ಕಾರಿಗೆ ಡಿಕ್ಕಿ ಹೊಡೆದಿರುವ ಬಸ್ 
ದೇಶ

Mumbai: ಬ್ರೇಕ್ ಫೇಲ್ ಆಗಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಸ್; 25 ಮಂದಿಗೆ ಗಾಯ, ನಾಲ್ವರ ದುರ್ಮರಣ

ಕುರ್ಲಾದ ಬೃಹನ್‌ ಮುಂಬೈ ಮುನಿಸಿಪಲ್ ಕಾರ್ಪೊರೇಷನ್ (ಬಿಎಂಸಿ) ಎಲ್ ವಾರ್ಡ್ ಬಳಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದ್ದು, ಘಟನೆ ಸಂಬಂಧ ಬಸ್ ಚಾಲಕನನ್ನು ಬಂಧನಕ್ಕೊಳಪಡಿಸಲಾಗಿದೆ.

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬ್ರೇಕ್ ಫೇಲ್ ಆದ ಪರಿಣಾಮ ಪಾದಚಾರಿಗಳಿಗೆ ಬಸ್ ವೊಂದು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 25 ಮಂದಿ ಗಂಭೀರವಾಗಿ ಗಾಯಗೊಂಡು, ನಾಲ್ವರು ಸ್ಥಳದಲ್ಲೇ ದುರ್ಮರಣವನ್ನಪ್ಪಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಕುರ್ಲಾದ ಬೃಹನ್‌ ಮುಂಬೈ ಮುನಿಸಿಪಲ್ ಕಾರ್ಪೊರೇಷನ್ (ಬಿಎಂಸಿ) ಎಲ್ ವಾರ್ಡ್ ಬಳಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದ್ದು, ಘಟನೆ ಸಂಬಂಧ ಬಸ್ ಚಾಲಕನನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಅಂಡ್ ಟ್ರಾನ್ಸ್‌ಪೋರ್ಟ್ (ಬೆಸ್ಟ್) ಸಂಸ್ಥೆಗೆ ಸೇರಿದ ಬಸ್ ಇದಾಗಿದ್ದು, ನೋಂದಣಿ ಸಂಖ್ಯೆ MH01-EM-8228 ರ ಬಸ್ ಕುರ್ಲಾ ರೈಲು ನಿಲ್ದಾಣದಿಂದ ಅಂಧೇರಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಮಾರ್ಗ ಸಂಖ್ಯೆ 332 ರ ಬಳಿ ಚಾಲಕ ಬಸ್ ಮೇಲಿನ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ. ಈ ವೇಳೆ ಬಸ್ ಪಾದಚಾರಿಗಳಿಗೆ ಮತ್ತು ಕೆಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಗಾಯಗೊಂಡ 25 ಮಂದಿಯನ್ನು ಸ್ಥಳೀಯ ಬಾಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯಲ್ಲಿ ಹಲವು ವಾಹನಗಳು ಜಖಂಗೊಂಡಿವೆ ಎಂದು ಹೇಳಿದ್ದಾರೆ.

ನಾನು ನನ್ನ ಸ್ನೇಹಿತರೊಂದಿಗೆ ರಾಯಲ್ ಸ್ವೀಟ್ಸ್ ಅಂಗಡಿಯ ಮುಂದೆ ನಿಂತಿದ್ದಾಗ ವೇಗವಾಗಿ ಬಂದ ಬಸ್ ಏಕಾಏಕಿ ಹಲವು ವಾಹನಗಳಿಗೆ ಹಾಗೂ ಪಾದಚಾರಿಗಳಿಗ ಗುದ್ದಿತು. ಬಳಿಕ ಬುದ್ಧ ಕಾಲೋನಿಗೆ ಪ್ರವೇಶಿಸಿತು. ಕೂಡಲೇ ಸ್ಥಳಕ್ಕೆ ತೆರಳಿ ಬಸ್ ಚಾಲಕನನ್ನು ವಾಹನದಿಂದ ಹೊರಗೆ ತಂದೆವು. ಘಟನೆ ಬಳಿಕ ಹಲವರು ರಕ್ತಸಿಕ್ತರಾಗಿ ಕೆಳಗೆ ಬಿದ್ದಿದ್ದರು. ಸಾಕಷ್ಟು ಜನರು ಸ್ಥಳ ಸೇರಿದ್ದರು. ಬಳಿಕ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದವು ಎಂದು ಪ್ರತ್ಯಕ್ಷದರ್ಶಿ ಝೀಶನ್ ಅನ್ಸಾರಿ ಎಂಬುವವರು ಹೇಳಿದ್ದಾರೆ.

ಮನೆಯಿಂದ ರೈಲ್ವೇ ನಿಲ್ದಾಣಕ್ಕೆ ಹೋಗುವಾಗ ಹಲವರು ಕೂಗಾಡುತ್ತಿದ್ದ ಶಬ್ದ ಕೇಳಿಸಿತು. ಸ್ಥಳಕ್ಕೆ ಹೋಗಿ ನೋಡಿದಾಗ ಬಸ್ ಪಾದಚಾರಿಗಳಿಗೆ, ಆಟೋರಿಕ್ಷಾ ಮತ್ತು ಮೂರು ಕಾರುಗಳು ಸೇರಿದಂತೆ ಇತರ ವಾಹನಗಳಿಗೆ ಡಿಕ್ಕಿ ಹೊಡೆದಿರುವುದು ಕಂಡು ಬಂದಿತು. ನನ್ನ ಕಣ್ಣು ಮುಂದೆ ಕೆಲವು ಮೃತ ಪಟ್ಟಿದ್ದನ್ನು ನೋಡಿದೆವು. ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ ಭಾಭಾ ಆಸ್ಪತ್ರೆಗೆ ಕರೆದೊಯ್ದೆವು. ಮತ್ತೊಂದು ವಾಹನದಲ್ಲಿ ನನ್ನ ಸ್ನೇಹಿತರು ಗಾಯಗೊಂಡವರಿಗೆ ಸಹಾಯ ಮಾಡಿದರು ಎಂದು ಮತ್ತೊಬ್ಬ ಪ್ರತ್ಯಕ್ಷದರ್ಶಿ ಅಹ್ಮದ್ ಎಂಬುವವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel