ಬಾವಂಕುಲೆ, ಪಂಕಜಾ ಮುಂಡೆ ಪ್ರಮಾಣ ವಚನ ಸ್ವೀಕಾರ 
ದೇಶ

ಮಹಾರಾಷ್ಟ್ರ ಸಂಪುಟ ವಿಸ್ತರಣೆ: ನೂತನ ಸಚಿವರಾಗಿ ಬಾವಂಕುಲೆ, ಪಂಕಜಾ ಮುಂಡೆ ಮತ್ತಿತರರು ಪ್ರಮಾಣ ವಚನ ಸ್ವೀಕಾರ

ಸಂಪುಟ ವಿಸ್ತರಣೆಗೂ ಮುನ್ನಾ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಾಗ್ಪುರದಲ್ಲಿ ಅದ್ದೂರಿ ರೋಡ್ ಶೋ ನಡೆಸಿದರು.

ನಾಗ್ಪುರ: ಅಂತೂ ಇಂತೂ ಮಹಾರಾಷ್ಟ್ರದ ದೇವೇಂದ್ರ ಫಡ್ನವೀಸ್ ಸರ್ಕಾರದ ಬಹು ನಿರೀಕ್ಷಿತ ಸಂಪುಟ ವಿಸ್ತರಣೆಯಾಗಿದೆ.

ಮಹಾರಾಷ್ಟ್ರದ ಎರಡನೇ ರಾಜಧಾನಿ ನಾಗ್ಪುರದ ರಾಜಭವನದಲ್ಲಿ ಇಂದು ಸಂಜೆ ನಡೆದ ಸಮಾರಂಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬಾವಂಕುಲೆ, ರಾಧಾಕೃಷ್ಣ ವಿಕೆ ಪಾಟೀಲ್, ಅಶಿಶ್ ಶೆಲಾರ್, ಚಂದ್ರಕಾಂತ್ ಪಾಟೀಲ್, ಗಿರೀಶ್ ಮಹಾಜನ್, ಗಣೇಶ್ ನಾಯಕ್, ಮಂಗಲ್ ಪ್ರತಾಪ್ ಲೊಧಾ, ಜಯಕುಮಾರ್ ರಾವಲ್, ಪಂಕಜ್ ಮುಂಡೆ, ಅತುಲ್ ಸಾವೆ ಸೇರಿದಂತೆ ಒಟ್ಟು 39 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಹೊಸ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದಿಂದ ದಾದಾ ಭೂಸೆ, ಶಂಭುರಾಜ್ ದೇಸಾಯಿ, ಸಂಜಯ್ ರಾಥೋಡ್, ಗುಲಾಬ್ರಾವ್ ಪಾಟೀಲ್ ಮತ್ತು ಉದಯ್ ಸಾಮಂತ್ ಮಂತ್ರಿಗಳಾಗಿದ್ದು, ಅಜಿತ್ ಪವಾರ್ ಅವರ ಎನ್‌ಸಿಪಿ ನಾಯಕರಾದ ಮಾಣಿಕ್ರಾವ್ ಕೊಕಾಟೆ, ದತ್ತಾತ್ರೇ ವಿಠ್ಠಲ ಭರ್ನೆ, ಹಸನ್ ಮುಶ್ರೀಫ್, ಅದಿತಿ ಸುನೀಲ್ ತಟ್ಕರೆ ಮತ್ತು ಧನಂಜಯ್ ಮುಂಡೆ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಡಿಸೆಂಬರ್ 5 ರಂದು ದೇವೇಂದ್ರ ಫಡ್ನವಿಸ್ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 10 ದಿನಗಳ ನಂತರ ಸಂಪುಟ ವಿಸ್ತರಣೆಯಾಗಿದೆ. ನವೆಂಬರ್ 20 ರಂದು ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟ 288 ಸ್ಥಾನಗಳ ಪೈಕಿ 230 ಸ್ಥಾನಗಳನ್ನು ಗೆದ್ದುಕೊಂಡಿತು. ಬಿಜೆಪಿ 132 ಸ್ಥಾನಗಳಲ್ಲಿ ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಶಿವಸೇನೆ ಮತ್ತು ಎನ್‌ಸಿಪಿ ಕ್ರಮವಾಗಿ 57 ಮತ್ತು 41 ಸ್ಥಾನಗಳನ್ನು ಗೆದ್ದಿವೆ.

ಸಂಪುಟ ವಿಸ್ತರಣೆಗೂ ಮುನ್ನಾ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಾಗ್ಪುರದಲ್ಲಿ ಅದ್ದೂರಿ ರೋಡ್ ಶೋ ನಡೆಸಿದರು. ಫಡ್ನವೀಸ್, ಅವರ ಪತ್ನಿ ಅಮೃತಾ ಫಡ್ನವಿಸ್, ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ್ ಬವಾಂಕುಲೆ ಮತ್ತಿತರರೊಂದಿಗೆ ನಾಗ್ಪುರ ವಿಮಾನ ನಿಲ್ದಾಣದಿಂದ ಅಲಂಕೃತ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು. ಮಾರ್ಗದುದ್ದಕ್ಕೂ ಅವರನ್ನು ಸ್ವಾಗತಿಸುವ ಬ್ಯಾನರ್ ಗಳು ರಾರಾಜಿಸಿದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ

SCROLL FOR NEXT