ದಿಂಡಿಗಲ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ 
ದೇಶ

Tamil Nadu: ದಿಂಡಿಗಲ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ; ಮಗು ಸೇರಿ 7 ಮಂದಿ ಸಾವು!

ತಮಿಳುನಾಡಿನ ದಿಂಡಿಗಲ್ ದಿಂಡಿಗಲ್-ತಿರುಚಿ ರಸ್ತೆಯಲ್ಲಿರುವ ಖಾಸಗಿ ಸಿಟಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಒಂದು ಮಗು, ಮೂವರು ಪುರುಷರು ಮತ್ತು ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ 7 ಜನರು ಸಾವನ್ನಪ್ಪಿದ್ದಾರೆ.

ದಿಂಡಿಗಲ್: ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮಗು ಸೇರಿ 6 ಮಂದಿ ಸಾವನ್ನಪ್ಪಿರುವ ಭೀಕರ ಘಟನೆ ತಮಿಳುನಾಡಿನಲ್ಲಿ ಗುರುವಾರ ನಡೆದಿದೆ.

ತಮಿಳುನಾಡಿನ ದಿಂಡಿಗಲ್-ತಿರುಚಿ ರಸ್ತೆಯಲ್ಲಿರುವ ಖಾಸಗಿ ಸಿಟಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಒಂದು ಮಗು, ಮೂವರು ಪುರುಷರು ಮತ್ತು ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ.

ನಾಲ್ಕು ಅಂತಸ್ತಿನ ಆಸ್ಪತ್ರೆಯ ಲಿಫ್ಟ್‌ನಲ್ಲಿ ಕೆಲವು ವ್ಯಕ್ತಿಗಳು ಕೂಡ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ದುರ್ಘಟನೆಯಲ್ಲಿ ಕನಿಷ್ಠ ಇಬ್ಬರು ವ್ಯಕ್ತಿಗಳು ಸುಟ್ಟು ಕರಕಲಾಗಿದ್ದು, ಇತರ ಮೂವರು ಉಸಿರುಗಟ್ಟಿ ಸತ್ತಿದ್ದಾರೆ. ಆಸ್ಪತ್ರೆಯಲ್ಲಿ ಹರಡಿದ ಬೆಂಕಿಯಲ್ಲಿ ಇನ್ನೂ ಇಬ್ಬರು ಸಾವನ್ನಪ್ಪಿ ಒಟ್ಟಾರೆ 7 ಮಂದಿ ಸಾವಿಗೀಡಾಗಿದ್ದಾರೆ. ಆಸ್ಪತ್ರೆಯಲ್ಲಿ ಸಿಕ್ಕಿಬಿದ್ದವರನ್ನು ರಕ್ಷಿಸುವ ಪ್ರಯತ್ನ ಮುಂದುವರಿದಿದೆ. ಬೆಂಕಿಯನ್ನು ನಿಯಂತ್ರಿಸಲಾಗುತ್ತಿದೆ.

ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಸ್ಥಳಾಂತರಿಸುವ ಕಾರ್ಯವೂ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ನಾಲ್ಕಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳನ್ನು ಸೇವೆಗೆ ಬಳಸಿಕೊಳ್ಳಲಾಗಿದ್ದು, ರೋಗಿಗಳನ್ನು ಬೇರೆ ಬೇರೆ ಆಸ್ಪತ್ರೆಗೆ ವರ್ಗಾಯಿಸಲು ಹತ್ತಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ಬಳಸಲಾಗಿದೆ. ಅಗ್ನಿಶಾಮಕ ದಳ, ಪೊಲೀಸರು ಘಟನೆಯಿಂದ ಗಾಬರಿಯಾಗಿ ರಕ್ಷಣೆ ಪಡೆಯಲು ಲಿಫ್ಟ್ ನಲ್ಲಿ ಸಿಲುಕಿದ್ದವರನ್ನು ರಕ್ಷಿಸಿ ದಿಂಡುಗಲ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಘಟನೆ ನಡೆದ ಪ್ರದೇಶದಲ್ಲಿ ಜಿಲ್ಲಾಧಿಕಾರಿ ಎಂ.ಎನ್.ಪೂಂಗೋಡಿ ಹಾಗೂ ಪಳನಿ ಶಾಸಕ ಐ.ಬಿ.ಸೆಂಥಿಲ್ ಕುಮಾರ್ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ಕಾರಣ ಪತ್ತೆ ಹಚ್ಚಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್ ಕಾರಣ

ಮೊದಲು ಆಸ್ಪತ್ರೆಯ ರಿಸಿಪ್ಷನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಬೆಂಕಿಯ ಜ್ವಾಲೆಯು ಇತರ ಮಹಡಿಗಳಿಗೆ ವೇಗವಾಗಿ ಹರಡಿ ಇಡೀ ಕಟ್ಟಡವನ್ನು ಆವರಿಸಿತು. ಆಸ್ಪತ್ರೆಯಲ್ಲಿ ದಟ್ಟವಾದ ಹೊಗೆ ತುಂಬಿದ್ದರಿಂದ ಉಸಿರುಗಟ್ಟುವಿಕೆಯಿಂದ 7 ಮಂದಿ ಮೃತಪಟ್ಟರು ಎಂದು ಅಗ್ನಿಶಾಮಕ ದಳದ ಸಿಬ್ಬಂದಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?