ರೈತರ ಪ್ರತಿಭಟನೆ(ಸಂಗ್ರಹ ಚಿತ್ರ) ANI photos
ದೇಶ

ರೈತರ 'ದಿಲ್ಲಿ ಚಲೋ' ಪಾದಯಾತ್ರೆ ಡಿಸೆಂಬರ್ 14 ರಂದು ಪುನರಾರಂಭ

ಸರ್ಕಾರದ ಕಡೆಯಿಂದ ಮಾತುಕತೆಗೆ ಯಾವುದೇ ಸಂದೇಶ ಬಂದಿಲ್ಲವಾದ್ದರಿಂದ ಪ್ರತಿಭಟನಾ ನಿರತ ರೈತರು ಡಿಸೆಂಬರ್ 14 ರಂದು ದೆಹಲಿಗೆ ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಲಿದ್ದಾರೆ.

ಚಂಡೀಗಢ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್​ಪಿ)ಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಡಿಸೆಂಬರ್ 14 ರಂದು 'ದಿಲ್ಲಿ ಚಲೋ' ಪುನರಾರಂಭಿಸಲಿದ್ದಾರೆ ಎಂದು ಪಂಜಾಬ್ ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಅವರು ಮಂಗಳವಾರ ಹೇಳಿದ್ದಾರೆ.

ಸರ್ಕಾರದ ಕಡೆಯಿಂದ ಮಾತುಕತೆಗೆ ಯಾವುದೇ ಸಂದೇಶ ಬಂದಿಲ್ಲವಾದ್ದರಿಂದ ಪ್ರತಿಭಟನಾ ನಿರತ ರೈತರು ಡಿಸೆಂಬರ್ 14 ರಂದು ದೆಹಲಿಗೆ ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಲಿದ್ದಾರೆ ಎಂದು ಪಂಧೇರ್ ತಿಳಿಸಿದ್ದಾರೆ.

ಇಂದು ನಡೆದ ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸಭೆಯಲ್ಲಿ 'ದಿಲ್ಲಿ ಚಲೋ' ಪಾದಯಾತ್ರೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ಶಂಭು ಗಡಿ ಪ್ರತಿಭಟನಾ ಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಂಧೇರ್, "ರೈತರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸರ್ಕಾರದೊಂದಿಗೆ ಮಾತುಕತೆ ನಡೆಸಲು ಬಯಸುವುದಿಲ್ಲ ಎಂದು ದೂರುವುದು ಸರಿಯಲ್ಲ. ನಾವು ಸಮಯ ನೀಡಿದ್ದೇವೆ ... ಆದರೆ ಮಾತುಕತೆಗಾಗಿ ಸರ್ಕಾರ(ಕೇಂದ್ರ)ದ ಕಡೆಯಿಂದ ಯಾವುದೇ ಸಂದೇಶ ಬಂದಿಲ್ಲ" ಎಂದರು.

"ಈಗ, ಎರಡೂ ವೇದಿಕೆಗಳು ತೆಗೆದುಕೊಂಡ ನಿರ್ಧಾರದಂತೆ 101 ರೈತರ ನಮ್ಮ ಮುಂದಿನ ಜಾಥಾ ಶಂಭು ಗಡಿಯಿಂದ ಡಿಸೆಂಬರ್ 14 ರಂದು ದೆಹಲಿಗೆ ಹೊರಡಲಿದೆ" ಎಂದು ಅವರು ಹೇಳಿದರು.

ಪಂಜಾಬ್-ಹರಿಯಾಣ ಗಡಿಯಲ್ಲಿ ಭದ್ರತಾ ಸಿಬ್ಬಂದಿ ಹಾರಿಸಿದ ಅಶ್ರುವಾಯು ಶೆಲ್‌ಗಳಿಂದ ಕೆಲವರು ಗಾಯಗೊಂಡ ನಂತರ ಪ್ರತಿಭಟನಾನಿರತ ರೈತರು ಶುಕ್ರವಾರ ರಾಷ್ಟ್ರ ರಾಜಧಾನಿಗೆ ತಮ್ಮ ಮೆರವಣಿಗೆಯನ್ನು ಸ್ಥಗಿತಗೊಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?