ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: ನಾರಾಯಣಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಏಳು ಮಾವೋವಾದಿಗಳು ಹತ

ನವೆಂಬರ್ 12 ರಂದು ಬೆಳಗಿನ ಜಾವ 3 ಗಂಟೆಗೆ ಮಾವೋವಾದಿಗಳು ತಮ್ಮ ಸ್ಥಳದ ಸಮೀಪಕ್ಕೆ ಬಂದ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಎನ್‌ಕೌಂಟರ್ ನಡೆಯಿತು.

ರಾಯ್‌ಪುರ: ದಕ್ಷಿಣ ಛತ್ತೀಸ್‌ಗಢದ ಅಬುಜಮದ್ ​​ಪ್ರದೇಶದ ನಾರಾಯಣಪುರ-ದಂತೇವಾಡದ ಅಂತರ ಜಿಲ್ಲಾ ಗಡಿಯಲ್ಲಿ ಗುರುವಾರ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ ಕನಿಷ್ಠ ಏಳು ಮಾವೋವಾದಿ(ಸಿಪಿಐ)ಗಳನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.

“ದಕ್ಷಿಣ ಅಬುಜ್ಮದ್(ಅಪರಿಚಿತ ಭೂಮಿ) ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಕುರಿತು ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಜಿಲ್ಲಾ ಮೀಸಲು ಗಾರ್ಡ್(ಡಿಆರ್‌ಜಿ), ವಿಶೇಷ ಕಾರ್ಯಪಡೆ(ಎಸ್‌ಟಿಎಫ್) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಜಂಟಿಯಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು.

ನವೆಂಬರ್ 10 ರಂದು ಆರಂಭವಾದ ಮಾವೋವಾದಿ ವಿರೋಧಿ ಶೋಧ ಕಾರ್ಯಾಚರಣೆ ಮುಂದುವರಿಯುತ್ತಿದ್ದು, ನವೆಂಬರ್ 12 ರಂದು ಬೆಳಗಿನ ಜಾವ 3 ಗಂಟೆಗೆ ಮಾವೋವಾದಿಗಳು ತಮ್ಮ ಸ್ಥಳದ ಸಮೀಪಕ್ಕೆ ಬಂದ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಎನ್‌ಕೌಂಟರ್ ನಡೆಯಿತು ಎಂದು ಬಸ್ತಾರ್‌ನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಲ್ಲಿಯವರೆಗೆ, ಎನ್‌ಕೌಂಟರ್ ಸ್ಥಳದಿಂದ ಏಳು ಮಾವೋವಾದಿಗಳ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ವಶಪಡಿಸಿಕೊಂಡ ಮಾವೋವಾದಿಗಳ ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಈ ಪ್ರದೇಶದಲ್ಲಿ ಮಾವೋವಾದಿಗಳು ಗುಂಪು ಗುಂಪಾಗಿ ಸೇರುತ್ತಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್