ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ- ಮೋದಿ, ಯೋಗಿ  online desk
ದೇಶ

ಸದೃಢ ನ್ಯಾಯಾಂಗ ವ್ಯವಸ್ಥೆ ಇದ್ದಿದ್ದರೆ Modi, Yogi ಜೈಲಿಗೆ; 2014ರಲ್ಲಿ ಮೋದಿ ಬೆಂಬಲಿಸಿ ತಪ್ಪು ಮಾಡಿದೆ- ಪುರಿ ಶಂಕರಾಚಾರ್ಯ

ಉಜ್ಜೈನ್ ನ ಮಹಾಕಾಲೇಶ್ವರ ದೇವಾಲಯ ಆಡಳಿತ ಮಂಡಳಿ ಆಯೋಜಿಸಿದ್ದ ಧರ್ಮಸಭೆಯಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ 2014 ರಲ್ಲಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದು ತಾವು ಮಾಡಿದ ತಪ್ಪು ಎಂದು ಹೇಳಿದ್ದಾರೆ.

ಉಜ್ಜೈನ್: ರಾಮಮಂದಿರದಲ್ಲಿ ಪ್ರಧಾನಿ ಮೋದಿ ಮೂರ್ತಿ ಪ್ರತಿಷ್ಠಾಪನೆ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಕಾರ್ಯಕ್ರಮದಿಂದ ದೂರ ಉಳಿದಿದ್ದ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಈಗ ಮತ್ತೊಮ್ಮೆ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

ಉಜ್ಜೈನ್ ನ ಮಹಾಕಾಲೇಶ್ವರ ದೇವಾಲಯ ಆಡಳಿತ ಮಂಡಳಿ ಆಯೋಜಿಸಿದ್ದ ಧರ್ಮಸಭೆಯಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ, ಭಾರತದಲ್ಲಿ ಸದೃಢ ನ್ಯಾಯಾಂಗ ವ್ಯವಸ್ಥೆ ಇದ್ದಿದ್ದರೆ, ಈ ವೇಳೆಗೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜೈಲಿನಲ್ಲಿರುತ್ತಿದ್ದರು ಎಂದು ಹೇಳಿದ್ದಾರೆ.

ಇದೇ ವೇಳೆ 2014 ರಲ್ಲಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದು ತಾವು ಮಾಡಿದ ತಪ್ಪು ಎಂದು ಪುರಿ ಶಂಕರಾಚಾರ್ಯ ಹೇಳಿದ್ದಾರೆ. 2014 ರಲ್ಲಿ ಮೋದಿ ಪ್ರಧಾನಿಯಾಗುವುದಕ್ಕೂ ಮೊದಲು ಪುರಿಗೆ ತೆರಳಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಅವರ ಆಶೀರ್ವಾದ ಪಡೆದಿದ್ದರು.

ಇನ್ನು ನಿಶ್ಚಲಾನಂದ ಸರಸ್ವತಿ ಅವರ ಈ ಹೇಳಿಕೆಗಳ ವರದಿಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ, ನಿರ್ಭೀತ ಜಗದ್ಗುರು ಎಂದು ನಿಶ್ಚಲಾನಂದ ಸರಸ್ವತಿ ಅವರನ್ನು ಹೊಗಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT