ಫಾರೂಕ್ ಅಬ್ದುಲ್ಲಾ PTI
ದೇಶ

ಜಮ್ಮುವಿನಲ್ಲಿರುವ ರೋಹಿಂಗ್ಯಾ ನಿರಾಶ್ರಿತರಿಗೆ ನೀರು-ವಿದ್ಯುತ್ ಒದಗಿಸುವುದು ನಮ್ಮ ಜವಾಬ್ದಾರಿ: ಫಾರೂಕ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರದಲ್ಲಿ 13,700ಕ್ಕೂ ಹೆಚ್ಚು ವಿದೇಶಿ ನಿರಾಶ್ರಿತರು ನೆಲೆಸಿದ್ದಾರೆ. ಅವರಲ್ಲಿ ಹೆಚ್ಚಿನವರು ರೋಹಿಂಗ್ಯಾ (ಮ್ಯಾನ್ಮಾರ್‌ನಿಂದ ಬಂದ ಅಕ್ರಮ ವಲಸಿಗರು) ಮತ್ತು ಬಾಂಗ್ಲಾದೇಶಿ ಪ್ರಜೆಗಳು.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿರುವ ರೋಹಿಂಗ್ಯಾ ನಿರಾಶ್ರಿತರಿಗೆ ನೀರು ಮತ್ತು ವಿದ್ಯುತ್‌ನಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ಭಾರತ ಸರ್ಕಾರ ಈ ನಿರಾಶ್ರಿತರನ್ನು ಇಲ್ಲಿಗೆ ಕಳುಹಿಸಿದೆ. ನಾವು ಅವರನ್ನು ಕರೆತಂದಿಲ್ಲ. ಅವರು ಇಲ್ಲಿರುವವರೆಗೂ ಅವರಿಗೆ ನೀರು, ವಿದ್ಯುತ್ ಒದಗಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.

ಜಮ್ಮು ನಗರದಲ್ಲಿ ರೊಹಿಂಗ್ಯಾಗಳು ಮತ್ತು ಬಾಂಗ್ಲಾದೇಶೀಯರ ನೆಲೆಯನ್ನು ರಾಜಕೀಯ ಪಿತೂರಿ ಎಂದು ಬಿಜೆಪಿ ಬಣ್ಣಿಸಿದ್ದು ಈ ಬಗ್ಗೆ ಸಿಬಿಐ ತನಿಖೆಗೆ ನಡೆಸಬೇಕು ಎಂದು ಒತ್ತಾಯಿಸಿದ ಒಂದು ದಿನದ ನಂತರ ಫಾರೂಕ್ ಅಬ್ದುಲ್ಲಾ ಈ ಹೇಳಿಕೆ ನೀಡಿದ್ದಾರೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದಲ್ಲಿ 13,700ಕ್ಕೂ ಹೆಚ್ಚು ವಿದೇಶಿ ನಿರಾಶ್ರಿತರು ನೆಲೆಸಿದ್ದಾರೆ.

ಅವರಲ್ಲಿ ಹೆಚ್ಚಿನವರು ರೋಹಿಂಗ್ಯಾ (ಮ್ಯಾನ್ಮಾರ್‌ನಿಂದ ಬಂದ ಅಕ್ರಮ ವಲಸಿಗರು) ಮತ್ತು ಬಾಂಗ್ಲಾದೇಶಿ ಪ್ರಜೆಗಳು. 2008 ಮತ್ತು 2016ರ ನಡುವೆ ಅವರ ಸಂಖ್ಯೆ 6,000ಕ್ಕಿಂತ ಹೆಚ್ಚು ಹೆಚ್ಚಾಗಿದೆ. ಮಾರ್ಚ್ 2021ರಲ್ಲಿ, ಜಮ್ಮು ನಗರದಲ್ಲಿ ಪರಿಶೀಲನೆ ಕಾರ್ಯಾಚರಣೆಯಲ್ಲಿ 270ಕ್ಕೂ ಹೆಚ್ಚು ರೋಹಿಂಗ್ಯಾಗಳನ್ನು ಪೊಲೀಸರು ಬಂಧಿಸಿದರು. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಅಕ್ರಮವಾಗಿ ವಾಸಿಸುತ್ತಿರುವುದನ್ನು ಪತ್ತೆ ಹಚ್ಚಿ ಕತ್ರಾ ಉಪ ಜೈಲಿನಲ್ಲಿರುವ ಹಿಡುವಳಿ ಕೇಂದ್ರಕ್ಕೆ ಕಳುಹಿಸಿದ್ದಾರೆ.

ಫಾರೂಕ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯತ್ವವನ್ನು ಮರುಸ್ಥಾಪಿಸಬೇಕೆಂದು ಬಲವಾಗಿ ಪ್ರತಿಪಾದಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕೇವಲ ಒಂದು ಅಧಿಕಾರ ನಡೆಯಬೇಕು. ಇಲ್ಲಿ ಡಬಲ್ ಇಂಜಿನ್ ಸರ್ಕಾರ ಕೆಲಸ ನಡೆಯಲ್ಲ ಎಂದು ಹೇಳಿದರು. ರಾಜ್ಯ ಸ್ಥಾನಮಾನ ಮರುಸ್ಥಾಪಿಸಲಾಗುವುದು. ಇದು ಭಾರತ ಸರ್ಕಾರದ ಭರವಸೆ ಮತ್ತು ಇದನ್ನು ಸುಪ್ರೀಂ ಕೋರ್ಟ್‌ನ ಮುಂದೆಯೂ ಮಾಡಲಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ ಸರ್ಕಾರವನ್ನು ಟೀಕಿಸಿದ ಫಾರೂಕ್ ಅಬ್ದುಲ್ಲಾ, ಭಾರತ ಸರ್ಕಾರ ಈ ವಿಷಯದ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT