ನವದೆಹಲಿ: ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯದೇ ಶ್ರಮಿಸಿದ್ದ ನಾಯಕ ಎಸ್.ಎಂ.ಕೃಷ್ಣ. ಅವರ ನಿಧನ ಅತೀವ ದುಃಖ ತಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ.
ಎಸ್.ಎಂ.ಕೃಷ್ಣ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕೃಷ್ಣ ಅವರೊಂದಿಗೆ ಕಳೆದ ಭಾವನಾತ್ಮಕ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡು, ಸಂತಾಪ ಸೂಚಿಸಿದ್ದಾರೆ.
ಎಸ್ಎಂ ಕೃಷ್ಣ ನಿಧನ ಅತೀವ ದುಃಖ ತಂದಿದೆ. ಕಳೆದ ಕೆಲ ವರ್ಷಗಳಲ್ಲಿ ಎಸ್ಎಂ ಕೃಷ್ಣ ಅವರ ಜೊತೆ ಮಾತನಾಡುವ, ಭೇಟಿ ಮಾಡುವ ಅವಕಾಶ ನನ್ನ ಪಾಲಿಗೆ ಒದಗಿ ಬಂದಿತ್ತು. ಅವರ ಕುಟುಂಬಕ್ಕೆ ಹಾಗೂ ಅಭಿಮಾನಿ ಬಳಗಕ್ಕೆ ಸಂತಾಪ ಸೂಚಿಸುತ್ತೇನೆ.
ಎಸ್ಎಂ ಕೃಷ್ಣ ಅಪ್ರತಿಮ ನಾಯಕನಾಗಿದ್ದರು. ಸಮಾಜ ಎಲ್ಲಾ ವರ್ಗದ ಜನರಿಂದ ಮೆಚ್ಚುಗೆಗೆ ಹಾಗೂ ಗೌರವಕ್ಕೆ ಪಾತ್ರರಾಗಿದ್ದ ನಾಯಕ. ಸಮಾಜ ಪ್ರತಿಯೊಬ್ಬರ ಜೀವನ ಸುಧಾರಣೆಗೆ ದಣಿವರಿಯದೇ ಶ್ರಮಿಸಿದ ನಾಯಕ ಎಸ್ಎಂ ಕೃಷ್ಣ. ಕರ್ನಾಟಕ ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದ ಮೂಲಭೂತ ಸೌಕರ್ಯದಲ್ಲಿ ಅಮೂಲಾಗ್ರ ಬದಲಾವಣೆಗೆ ನಾಂದಿ ಹಾಡಿದ್ದರು. ವಿಶೇಷ ಅಂದರೆ ಎಸ್ಎಂ ಕೃಷ್ಣ ಓದುಗ ಹಾಗೂ ಚಿಂತರಾಗಿದ್ದರು ಎಂದು ಹೇಳಿದ್ದಾರೆ.