ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಬಿಹಾರ: ಹೊಟ್ಟೆಗೆ ಗುಂಡು ಹೊಕ್ಕಿದ್ದರೂ ಪ್ರಯಾಣಿಕರ ಸುರಕ್ಷತೆಗಾಗಿ ವಾಹನ ಚಲಾಯಿಸಿದ ಚಾಲಕ!

ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಜೌನ್ ಗ್ರಾಮದ ಬಳಿ ವಾಹನವನ್ನು ಹಿಂಬಾಲಿಸಿ, ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಚಾಲಕ ಸಂತೋಷ್ ಸಿಂಗ್ ಅವರ ಹೊಟ್ಟೆಗೆ ಗುಂಡು ತಗುಲಿದೆ.

ಸಾಂದರ್ಭಿಕ ಚಿತ್ರ
Lingaraj Badiger
Updated On : 7 Dec 2024, 3:55 pm

ಅರಾ: ಬಿಹಾರದ ಭೋಜ್‌ಪುರ ಜಿಲ್ಲೆಯಲ್ಲಿ ಜೀಪ್ ಚಾಲಕ ಸಂತೋಷ್ ಸಿಂಗ್ ಅವರು ತಮ್ಮ ಹೊಟ್ಟೆಗೆ ಗುಂಡು ಹೊಕ್ಕಿದ್ದರೂ ಕೆಲವು ಕಿಲೋಮೀಟರ್‌ಗಳವರೆಗೆ ವಾಹನವನ್ನು ಚಲಾಯಿಸುವ ಮೂಲಕ ಪ್ರಯಾಣಿಕರನ್ನು ಸುರಕ್ಷತಿವಾಗಿ ರಕ್ಷಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಸಿಂಗ್ ತನ್ನ ಜೀಪಿನಲ್ಲಿ 14-15 ಜನರೊಂದಿಗೆ 'ತಿಲಕ್' ಸಮಾರಂಭದಿಂದ ಹಿಂದಿರುಗುತ್ತಿದ್ದಾಗ, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಜೌನ್ ಗ್ರಾಮದ ಬಳಿ ವಾಹನವನ್ನು ಹಿಂಬಾಲಿಸಿ, ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಚಾಲಕ ಸಂತೋಷ್ ಸಿಂಗ್ ಅವರ ಹೊಟ್ಟೆಗೆ ಗುಂಡು ತಗುಲಿದೆ.

ಸಿಂಗ್ ದಾಳಿಯಲ್ಲಿ ಗಾಯಗೊಂಡಿದ್ದರೂ ವಾಹನವನ್ನು ನಿಲ್ಲಿಸದೇ ನೋವಿನಲ್ಲೇ ಪ್ರಯಾಣಿಕರ ಸುರಕ್ಷತೆ ಖಾತ್ರಿಪಡಿಸಿಕೊಳ್ಳಲು ಕೆಲವು ಕಿಲೋಮೀಟರ್ಗಳಷ್ಟು ದೂರ ವಾಹನ ಓಡಿಸುತ್ತಲೇ ಇದ್ದರು. ಅಂತಿಮವಾಗಿ ಸಿಂಗ್ ವಾಹನವನ್ನು ಸುರಕ್ಷಿತ ಸ್ಥಳದಲ್ಲಿ ನಿಲ್ಲಿಸಿದರು ಎಂದು ಪೊಲೀಸರು ಹೇಳಿದ್ದಾರೆ.

Advertisement

Advertisement

Also Read

ಬಿಹಾರ: ರೈಲು ಬೋಗಿ ಜೋಡಣೆ ನಡುವೆ ಸಿಲುಕಿ ಕಾರ್ಮಿಕ ನಜ್ಜುಗುಜ್ಜು; ಸಾವು

ನಂತರ ಜೀಪಿನಲ್ಲಿದ್ದ ಇತರೆ ಪ್ರಯಾಣಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಸಿಂಗ್ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು.

ಬುಧವಾರ ಮತ್ತು ಗುರುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಅರಾದಲ್ಲಿರುವ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ನಂತರ ಸಿಂಗ್ ಅವರ ಹೊಟ್ಟೆ ಹೊಕ್ಕಿದ್ದ ಬುಲೆಟ್ ಅನ್ನು ಹೊರ ತೆಗೆಯಲಾಗಿದೆ.

"ಸಿಂಗ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಅವರು ಇನ್ನೂ ಕೆಲವು ದಿನಗಳವರೆಗೆ ವೈದ್ಯರ ಮೇಲ್ವಿಚಾರಣೆಯಲ್ಲಿರುತ್ತಾರೆ" ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ರಾಜೀವ್ ಚಂದ್ರ ಸಿಂಗ್ ಶನಿವಾರ PTI ಗೆ ತಿಳಿಸಿದ್ದಾರೆ.

ಸಿಂಗ್ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಎಸ್‌ಡಿಪಿಒ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement