ಮೃತ ಮಹಿಳೆ ಪತಿ, ಅಲ್ಲು ಅರ್ಜುನ್ 
ದೇಶ

Pushpa-2: ಪ್ರೀಮಿಯರ್ ಶೋ ವೇಳೆ ದುರಂತ; ನಟ ಅಲ್ಲು ಅರ್ಜುನ್‌ ತಪ್ಪಿಲ್ಲ, ಕೇಸ್ ಹಿಂಪಡೆಯುತ್ತೇನೆ- ಮೃತ ಮಹಿಳೆ ಪತಿ

ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈದರಾಬಾದ್ ಪೊಲೀಸರು ನಟ ಅಲ್ಲು ಅರ್ಜುನ್‌ ಅವರನ್ನು ಬಂಧಿಸಿದ್ದರು. ಬಳಿಕ ನಾಂಪಲ್ಲಿ ನ್ಯಾಯಾಲಯ ಅಲ್ಲು ಅರ್ಜುನ್​ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.

ಹೈದರಾಬಾದ್: ಡಿಸೆಂಬರ್ 4ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ನಡೆದ ದುರಂತಕ್ಕೆ ನಟ ಅಲ್ಲು ಅರ್ಜುನ್ ಹೊಣೆಯಲ್ಲ ಎಂದು ಘಟನೆಯಲ್ಲಿ ಮೃತಪಟ್ಟ ಮಹಿಳೆಯ ಪತಿ ಹೇಳಿದ್ದಾರೆ.

ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈದರಾಬಾದ್ ಪೊಲೀಸರು ನಟ ಅಲ್ಲು ಅರ್ಜುನ್‌ ಅವರನ್ನು ಬಂಧಿಸಿದ್ದರು. ಬಳಿಕ ನಾಂಪಲ್ಲಿ ನ್ಯಾಯಾಲಯ ಅಲ್ಲು ಅರ್ಜುನ್​ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳೆಯ ಪತಿ ಭಾಸ್ಕರ್,ಘಟನೆ ಕುರಿತು ದಾಖಲಿಸಿರುವ ಕೇಸ್ ನ್ನು ವಾಪಸ್ ಪಡೆಯುವುದಾಗಿ ತಿಳಿಸಿದರು. ಘಟನೆಗೆ ಥಿಯೇಟರ್ ಗೆ ಬರುತ್ತಿದ್ದ ಅಲ್ಲು ಅರ್ಜುನ್ ಕಾರಣವಲ್ಲ, ಕೇಸ್ ವಾಪಸ್ ಪಡೆಯಲು ಸಿದ್ದನಿದ್ದೇನೆ ಎಂದರು.

ಅರ್ಜುನ್ ಬಂಧನದ ಬಗ್ಗೆ ತನಗೆ ಪೊಲೀಸರು ಮಾಹಿತಿ ನೀಡಲಿಲ್ಲ. ಚಾನೆಲ್ ಗಳಿಂದ ಸುದ್ದಿ ತಿಳಿಯಿತು ಎಂದು ಭಾಸ್ಕರ್ ಹೇಳಿದರು.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರ ಎಂಟು ವರ್ಷದ ಮಗ ಹೈದರಾಬಾದ್‌ನ ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಯುವತಿಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ಶುಕ್ರವಾರ ಅಲ್ಲು ಅರ್ಜುನ್‌ ಅವರನ್ನು ಬಂಧಿಸಿದ್ದಾರೆ. ಆದರೆ, ತೆಲಂಗಾಣ ಹೈಕೋರ್ಟ್ ಅವರಿಗೆ ನಾಲ್ಕು ವಾರಗಳ ಮಧ್ಯಂತರ ಜಾಮೀನು ನೀಡಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಟಿ ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ: ನಾನು ಅವರ ಹೆಸರನ್ನೂ ಉಲ್ಲೇಖಿಸಿದ್ದೇನೆಯೇ? ಬಂಧನದ ಬಳಿಕ ಉದಯನಿಧಿ ಸ್ಟಾಲಿನ್

ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ, ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ..!

ಸಿದ್ದರಾಮಯ್ಯ ಮಾತಿಗೆ ಯಾವುದೇ ಬೆಲೆ ಇಲ್ಲ, ಅವರ ಆಪ್ತನಾಗಿದ್ದಕ್ಕೆ ಸಚಿವ ಸ್ಥಾನ ಕೈ ತಪ್ಪಿದೆ: CM ಡಿಕೆಶಿ ವಿರುದ್ಧ ಸುಧಾಕರ್ ಕಿಡಿ

Crass, cheap and derogatory': ನಟಿ ತ್ರಿಶಾಗೆ ಅಸಭ್ಯ, ಕೀಳುಮಟ್ಟದಲ್ಲಿ ಅಪಮಾನ, ಉದಯನಿಧಿ ಸ್ಟಾಲಿನ್ ಕ್ಷಮೆಯಾಚನೆಗೆ ಖುಷ್ಬೂ ಸುಂದರ್ ಒತ್ತಾಯ!

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!