ಕಾಂಗ್ರೆಸ್ ಸಂಸದರ ಪ್ರತಿಭಟನೆ  online desk
ದೇಶ

ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ: ಕಪ್ಪು ಜೋಳಿಗೆ ಹಿಡಿದ ವಿಪಕ್ಷ ಸಂಸದರು

ಮೋದಿ- ಅದಾನಿ ಭಾಯಿ ಭಾಯಿ ಎಂದು ಬರೆದಿದ್ದ ಕಪ್ಪು ಜೋಳಿಗೆ ಹಿಡಿದು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ನವದೆಹಲಿ: ಸಂಸತ್ ನ ಚಳಿಗಾಲದ ಅಧಿವೇಶನದಲ್ಲಿ ಅದಾನಿ ವಿಷಯವಾಗಿ ಸರ್ಕಾರದ ವಿರುದ್ಧ ಮುಗಿಬಿದ್ದಿರುವ ವಿಪಕ್ಷಗಳ ಸಂಸದರು ಇಂದು ಸಂಸತ್ ಆವರಣದಲ್ಲಿ ವಿನೂತನ ಪ್ರತಿಭಟನೆ ನಡೆಸಿದರು.

ಮೋದಿ- ಅದಾನಿ ಭಾಯಿ ಭಾಯಿ ಎಂದು ಬರೆದಿದ್ದ ಕಪ್ಪು ಜೋಳಿಗೆ ಹಿಡಿದು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್, ಡಿಎಂಕೆ, ಜೆಎಂಎಂ, ಎಡಪಕ್ಷಗಳ ಸಂಸದರು ಮಕರ ದ್ವಾರದ ಮೆಟ್ಟಿಲುಗಳ ಮುಂದೆ ಪ್ರತಿಭಟನೆ ನಡೆಸಿದರು. ಒಂದು ಬದಿಯಲ್ಲಿ ಮೋದಿ ಮತ್ತು ಅದಾನಿ ಅವರ ವ್ಯಂಗ್ಯ ಚಿತ್ರಗಳು ಮತ್ತು ಬ್ಯಾಗ್‌ನ ಹಿಂಭಾಗದಲ್ಲಿ 'ಮೋದಿ ಅದಾನಿ ಭಾಯಿ ಭಾಯ್' ಎಂದು ಬರೆದ ಕಪ್ಪು 'ಜೋಳಿಗೆಗಳನ್ನು ಹಿಡಿದಿದ್ದ ಸಂಸದರು, ಮೋದಿ ಮತ್ತು ಅದಾನಿ ನಡುವಿನ ಆರೋಪದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಈ ವಿಷಯದ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಿದರು.

ಇದಕ್ಕೂ ಮುನ್ನ, ವಿವಿಧ ವಿಷಯಗಳ ಬಗ್ಗೆ ಪಕ್ಷದ ನಿಲುವು ಮತ್ತು ಸಂಸತ್ತಿನಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಲು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದರ ಸಭೆಯನ್ನು ಗಾಂಧಿ ಅಧ್ಯಕ್ಷತೆ ವಹಿಸಿದ್ದರು. ಅದಾನಿ ವಿವಾದಕ್ಕೆ ಸಂಬಂಧಿಸಿದಂತೆ ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಾಯಕರು ಸಂಸತ್ತಿನ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿದ ಒಂದು ದಿನದ ನಂತರ ಕಾಂಗ್ರೆಸ್ ಸಂಸದರು ಮತ್ತೊಮ್ಮೆ ಪ್ರತಿಭಟನೆ ನಡೆಸಿದ್ದಾರೆ.

ವಿಪಕ್ಷಗಳ ಸಂಸದರ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮೋದಿ ಮತ್ತು ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರ ಮುಖವಾಡಗಳನ್ನು ಧರಿಸಿರುವ ಕಾಂಗ್ರೆಸ್ ಸದಸ್ಯರೊಂದಿಗೆ ಅಣಕು 'ಸಂದರ್ಶನ' ನಡೆಸಿದರು.

ಚಳಿಗಾಲದ ಅಧಿವೇಶನ ಆರಂಭವಾದಾಗಿನಿಂದಲೂ ಅದಾನಿ ವಿಚಾರವಾಗಿ ಪ್ರತಿಪಕ್ಷಗಳ ಪ್ರತಿಭಟನೆಗಳು ಸಂಸತ್ತಿನ ಆವರಣದಲ್ಲಿ ನಡೆಯುತ್ತಿವೆ. ಅಮೇರಿಕಾ ನ್ಯಾಯಾಲಯದಲ್ಲಿ ಅದಾನಿ ಮತ್ತು ಇತರ ಕಂಪನಿಯ ಅಧಿಕಾರಿಗಳ ವಿರುದ್ಧ ದೋಷಾರೋಪಣೆ ಮಾಡಿದ ನಂತರ ಕಾಂಗ್ರೆಸ್ ಮತ್ತು ಇತರ ಕೆಲವು ವಿರೋಧ ಪಕ್ಷಗಳು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಒತ್ತಾಯಿಸುತ್ತಿವೆ.

ಕೋಟ್ಯಾಧಿಪತಿ ಕೈಗಾರಿಕೋದ್ಯಮಿಗಳ ಸಮೂಹವನ್ನು ಒಳಗೊಂಡಿರುವ ವಿವಿಧ "ವಂಚನೆಗಳ" ಕುರಿತು ಜೆಪಿಸಿ ತನಿಖೆಯ ತನ್ನ ಬೇಡಿಕೆಯನ್ನು ಅದಾನಿ ದೋಷಾರೋಪಣೆಯು "ಪುಷ್ಟೀಕರಿಸುತ್ತಿದೆ" ಎಂದು ಕಾಂಗ್ರೆಸ್ ಹೇಳಿದೆ.

ಅದಾನಿಯನ್ನು ಕೂಡಲೇ ಬಂಧಿಸುವಂತೆ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಅದಾನಿ ಗ್ರೂಪ್ ಎಲ್ಲಾ ಆರೋಪಗಳನ್ನು "ಆಧಾರರಹಿತ" ಎಂದು ತಳ್ಳಿಹಾಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT