ದೇಶ

ದೆಹಲಿಯ ಆರು ಶಾಲೆಗಳಿಗೆ ಬಾಂಬ್ ಬೆದರಿಕೆ: ಈ ವಾರ ಎರಡನೇ ಘಟನೆ

ದೆಹಲಿಯ ಪಶ್ಚಿಮ ವಿಹಾರ್‌ನಲ್ಲಿರುವ ಭಟ್ನಾಗರ್ ಇಂಟರ್‌ನ್ಯಾಶನಲ್ ಸ್ಕೂಲ್, ಶ್ರೀನಿವಾಸ್ ಪುರಿಯ ಕೇಂಬ್ರಿಡ್ಜ್ ಸ್ಕೂಲ್ ಮತ್ತು ಈಸ್ಟ್ ಆಫ್ ಕೈಲಾಶ್‌ನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್, ಡಿಫೆನ್ಸ್ ಕಾಲೋನಿಯಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್, ಸಫ್ದರ್‌ಜಂಗ್ ಎನ್‌ಕ್ಲೇವ್‌ನಲ್ಲಿರುವ ದೆಹಲಿ ಪೊಲೀಸ್ ಪಬ್ಲಿಕ್ ಸ್ಕೂಲ್ ಮತ್ತು ರೋಹಿಣಿಯಲ್ಲಿರುವ ವೆಂಕಟೇಶ್ ಪಬ್ಲಿಕ್ ಸ್ಕೂಲ್ ಗೆ ಬೆದರಿಕೆ ಬಂದಿವೆ.

ನವದೆಹಲಿ: ಇಂದು ಶುಕ್ರವಾರ ಬೆಳಗ್ಗೆ ದೆಹಲಿಯ ಆರು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಆವರಣದಲ್ಲಿ ತನಿಖಾ ಸಂಸ್ಥೆಗಳು ತೀವ್ರ ಹುಡುಕಾಟದಲ್ಲಿ ತೊಡಗಿವೆ ಎಂದು ಎಎನ್‌ಐ ವರದಿ ಮಾಡಿದೆ.

ದೆಹಲಿಯ ಪಶ್ಚಿಮ ವಿಹಾರ್‌ನಲ್ಲಿರುವ ಭಟ್ನಾಗರ್ ಇಂಟರ್‌ನ್ಯಾಶನಲ್ ಸ್ಕೂಲ್, ಶ್ರೀನಿವಾಸ್ ಪುರಿಯ ಕೇಂಬ್ರಿಡ್ಜ್ ಸ್ಕೂಲ್ ಮತ್ತು ಈಸ್ಟ್ ಆಫ್ ಕೈಲಾಶ್‌ನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್, ಡಿಫೆನ್ಸ್ ಕಾಲೋನಿಯಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್, ಸಫ್ದರ್‌ಜಂಗ್ ಎನ್‌ಕ್ಲೇವ್‌ನಲ್ಲಿರುವ ದೆಹಲಿ ಪೊಲೀಸ್ ಪಬ್ಲಿಕ್ ಸ್ಕೂಲ್ ಮತ್ತು ರೋಹಿಣಿಯಲ್ಲಿರುವ ವೆಂಕಟೇಶ್ ಪಬ್ಲಿಕ್ ಸ್ಕೂಲ್ ಗೆ ಬೆದರಿಕೆ ಬಂದಿವೆ.

ಡಿಸೆಂಬರ್ 9 ರಂದು 44 ಶಾಲೆಗಳಿಗೆ ನಕಲಿ ಬಾಂಬ್ ಬೆದರಿಕೆಗಳು ಬಂದಾಗ ಇದೇ ರೀತಿಯ ಪರಿಸ್ಥಿತಿ ಎದುರಾಗಿತ್ತು. ಶಾಲೆಗಳಿಗೆ ಬಂದ ಬಾಂಬ್ ಬೆದರಿಕೆ ಇಮೇಲ್‌ನಲ್ಲಿ, ನಿಮ್ಮ ಶಾಲೆಯ ಆವರಣದಲ್ಲಿ ಹಲವಾರು ಸ್ಫೋಟಕಗಳಿವೆ. ನಿಮ್ಮ ವಿದ್ಯಾರ್ಥಿಗಳು ಶಾಲೆಯ ಆವರಣಕ್ಕೆ ಪ್ರವೇಶಿಸಿದಾಗ ನೀವು ಅವರ ಬ್ಯಾಗ್‌ಗಳನ್ನು ಆಗಾಗ್ಗೆ ಪರಿಶೀಲಿಸುವುದಿಲ್ಲ ಎಂದು ನಮಗೆ ಖಚಿತವಾಗಿದೆ. ರಹಸ್ಯ ಗುಂಪು ಈ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ, ಜೊತೆಗೆ ಅನೇಕ ಕೆಂಪು ಕೋಣೆಗಳು ಕಟ್ಟಡಗಳನ್ನು ನಾಶಮಾಡಲು ಮತ್ತು ಜನರಿಗೆ ಹಾನಿ ಮಾಡುವಷ್ಟು ಶಕ್ತಿಯುತವಾಗಿವೆ ಎಂದು ಬರೆಯಲಾಗಿದೆ.

ಡಿಸೆಂಬರ್ 13 ಅಥವಾ 14 ರಂದು ಬಾಂಬ್‌ಗಳನ್ನು ಸ್ಫೋಟಿಸಲಾಗುವುದು ಎಂಬುದು ಗೌಪ್ಯವಾಗಿದೆ. ಆದಾಗ್ಯೂ, ಬಾಂಬ್‌ಗಳನ್ನು ಈಗಾಗಲೇ ಇಡಲಾಗಿದೆ. ಈ ಇಮೇಲ್‌ಗೆ ಉತ್ತರಿಸಿ, ಇಲ್ಲದಿದ್ದರೆ ಬಾಂಬ್‌ಗಳನ್ನು ಸ್ಫೋಟಿಸಲಾಗುವುದು ಎಂದು ಇಮೇಲ್ ನಲ್ಲಿ ಬಂದಿದೆ.

ಪ್ರತಿಯಾಗಿ, ಅಗ್ನಿಶಾಮಕ ಇಲಾಖೆ, ಪೊಲೀಸ್, ಬಾಂಬ್ ಪತ್ತೆ ಘಟಕಗಳು ಮತ್ತು ಶ್ವಾನ ದಳದ ತಂಡಗಳು ಶಾಲೆಗಳಿಗೆ ಆಗಮಿಸಿ ಆವರಣದಲ್ಲಿ ಸಂಪೂರ್ಣ ಶೋಧವನ್ನು ಪ್ರಾರಂಭಿಸಿದವು. ಶಾಲಾ ಅಧಿಕಾರಿಗಳು ಪೋಷಕರಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ಸೂಚನೆ ಬರುವವರೆಗೂ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚಿಸಿದ್ದಾರೆ.

ತೀವ್ರ ಶೋಧದ ಬಳಿಕ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಕಳೆದ ಸೋಮವಾರ ಬೆಳಗ್ಗೆ, ರಾಷ್ಟ್ರ ರಾಜಧಾನಿಯಲ್ಲಿ ಕನಿಷ್ಠ 40 ಶಾಲೆಗಳಿಗೆ ಇಮೇಲ್ ಮೂಲಕ ಬೆದರಿಕೆ ಒಡ್ಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT