ಲೋಕಸಭೆ ಕಲಾಪ 
ದೇಶ

NDA, ವಿಪಕ್ಷ ಸಂಸದರ ನಡುವೆ ವಾಗ್ಯುದ್ಧ: ಡಿಸೆಂಬರ್ 9 ರವರೆಗೆ ಲೋಕಸಭೆ ಕಲಾಪ ಮುಂದೂಡಿಕೆ

ಅಮೆರಿಕ ಮೂಲದ ಬಿಲಿಯನರ್ ಹೂಡಿಕೆದಾರ ಜಾರ್ಜ್ ಸೊರೊಸ್ ಜೊತೆಗೆ ಕಾಂಗ್ರೆಸ್ ನಂಟು ಹೊಂದಿದೆ ಎಂದು ಬಿಜೆಪಿ ಆರೋಪದೊಂದಿಗೆ ಸದನದಲ್ಲಿ ಗದ್ದಲ, ಕೋಲಾಹಲವೇರ್ಪಟ್ಟು, ಸ್ಪೀಕರ್ ಓಂ ಬಿರ್ಲಾ ಸೋಮವಾರದವರೆಗೂ ಕಲಾಪವನ್ನು ಮುಂದೂಡಿದರು.

ನವದೆಹಲಿ: ಲೋಕಸಭೆಯಲ್ಲಿ ಶುಕ್ರವಾರ ಬೆಳಗ್ಗೆ ಬಿಜೆಪಿ ಹಾಗೂ ಪ್ರತಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ಉಂಟಾದ ಹಿನ್ನೆಲೆಯಲ್ಲಿ ಮಧ್ಯಾಹ್ನದವರೆಗೂ ಮುಂದೂಡಲಾಗಿತ್ತು.

ಬಳಿಕ ಸದನ ಸಮಾವೇಶಗೊಂಡಾಗಲೂ ಅಮೆರಿಕ ಮೂಲದ ಬಿಲಿಯನರ್ ಹೂಡಿಕೆದಾರ ಜಾರ್ಜ್ ಸೊರೊಸ್ ಜೊತೆಗೆ ಕಾಂಗ್ರೆಸ್ ನಂಟು ಹೊಂದಿದೆ ಎಂದು ಬಿಜೆಪಿ ಆರೋಪದೊಂದಿಗೆ ಸದನದಲ್ಲಿ ಗದ್ದಲ, ಕೋಲಾಹಲವೇರ್ಪಟ್ಟು, ಸ್ಪೀಕರ್ ಓಂ ಬಿರ್ಲಾ ಸೋಮವಾರದವರೆಗೂ ಕಲಾಪವನ್ನು ಮುಂದೂಡಿದರು.

ಪ್ರಶ್ನೋತ್ತರ ವೇಳೆಯಲ್ಲಿ ವಿರೋಧ ಪಕ್ಷದ ಸಂಸದರು ತಮ್ಮ ವಿಷಯಗಳನ್ನು ಪ್ರಸ್ತಾಪಿಸಲು ಪ್ರಯತ್ನಿಸಿದ ನಂತರ ಸದನದ ಘಟನೆ ಕುಗ್ಗಿಸಲು ಅವಕಾಶ ನೀಡುವುದಿಲ್ಲ ಎಂದು ಸ್ಪೀಕರ್ ಹೇಳುವುದರೊಂದಿಗೆ ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 12 ಕ್ಕೆ ಮುಂದೂಡಲಾಯಿತು.

ಬಹುತೇಕ ಕಾಂಗ್ರೆಸ್ ಸದಸ್ಯರು ಕೆಲವು ವಿಷಯಗಳನ್ನು ಪ್ರಸ್ತಾಪಿಸಲು ಪ್ರಯತ್ನಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್ ಇದು ಪ್ರಶ್ನೋತ್ತರ ಸಮಯವಾಗಿರುವುದರಿಂದ ಇತರ ವಿಷಯಗಳ ಚರ್ಚೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿ ಸದನವನ್ನು ಮುಂದೂಡಿದರು.

ಅದಾನಿ ಸಮೂಹ ಮತ್ತು ಸಂಭಾಲ್ ಹಿಂಸಾಚಾರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಲು ಒತ್ತಾಯಿಸಿ ಪ್ರತಿಪಕ್ಷಗಳ ಪ್ರತಿಭಟನೆಯಿಂದಾಗಿ ಚಳಿಗಾಲದ ಅಧಿವೇಶನದ ಮೊದಲ ವಾರ ಸದನ ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಲಿಲ್ಲ. ಆದರೂ ಮಂಗಳವಾರ ಮತ್ತು ಬುಧವಾರ ಸರಿಯಾಗಿ ಕಾರ್ಯನಿರ್ವಹಿಸಿತು.

ಬಿಜೆಪಿ ಸದಸ್ಯ ನಿಶಿಕಾಂತ್ ದುಬೆ ವಿದೇಶಿ ಹೂಡಿಕೆದಾರ ಜಾರ್ಜ್ ಸೊರೊಸ್ ಮತ್ತು ವಿರೋಧ ಪಕ್ಷದ ನಾಯಕರ ನಡುವೆ ಸಂಬಂಧವಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಭಾರತದ ಯಶಸ್ಸನ್ನು ಹಾಳು ಮಾಡಲು ಅಂತರರಾಷ್ಟ್ರೀಯ ಪಿತೂರಿ ನಡೆಯುತ್ತಿದೆ ಎಂದು ಹೇಳಿದ ನಂತರ ಸದನದಲ್ಲಿ ತೀವ್ರ ಗದ್ದಲ ಉಂಟಾಗಿತ್ತು.

ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಮತ್ತಿತರರು ದುಬೆ ಮಾಡಿದ ಆರೋಪಗಳನ್ನು ಎದುರಿಸಲು ಪ್ರಯತ್ನಿಸಿದರು, ಇದು ಕೋಲಾಹಲಕ್ಕೆ ಕಾರಣವಾಯಿತು ಮತ್ತು ಸದನವನ್ನು ಮುಂದೂಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT