ಮಮತಾ ಬ್ಯಾನರ್ಜಿ- ವಿಪಕ್ಷ ನಾಯಕ ರಾಹುಲ್ ಗಾಂಧಿ online desk
ದೇಶ

INDIA ನಾಯಕತ್ವಕ್ಕೆ Mamata?: ಮೈತ್ರಿಕೂಟದ ಒಳಗೆ, ತಟಸ್ಥ ಪಕ್ಷಗಳಿಂದಲೂ ವ್ಯಾಪಕ ಬೆಂಬಲ!

ಎನ್ ಸಿಪಿ (ಎಸ್ ಪಿ) ನಾಯಕ ಶರದ್ ಪವಾರ್ ಸಹ ಮಮತಾ ಬ್ಯಾನರ್ಜಿ ನಾಯಕತ್ವಕ್ಕೆ ಬೆಂಬಲ ಸೂಚಿಸಿದ್ದರು.

ನವದೆಹಲಿ: INDIA ಮೈತ್ರಿಕೂಟವನ್ನು ಮುನ್ನಡೆಸುವ ಇಚ್ಛೆ ಹೊಂದಿರುವುದಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇತ್ತೀಚೆಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದರು.

ಈ ಹೇಳಿಕೆ ಬಂದಾಗಿನಿಂದ ಇಂಡಿ ಮೈತ್ರಿಕೂಟದ ಒಳಗೆ ಹಾಗೂ ಸದ್ಯಕ್ಕೆ ಯಾವುದೇ ಮೈತ್ರಿಕೂಟದಲ್ಲೂ ಗುರುತಿಸಿಕೊಳ್ಳದೇ ತಟಸ್ಥವಾಗಿ ಉಳಿದಿರುವ ಪಕ್ಷಗಳಿಂದಲೂ ಮಮತಾ ಬ್ಯಾನರ್ಜಿಗೆ ಭರಪೂರ ಬೆಂಬಲ ವ್ಯಕ್ತವಾಗತೊಡಗಿದೆ.

ಮಮತಾ ಬ್ಯಾನರ್ಜಿ INDIA ಮೈತ್ರಿಕೂಟವನ್ನು ಮುನ್ನಡೆಸಬೇಕೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಹೌದು ಮಮತಾ ಬ್ಯಾನರ್ಜಿ INDIA ಮೈತ್ರಿಕೂಟವನ್ನು ಮುನ್ನಡೆಸಬೇಕು, ಈ ವಿಚಾರದಲ್ಲಿ ಕಾಂಗ್ರೆಸ್ ನ ಆಕ್ಷೇಪಗಳಿಗೆ ಬೆಲೆ ಇಲ್ಲ ಎಂದು ಹೇಳಿದ್ದಾರೆ.

ಎನ್ ಸಿಪಿ (ಎಸ್ ಪಿ) ನಾಯಕ ಶರದ್ ಪವಾರ್ ಸಹ ಮಮತಾ ಬ್ಯಾನರ್ಜಿ ನಾಯಕತ್ವಕ್ಕೆ ಬೆಂಬಲ ಸೂಚಿಸಿದ್ದರು.

ಇವೆಲ್ಲದರ ನಡುವೆ, INDIA ಮೈತ್ರಿಕೂಟದಲ್ಲೇ ಇಲ್ಲದ ವೈಎಸ್ಆರ್ ಕಾಂಗ್ರೆಸ್ ಪಕ್ಷ ಸಹ ಮೈತ್ರಿಕೂಟದ ನಾಯಕತ್ವದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಇಂಡಿ ಮೈತ್ರಿಕೂಟ ಮುನ್ನಡೆಸಲು ಮಮತಾ ಬ್ಯಾನರ್ಜಿ ಅತ್ಯಂತ ಸಮರ್ಥ ವ್ಯಕ್ತಿ ಎಂದು ಹೇಳುವ ಮೂಲಕ ಆಕೆಗೆ ಬೆಂಬಲ ವ್ಯಕ್ತಪಡಿಸಿದೆ.

ಪಕ್ಷದ ರಾಜ್ಯಸಭಾ ಸಂಸದ ವಿಜಯಸಾಯಿ ರೆಡ್ಡಿ ಬ್ಯಾನರ್ಜಿ ಅವರು ಇಂಡಿ ಮಿತ್ರ ಪಕ್ಷಗಳನ್ನು ಉತ್ತಮವಾಗಿ ನಿಭಾಯಿಸಬಲ್ಲರು ಎಂದು ಹೇಳಿದ್ದಾರೆ.

"ದೀದಿ ಮಮತಾ ಜೀ ಅವರು ಸಮರ್ಥರಾಗಿದ್ದಾರೆ ಮತ್ತು ಅನುಭವವನ್ನು ಹೊಂದಿದ್ದಾರೆ, ದೊಡ್ಡ ರಾಜ್ಯಗಳಲ್ಲಿ ಒಂದನ್ನು ಮುನ್ನಡೆಸುತ್ತಿದ್ದಾರೆ. ವಿಭಿನ್ನ ಖಾತೆಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ ಮತ್ತು ಕಾಲಕಾಲಕ್ಕೆ ವಿಭಿನ್ನ ಹುದ್ದೆಗಳನ್ನು ನಿಭಾಯಿಸಿದ್ದಾರೆ. ದೀದಿ ಅವರು INDIA ಮಿತ್ರ ಪಕ್ಷಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಿಭಾಯಿಸಿ ಅದನ್ನು ಅಧಿಕಾರಕ್ಕೆ ಕೊಂಡೊಯ್ಯುವ ಸ್ಥಿತಿಯಲ್ಲಿರುತ್ತಾರೆ". ಎಂದು ರೆಡ್ಡಿ ಸಂಸತ್ತಿನ ಹೊರಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇನ್ನು ಶರದ್ ಪವಾರ್ ಬ್ಯಾನರ್ಜಿ ಅವರನ್ನು "ಸಮರ್ಥ ನಾಯಕಿ" ಹಾಗೆ ಹೇಳುವ ಹಕ್ಕು ತಮಗೆ ಇದೆ ಎಂದು ಪ್ರತಿಪಾದಿಸಿದರು. ಬ್ಯಾನರ್ಜಿ ಸಂಸತ್ತಿಗೆ ಕಳುಹಿಸಿರುವ ಸಂಸದರು ಶ್ರಮಜೀವಿಗಳು ಮತ್ತು ಜಾಗೃತರು ಎಂದು ಶರದ್ ಪವಾರ್ ಬಣ್ಣಿಸಿದ್ದಾರೆ.

ಒಂದು ಮೂಲದ ಪ್ರಕಾರ, ಎನ್‌ಸಿಪಿ ಮುಖ್ಯಸ್ಥ ಪವಾರ್ ದೆಹಲಿಯ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಈ ಸಭೆಯಲ್ಲಿ INDIA ಮೈತ್ರಿಕೂಟದ ನಾಯಕತ್ವದ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ.

ಏತನ್ಮಧ್ಯೆ, ಮಮತಾ ಬ್ಯಾನರ್ಜಿ ಹೇಳಿಕೆಯ ಪರಿಣಾಮ INDIA ಮೈತ್ರಿಕೂಟದಲ್ಲಿ ಒಡಕು ಉಂಟಾಗಿದೆ ಎಂಬ ವರದಿಗಳನ್ನು ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ತಿರಸ್ಕರಿಸಿದ್ದಾರೆ. ವಿಪಕ್ಷಗಳ ಮೈತ್ರಿಕೂಟದಲ್ಲಿ "ಎಲ್ಲಾ ಚೆನ್ನಾಗಿದೆ" ಎಂದು ಹೇಳಿದ್ದಾರೆ.

"ಯಾರೂ ಬೇಕಾದರೂ ನಾಯಕತ್ವದ ಬಗ್ಗೆ ಹೇಳಬಹುದು, ಯಾರೂ ಸಂತರಾಗಲು ರಾಜಕೀಯಕ್ಕೆ ಬರುವುದಿಲ್ಲ, ಎಲ್ಲರಿಗೂ ಮಹತ್ವಾಕಾಂಕ್ಷೆ ಇದ್ದೇ ಇರುತ್ತದೆ. ಆದರೆ ನಾಯಕತ್ವದ ಬಗ್ಗೆ ಸಾಮೂಹಿಕ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ" ಎಂದು ಯಾದವ್ ಸಂಸತ್ ನ ಹೊರಗೆ ಪಿಟಿಐಗೆ ತಿಳಿಸಿದ್ದಾರೆ.

ಇನ್ನು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಕಾಂಗ್ರೆಸ್‌ ಪಕ್ಷದ ಹೊರತಾಗಿರುವವರು ಇಂಡಿ ಮೈತ್ರಿಕೂಟವನ್ನು ಮುನ್ನಡೆಸಬೇಕೆ ಎಂಬುದರ ಬಗ್ಗೆ ಚರ್ಚಿಸಲು ತಮ್ಮ ಪಕ್ಷವು ಮುಕ್ತವಾಗಿದೆ ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಸಭಾ ಸದಸ್ಯ ರಾವುತ್, ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕತ್ವದೊಂದಿಗೆ ತಮ್ಮ ಪಕ್ಷದ ಸಂಬಂಧಗಳು "ಅತ್ಯುತ್ತಮವಾಗಿದೆ" ಎಂದು ಹೇಳಿದರು.

ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದೆ ಮತ್ತು ಮೈತ್ರಿಕೂಟದಲ್ಲಿ ಅತಿ ಹೆಚ್ಚು ಸಂಸದರನ್ನು ಹೊಂದಿದೆ ಎಂದು ರಾವುತ್ ಹೇಳಿದ್ದಾರೆ. "ಇನ್ನೂ, INDIA ಮೈತ್ರಿಕೂಟವನ್ನು ಮತ್ತೆ ಬಲಪಡಿಸಬೇಕಾದರೆ, ಎಲ್ಲರೂ ನಾಯಕತ್ವಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಬಯಸುತ್ತಾರೆ, ಮಮತಾ ಬ್ಯಾನರ್ಜಿ, ಉದ್ಧವ್ ಠಾಕ್ರೆ, ಲಾಲು ಪ್ರಸಾದ್, ಶರದ್ ಪವಾರ್ ಅಥವಾ ಅಖಿಲೇಶ್ ಯಾದವ್ ಸೇರಿದಂತೆ ಯಾರೇ ಇರಬಹುದು ಯಾರು ಮೈತ್ರಿಗೆ ಸಮಯ ನೀಡಬಹುದೋ ಅವರು ನಾಯಕರಾಗಲಿದ್ದಾರೆ ಎಂದು ರಾವುತ್ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 2024 ರ ಲೋಕಸಭಾ ಚುನಾವಣೆಯ ಮೊದಲು ರಚಿಸಲಾದ ಪ್ರತಿಪಕ್ಷಗಳ ಗುಂಪಿನ ಅಧ್ಯಕ್ಷರಾಗಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ತನ್ನ ಜವಾಬ್ದಾರಿಯನ್ನು ಮುಂದುವರಿಸುತ್ತಲೇ ವಿರೋಧ ಪಕ್ಷದ ನಾಯಕತ್ವವನ್ನು ನಡೆಸುವ ದ್ವಂದ್ವ ಜವಾಬ್ದಾರಿಯನ್ನು ನಿಭಾಯಿಸಬಹುದು ಎಂದು ಸ್ಬ್ಯಾನರ್ಜಿ ಕಳೆದ ವಾರ ಹೇಳಿದ್ದರು.

ವಿವಿಧ ಪ್ರಾದೇಶಿಕ ಪಕ್ಷಗಳ ಅತೃಪ್ತಿ ಮತ್ತು ಹರಿಯಾಣ, ಜಮ್ಮು ಮತ್ತು ಕಾಶ್ಮೀರ ಮತ್ತು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಇತ್ತೀಚಿನ ಚುನಾವಣಾ ಹಿನ್ನಡೆಗಳು ಎದುರಾಗಿರುವ ಬೆನ್ನಲ್ಲೇ INDIA ಮೈತ್ರಿಕೂಟದಲ್ಲಿ ನಾಯಕತ್ವಕ್ಕೆ ಸಂಬಂಧಿಸಿದಂತೆ ಅಪಸ್ವರವೆದ್ದಿರುವ ಸಮಯದಲ್ಲಿ ಮಮತಾ ಬ್ಯಾನರ್ಜಿ, ಅವಕಾಶ ಸಿಕ್ಕರೆ, ತಾವು ಮೈತ್ರಿಕೂಟವನ್ನು ಮುನ್ನಡೆಸಲು ಸಿದ್ಧ ಎಂದು ಹೇಳಿದ್ದರು.

ಶುಕ್ರವಾರ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಬ್ಯಾನರ್ಜಿ ವಿರೋಧ ಪಕ್ಷಗಳ ಮೈತ್ರಿಕೂಟದ ಕಾರ್ಯನಿರ್ವಹಣೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT