ಸಾಂದರ್ಭಿಕ ಚಿತ್ರ 
ದೇಶ

ಕೆನಡಾದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳ ಕೊಲೆ

ಕೆನಾಡದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ, ಭದ್ರತೆ ಹಾಗೂ ಹಿತ ಕಾಪಾಡುವುದು ನಮಗೆ ಅತ್ಯಂತ ಪ್ರಮುಖವಾಗಿದೆ- ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್

ಒಟ್ಟಾವಾ: ಕೆನಡಾದಲ್ಲಿ ಕಳೆದ ವಾರ ಮೂವರು ಭಾರತೀಯ ವಿದ್ಯಾರ್ಥಿಗಳ ಕೊಲೆಯಾಗಿದೆ. ಭಾರತೀಯ ಹೈಕಮೀಷನ್ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ವಿಚಾರವನ್ನು ಕೆನಡಾದ ಆಡಳಿತಕ್ಕೆ ತಂದಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ಹೇಳಿದೆ.

ಕೆನಾಡದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ, ಭದ್ರತೆ ಹಾಗೂ ಹಿತ ಕಾಪಾಡುವುದು ನಮಗೆ ಅತ್ಯಂತ ಪ್ರಮುಖವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಕಳೆದ ವಾರ ದುರಾದೃಷ್ಟಕರ ಘಟನೆಗಳಾಗಿವೆ. ಮೂವರು ಭಾರತೀಯ ವಿದ್ಯಾರ್ಥಿಗಳ ಕೊಲೆಯಾಗಿದೆ. ಕೆನಡಾದಲ್ಲಿರುವ ನಮ್ಮ ಭಾರತೀಯರನ್ನು ಆಘಾತ ಮೂಡಿಸಿರುವ ಈ ಭಯಾನಕ ಘಟನೆಗಳಿಂದ ದು:ಖಿತರಾಗಿದ್ದೇವೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇವೆ. ಈ ವಿಚಾರದಲ್ಲಿ ನಮ್ಮ ಹೈಕಮೀಶನ್ ಹಾಗೂ ಟೊರೊಂಟೊದಲ್ಲಿನ ರಾಯಭಾರಿ ಕಚೇರಿ ಸಾಧ್ಯವಾದಷ್ಟು ಎಲ್ಲಾ ರೀತಿಯ ನೆರವು ನೀಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಭಾರತೀಯರ ವಿದ್ಯಾರ್ಥಿಗಳ ಕೊಲೆ ಘಟನೆ ಕುರಿತ ತನಿಖೆಗೆ ಭಾರತೀಯ ಹೈಕಮೀಷನ್ ಸ್ಥಳೀಯ ಆಡಳಿತೊಂದಿಗೆ ಸಂಪರ್ಕದಲ್ಲಿದೆ. ಭಾರತೀಯ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಹೈಕಮೀಷನ್ ಮತ್ತು ರಾಯಭಾರಿ ಅಧಿಕಾರಿಗಳು ಕೆನಡಾದ ಆಡಳಿತೊಂದಿಗೆ ನಿರಂತರವಾಗಿ ಚರ್ಚಿಸುತ್ತಿದ್ದಾರೆ. ಕೆನಡಾದಲ್ಲಿ ಭಾರತೀಯ ಮೇಲೆ ಹೆಚ್ಚಾಗುತ್ತಿರುವ ಕ್ರಿಮಿನಲ್ ದೌರ್ಜನ್ಯ, ದ್ವೇಷಕೃತ್ಯಗಳಿಂದಾಗಿ ಅಲ್ಲಿರುವ ಭಾರತೀಯ ಪ್ರಜೆಗಳು ಮತ್ತು ವಿದ್ಯಾರ್ಥಿಗಳು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಲಹೆ ನೀಡಿದ್ದೇವೆ ಎಂದು ಜೈಸ್ವಾಲ್ ಹೇಳಿದರು.

ಅಧಿಕೃತ ಮಾಹಿತಿ ಪ್ರಕಾರ ಕೆನಡಾದಲ್ಲಿ ಸುಮಾರು 400,000 ಭಾರತೀಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಇರಾಕ್‌ನಲ್ಲಿ ಅಮೆರಿಕಾದ KC-135 ಸೇನಾ ವಿಮಾನ ಪತನ; ರಕ್ಷಣಾ ಕಾರ್ಯಾಚರಣೆ ಆರಂಭ

ಕಲಬುರಗಿಯಲ್ಲಿ ಪತ್ತೆಯಾದ ಪ್ರಾಚೀನ ಬೌದ್ಧ ಮಠದ ವಿಸ್ತೃತ ಉತ್ಖನನ ಕೈಗೊಳ್ಳಿ: ಕೇಂದ್ರಕ್ಕೆ ಖರ್ಗೆ ಒತ್ತಾಯ

ಆಪರೇಷನ್‌ ಕಮಲದ ಆತಂಕ: ಅಸ್ಸಾಂ ಕಾಂಗ್ರೆಸ್‌ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್‌; ಅಖಾಡಕ್ಕಿಳಿದ ಡಿಕೆ ಶಿವಕುಮಾರ್

ರಾಜ್ಯದ 470 ಹಳ್ಳಿಗಳಿಗೆ ಮೊಬೈಲ್ ನೆಟ್​ವರ್ಕೇ ಇಲ್ಲ..!

ಮೋದಿ ನಿಜವಾದ ಮುತ್ಸದ್ದಿ: ದೂರದೃಷ್ಟಿ ಹೊಂದಿರುವ ಅದ್ಭುತ ನಾಯಕ; ನಟ ಮೋಹನ್‌ ಲಾಲ್ ಶ್ಲಾಘನೆ

SCROLL FOR NEXT