ರಕ್ಷಣಾ ಕಾರ್ಯಾಚರಣೆ ಚಿತ್ರ 
ದೇಶ

ರಾಜಸ್ಥಾನ: ಫಲ ನೀಡದ 55 ಗಂಟೆಗಳ ಕಾರ್ಯಾಚರಣೆ; ಕೊಳವೆ ಬಾವಿಯಿಂದ ರಕ್ಷಿಸಲ್ಪಟ್ಟ 5 ವರ್ಷದ ಮಗು ಸಾವು

55 ಗಂಟೆಗೂ ಹೆಚ್ಚು ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯ ನಂತರ ನಿನ್ನೆ ರಾತ್ರಿ ಆತನನ್ನು ಕೊಳವೆಬಾವಿಯಿಂದ ಹೊರ ತೆಗೆದು, ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಗಿತ್ತು.

ಜೈಪುರ: ರಾಜಸ್ಥಾನದ ದೌಸಾದಲ್ಲಿ 150 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಐದು ವರ್ಷದ ಆರ್ಯನ್ ಜೀವನ್ಮರಣ ಹೋರಾಟದಲ್ಲಿ ಸಾವನ್ನಪ್ಪಿದೆ.

55 ಗಂಟೆಗೂ ಹೆಚ್ಚು ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯ ನಂತರ ನಿನ್ನೆ ರಾತ್ರಿ ಆತನನ್ನು ಕೊಳವೆಬಾವಿಯಿಂದ ಹೊರ ತೆಗೆದು, ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

'ಸುಧಾರಿತ ಜೀವರಕ್ಷಕ ವ್ಯವಸ್ಥೆ ಹೊಂದಿದ್ದ ಆಂಬ್ಯುಲೆನ್ಸ್‌ನಲ್ಲಿ ಮಗುವನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿತ್ತು ಆದರೆ ಅಲ್ಲಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಮಧ್ಯಾಹ್ನ 3 ಗಂಟೆಗೆ ಕಾಲಿಖಾಡ್ ಗ್ರಾಮದಲ್ಲಿ ಕೃಷಿ ಭೂಮಿಯೊಂದರಲ್ಲಿ ಆಟವಾಡುತ್ತಿದ್ದ ಆರ್ಯನ್ ಆಕಸ್ಮಿಕವಾಗಿ ತಾಯಿ ಎದುರಿನ ಕೊಳವೆ ಬಾವಿಯಲ್ಲಿ ಬಿದ್ದಿದ್ದ. ಒಂದು ಗಂಟೆಯ ನಂತರ ರಕ್ಷಣಾ ಕಾರ್ಯಾಚರಣೆ ಆರಂಭವಾಯಿತು. ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ ಪೈಪ್ ಮೂಲಕ ಆಮ್ಲಜನಕ ಪೂರೈಕೆ ಆರಂಭಿಸಿ ಮಗುವಿನ ಚಲನವಲನ ಸೆರೆಹಿಡಿಯಲು ಕ್ಯಾಮರಾ ಇರಿಸಲಾಗಿತ್ತು. ಮಗು ಇದ್ದ ಸ್ಥಳವನ್ನು ತಲುಪಲು ಸಮಾನಾಂತರವಾಗಿ ಗುಂಡಿಯನ್ನು ತೆಗೆಯಲಾಗಿತ್ತು.

ಕಾರ್ಯಾಚರಣೆ ಸಾಕಷ್ಟು ಸವಾಲಾಗಿತ್ತು. ಮಗು ಬಿದ್ದ ಪ್ರದೇಶದಲ್ಲಿ ಸುಮಾರು 160 ಅಡಿಗಳಷ್ಟು ನೀರು ಇತ್ತು. ಯಾವುದೇ ಚಲನವಲನವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯುವುದು ಕಷ್ಟಕರವಾಗಿತ್ತು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಿಬ್ಬಂದಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT