ಅಲ್ಲು ಅರ್ಜುನ್‌ 
ದೇಶ

ಅಲ್ಲು ಅರ್ಜುನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು

ಡಿಸೆಂಬರ್ 4ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದರು.

ಹೈದರಾಬಾದ್: 'ಪುಷ್ಪ-2: ದಿ ರೂಲ್' ಚಿತ್ರದ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ತೆಲುಗು ಸೂಪರ್‌ಸ್ಟಾರ್ ಅಲ್ಲು ಅರ್ಜುನ್​ಗೆ ತೆಲಂಗಾಣ ಹೈಕೋರ್ಟ್​ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಡಿಸೆಂಬರ್ 4ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟು, ಆಕೆಯ ಮಗ ಗಂಭೀರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈದರಾಬಾದ್ ಪೊಲೀಸರು ನಟ ಅಲ್ಲು ಅರ್ಜುನ್‌ ಅವರನ್ನು ಬಂಧಿಸಿದ್ದರು. ಬಳಿಕ ನಾಂಪಲ್ಲಿ ನ್ಯಾಯಾಲಯ ಅಲ್ಲು ಅರ್ಜುನ್​ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.

ಇದೀಗ ಹೈಕೋರ್ಟ್​ ಮಧ್ಯಂತರ ಜಾಮೀನ ನೀಡಿದೆ. ಇದರಿಂದ ಅಲ್ಲು ಅರ್ಜುನ್ 14 ದಿನಗಳ ಜೈಲು ವಾಸದಿಂದ ತಪ್ಪಿಸಿಕೊಂಡಂತಾಗಿದೆ. ಆದರೆ ಒಂದು ದಿನ ಅಥವಾ ಸೋಮವಾರದವರೆಗೆಯಾದರೂ ಜೈಲು ವಾಸ ಅನುಭವಿಸುವ ಸಾಧ್ಯತೆ ಇದೆ.

ಎಫ್​ಐಆರ್ ರದ್ದು ಕೋರಿ ಅಲ್ಲು ಅರ್ಜುನ್ ಪರ ವಕೀಲರು ತೆಲಂಗಾಣ ಹೈಕೋರ್ಟ್​ನಲ್ಲಿ ಅರ್ಜಿ ಹಾಕಿದ್ದರು. ಶಾರುಖ್ ಖಾನ್ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ಉಲ್ಲೇಖ ಮಾಡಿ ಅಲ್ಲು ಅರ್ಜುನ್ ಪರ ವಕೀಲರು ವಾದ ಮಂಡಿಸಿದರು. ಆದರೆ ಹೈಕೋರ್ಟ್​ ಎಫ್​ಐಆರ್ ರದ್ದುಗೊಳಿಸಲು ನಿರಾಕರಿಸಿದೆ. ವಾದ ಮುಂದುವರೆಸಿದ ಅಲ್ಲು ಅರ್ಜುನ್ ಪರ ವಕೀಲರು ಮಧ್ಯಂತರ ಜಾಮೀನಿದೆ ಮನವಿ ಮಾಡಿದರು.

ಅಲ್ಲು ಅರ್ಜುನ್​ಗೆ, ರೇವತಿ ಸಾವಿಗೆ ನೇರ ಸಂಬಂಧವೇ ಇಲ್ಲ. ಇದು ಅಚಾನಕ್ಕಾಗಿ ನಡೆದಿರುವ ಘಟನೆ. ಇಂಥಹಾ ಅಪಘಾತಗಳು ಸಾಕಷ್ಟು ನಡೆಯುತ್ತಲೇ ಇರುತ್ತವೆ. ಈ ರೀತಿಯ ಘಟನೆಗಳಿಗೆ ನಟರನ್ನು, ರಾಜಕಾರಣಿಗಳನ್ನು ಕೊಲೆಗಾರರು ಎನ್ನಲಾಗದು ಎಂದು ವಾದಿಸಿದರು. ಹಲವು ಇತರೆ ಪ್ರಕರಣಗಳ ಉಲ್ಲೇಖಗಳನ್ನು ಸಹ ವಕೀಲರು ನ್ಯಾಯಾಲಯದಲ್ಲಿ ಮಾಡಿದರು. ವಾದ ಆಲಿಸಿದ ನ್ಯಾಯಮೂರ್ತಿಗಳು ಅಲ್ಲು ಅರ್ಜುನ್​ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ.

ಇದಕ್ಕೂ ಮುನ್ನ ಮೃತ ಮಹಿಳೆ ರೇವತಿಯ ಪತಿ ಭಾಸ್ಕರ್ ಮಾತನಾಡಿ, ಆಕೆಯ ಸಾವಿಗೆ ನಟ ಅಲ್ಪು ಅರ್ಜುನ್ ಕಾರಣವಲ್ಲ. ಅವರ ತಪ್ಪಿಲ್ಲ. ಅಗತ್ಯವಿದ್ದರೆ ಪ್ರಕರಣವನ್ನು ಹಿಂಪಡೆಯಲು ಸಿದ್ಧ ಎಂದು ಹೇಳಿದರು. ಅಲ್ಲದೆ ಅಲ್ಲು ಅರ್ಜುನ್ ಬಂಧನದ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

Flydubai ಕಾಕ್‌ಪಿಟ್ ದಾಳಿ: ಸಹ ಪೈಲಟ್ ಗುರುತು ಬಹಿರಂಗ

FlyDubai ಕೋ ಪೈಲಟ್ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಆತ ಉಗ್ರವಾದ ಹಿನ್ನಲೆಯವನೇ?

ಪ್ರೇಮಾನಂದ ಮಹಾರಾಜರ ಶಿಷ್ಯ ಆತ್ಮಹತ್ಯೆಗೂ ಮುನ್ನ ಏನಾಯಿತು? ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!