ಟಿಪ್ಪು ಸುಲ್ತಾನ್ 
ದೇಶ

ಟಿಪ್ಪು ಸುಲ್ತಾನ್ ಜಯಂತಿ ನಿಷೇಧಿಸಲಾಗಿದೆಯೇ?: ಹೈಕೋರ್ಟ್

ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳು ರ‍್ಯಾಲಿಗೆ ಅನುಮತಿ ನಿರಾಕರಿಸಲು ಕಾರಣವಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಪುಣೆ: 18ನೇ ಶತಮಾನದ ಮೈಸೂರು ದೊರೆ ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯನ್ನು ನಿಷೇಧಿಸಲಾಗಿದೆಯೇ? ಪ್ರಶ್ನಿಸಿದ ಬಾಂಬೆ ಹೈಕೋರ್ಟ್, ಈ ಟಿಪ್ಪು ಸುಲ್ತಾನ್ ಜಯಂತಿ ಸ್ಮರಣಾರ್ಥ ರ‍್ಯಾಲಿಯನ್ನು ನಡೆಸಲು ಕೋರಿದ ಮನವಿಯ ಬಗ್ಗೆ ನಿರ್ಧರಿಸುವಂತೆ ಪುಣೆ ಗ್ರಾಮಾಂತರ ಪೊಲೀಸರಿಗೆ ಗುರುವಾರ ಸೂಚಿಸಿದೆ.

ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳು ರ‍್ಯಾಲಿಗೆ ಅನುಮತಿ ನಿರಾಕರಿಸಲು ಕಾರಣವಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ರ‍್ಯಾಲಿಗೆ ಅನುಮತಿ ನೀಡುವಂತೆ ಪೊಲೀಸರಿಗೆ ನಿರ್ದೇಶನ ಕೋರಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷದ ಪುಣೆ ಘಟಕದ ಅಧ್ಯಕ್ಷ ಫೈಯಾಜ್ ಶೇಖ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ಎಸ್ ಜಿ ಡಿಗೆ ಅವರ ವಿಭಾಗೀಯ ಪೀಠ, ಟಿಪ್ಪು ಸುಲ್ತಾನ್ ಜಯಂತಿ ನಿಷೇಧಿಸಲಾಗಿದೆಯೇ? ಎಂದು ಪ್ರಶ್ನಿಸಿದೆ.

ಮನವಿಯ ಪ್ರಕಾರ, ಪುಣೆ ಗ್ರಾಮಾಂತರ ಪೊಲೀಸರು ರ‍್ಯಾಲಿಗೆ ಅನುಮತಿ ನೀಡಲು ನಿರಾಕರಿಸಿದ್ದು, ತಮ್ಮ ಖಾಸಗಿ ಸ್ಥಳದಲ್ಲಿ ಕಾರ್ಯಕ್ರಮಗಳನ್ನು ಆಚರಿಸುವಂತೆ ಅರ್ಜಿದಾರರಿಗೆ ಸೂಚಿಸಲಾಗಿದೆ.

ಇಂತಹ ರ‍್ಯಾಲಿಗಳಿಂದ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!

ಭಾರತ-ಶ್ರೀಲಂಕಾ 2ನೇ ಟೆಸ್ಟ್ ಡ್ರಾದಲ್ಲಿ ಅಂತ್ಯ; WTC ಪಾಯಿಂಟ್ಸ್‌ ಟೇಬಲ್‌ನಲ್ಲಿ ಟೀಂ ಇಂಡಿಯಾಗೆ ಭಾರೀ ಹೊಡೆತ!

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಶಿವಕುಮಾರ್

CSK ಯಲ್ಲಿ ಶೇ. 25 ರಷ್ಟು ಪಾಲು ಕೇಳಿದ್ದಾರೆಯೇ ಧೋನಿ? 3,820 ಕೋಟಿ ರೂ ಕ್ಲೈಮ್ ಹಿಂದಿರುವ ಸತ್ಯವೇನು?