ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ 
ದೇಶ

ದೆಹಲಿ ಚುನಾವಣೆ: 20 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ AAP; ಜಂಗ್‌ಪುರ ಕ್ಷೇತ್ರದಿಂದ ಮನೀಶ್ ಸಿಸೋಡಿಯಾ

ಇತ್ತೀಚೆಗಷ್ಟೇ ಎಎಪಿಗೆ ಸೇರ್ಪಡೆಗೊಂಡಿರುವ ಶಿಕ್ಷಣತಜ್ಞ ಅವಧ್ ಓಜಾ ಅವರನ್ನು ಪ್ರಸ್ತುತ ವಿಧಾನಸಭೆಯಲ್ಲಿ ಸಿಸೋಡಿಯಾ ಹೊಂದಿರುವ ಪಟ್ಪರ್ಗಂಜ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷವು(AAP) ಇಂದು ಸೋಮವಾರ ತನ್ನ 20 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದ್ದು, ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಜಂಗ್‌ಪುರ ಕ್ಷೇತ್ರದಿಂದ ಕಣಕ್ಕಿಳಿಸಿದೆ.

ಇತ್ತೀಚೆಗಷ್ಟೇ ಎಎಪಿಗೆ ಸೇರ್ಪಡೆಗೊಂಡಿರುವ ಶಿಕ್ಷಣತಜ್ಞ ಅವಧ್ ಓಜಾ ಅವರನ್ನು ಪ್ರಸ್ತುತ ವಿಧಾನಸಭೆಯಲ್ಲಿ ಸಿಸೋಡಿಯಾ ಹೊಂದಿರುವ ಪಟ್ಪರ್ಗಂಜ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

ಈ ಪಟ್ಟಿಯಲ್ಲಿ ಜಿತೇಂದರ್ ಸಿಂಗ್ ಶುಂಟಿ(ಶಹದಾರದಿಂದ ಕಣಕ್ಕಿಳಿದಿದ್ದಾರೆ) ಮತ್ತು ಸುರೀಂದರ್ ಪಾಲ್ ಸಿಂಗ್ ಬಿಟ್ಟು (ತಿಮಾರ್‌ಪುರ್) ಅವರ ಹೆಸರುಗಳೂ ಸೇರಿವೆ, ಅವರು ಇತ್ತೀಚೆಗೆ ಬಿಜೆಪಿಯನ್ನು ತೊರೆದು ಎಎಪಿ ಸೇರಿದ್ದಾರೆ.

ಹಾಲಿ ಎಎಪಿ ಶಾಸಕ ಮತ್ತು ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಬದಲಿಗೆ ಷಂಟಿ ಅವರ ಕ್ಷೇತ್ರದಲ್ಲಿ ನಿಲ್ಲಿಸಿದರೆ, ಸದನದಲ್ಲಿ ಎಎಪಿಯ ಮುಖ್ಯ ಸಚೇತಕ ದಿಲೀಪ್ ಪಾಂಡೆ ಬದಲಿಗೆ ಸುರೀಂದರ್ ಪಾಲ್ ಸಿಂಗ್ ಬಿಟ್ಟು ಅವರನ್ನು ಕಣಕ್ಕಿಳಿಸಲಾಗಿದೆ.

ಎಎಪಿ ತನ್ನ ಮೊದಲ ಪಟ್ಟಿಯಲ್ಲಿ 11 ಅಭ್ಯರ್ಥಿಗಳನ್ನು ಘೋಷಿಸಿತ್ತು. 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿಗೆ ಮುನ್ನ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!