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಬಯಸುತ್ತಾರೆ, ಆದರೆ ಗೃಹ ಖಾತೆಯನ್ನು ನೀಡಬೇಕು ಮತ್ತು ಅವರ ಸಚಿವಾಲಯದಲ್ಲಿ ಯಾವುದೇ ಹಸ್ತಕ್ಷೇಪ ಮಾಡಬಾರದು ಎಂದು ಷರತ್ತು ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಿವಸೇನೆಯಿಂದ ಸಂಭಾವ್ಯ ಸಚಿವರ ಪಟ್ಟಿಯನ್ನು ಫಡ್ನವೀಸ್ ಅವರಿಗೆ ಹಸ್ತಾಂತರಿಸಲಾಗಿದೆ. ಆದರೆ ಫಡ್ನವೀಸ್ ಅವರು ಬಿಜೆಪಿಯ ಉನ್ನತ ನಾಯಕತ್ವದೊಂದಿಗೆ ಮಾತನಾಡುತ್ತಾರೆ ಮತ್ತು ಗೃಹ ಸಚಿವಾಲಯವನ್ನು ಬಿಟ್ಟುಕೊಡಲು ಹಾಗೂ ಶಿವಸೇನೆಯ ಶಾಸಕರಿಗೆ ಖಾತೆಗಳನ್ನು ನೀಡುವುದನ್ನು ಹಿಂತಿರುಗಿಸುವುದಾಗಿ ಶಿಂಧೆ ಅವರಿಗೆ ತಿಳಿಸಿದ್ದಾರೆ ಎಂದು ಶಿವಸೇನೆಯ ಮೂಲಗಳು ತಿಳಿಸಿವೆ.

ಹೊಸ ಸರ್ಕಾರದ ಭಾಗವಾಗುವಂತೆ ಶಿಂಧೆ ಅವರನ್ನು ವಿನಂತಿಸುತ್ತಿದ್ದೇವೆ ಎಂದು ಶಿವಸೇನಾ ಶಾಸಕ ಮತ್ತು ಮಾಜಿ ಸಚಿವ ಉದಯ್ ಸಾಮಂತ್ ಹೇಳಿದ್ದಾರೆ. ಶಿಂಧೆ ಅವರು ನಮ್ಮ ಮಾತನ್ನು ಕೇಳುತ್ತಾರೆ ಮತ್ತು ಸರ್ಕಾರದ ಭಾಗವಾಗುತ್ತಾರೆ ಎಂಬ ಭರವಸೆ ನಮಗಿದೆ ಎಂದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅಜಿತ್ ಪವಾರ್, ಏಕನಾಥ್ ಶಿಂಧೆ ಬಗ್ಗೆ ನನಗೆ ತಿಳಿದಿಲ್ಲ, ಆದರೆ ಅವರು ಡಿಸೆಂಬರ್ 5 ರಂದು ಆಜಾದ್ ಮೈದಾನದಲ್ಲಿ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹಾಸ್ಯಭರಿತವಾಗಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು. ಅದಕ್ಕೆ ತಕ್ಷಣ ಪ್ರತಿಕ್ರಿಯಿಸಿದ ಏಕನಾಥ್ ಶಿಂಧೆ, ಅಜಿತ್ ಪವಾರ್ ಅವರು ಬೆಳಗ್ಗೆ-ಸಂಜೆ ಯಾವಾಗ ಬೇಕಾದರೂ ಪ್ರಮಾಣವಚನ ಸ್ವೀಕರಿಸುತ್ತಾರೆ. ಹೀಗಾಗಿ ಈ ಬಾರಿಯೂ ಅವರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಪ್ರತಿಕ್ರಿಯಿಸಿದರು.

ಏಕನಾಥ್ ಶಿಂಧೆ ಹೊಸ ಮಹಾಯುತಿ ಸರ್ಕಾರಕ್ಕೆ ಡಿಸಿಎಂ ಆಗಲಿದ್ದಾರೆ ಎಂದು ಬಿಜೆಪಿ ಮೂಲಗಳು ವಿಶ್ವಾಸ ವ್ಯಕ್ತಪಡಿಸಿವೆ. ಹೊಸ ಸರ್ಕಾರದ ಭಾಗವಾಗುವಂತೆ ಶಿಂಧೆ ಮೇಲೆ ಅವರದೇ ಶಾಸಕರು ಮತ್ತು ಮಾಜಿ ಸಚಿವರು ಒತ್ತಡ ಹೇರುತ್ತಿದ್ದಾರೆ. ಬಿಜೆಪಿಯು ಗೃಹ ಸಚಿವಾಲಯದ ಬದಲು ನಗರಾಭಿವೃದ್ಧಿ ಮತ್ತು ಕಂದಾಯ ಖಾತೆಯನ್ನು ನೀಡಲು ಮುಂದಾಗಿದೆ, ಅವರು ಒಪ್ಪಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಶಿಂಧೆ ಅವರು ಸಕಾರಾತ್ಮಕ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಬಿಜೆಪಿ ಮುಖಂಡರೊಬ್ಬರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT