Rahul Gandhi-Omar Abdullah PTI
ದೇಶ

EVM ದೂಷಿಸುವುದನ್ನು ಮೊದಲು ಬಿಡಿ, ಸತ್ಯ ಒಪ್ಪಿಕೊಳ್ಳಿ: ಕಾಂಗ್ರೆಸ್‌ ವಿರುದ್ಧ ಒಮರ್ ಅಬ್ದುಲ್ಲಾ ವಾಗ್ದಾಳಿ

ಒಮರ್ ಅಬ್ದುಲ್ಲಾ ಅವರು ಸೆಂಟ್ರಲ್ ವಿಸ್ಟಾದಂತಹ ಮೂಲಸೌಕರ್ಯ ಯೋಜನೆಗಳಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.

ಶ್ರೀನಗರ: ಇಂಡಿಯಾ ಬ್ಲಾಕ್‌ನ ಪ್ರಮುಖ ಮಿತ್ರ ಪಕ್ಷವು ಕಾಂಗ್ರೆಸ್ ರೇಖೆಯಿಂದ ದೂರ ಸರಿದಿದೆ. ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು EVM ಬಗ್ಗೆ ದೂಷಿಸುವುದನ್ನು ಕಾಂಗ್ರೆಸ್ ಮೊದಲು ಬಿಡಬೇಕು ಎಂದು ಹೇಳಿದರು.

ನಿಮ್ಮ 100ಕ್ಕೂ ಹೆಚ್ಚು ಸಂಸದರು ಅದೇ ಇವಿಎಂನಿಂದ ಚುನಾಯಿತರಾದಾಗ, ಅದನ್ನು ನಿಮ್ಮ ಪಕ್ಷದ ಗೆಲುವು ಎಂದು ನೀವು ಆಚರಿಸುತ್ತೀರಿ, ನಂತರ ನಡೆದ ವಿಧಾನಸಭೆ ಚುನಾವಣೆಗಳಲ್ಲಿ ನಿಮ್ಮ ಪಕ್ಷ ಸೋತ ತಕ್ಷಣ ಇವಿಎಂ ಬಗ್ಗೆ ದೂಷಿಸುತ್ತೀರಿ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಮರ್ ಅಬ್ದುಲ್ಲಾ ಅವರ ಈ ಹೇಳಿಕೆಯು ಬಿಜೆಪಿಯನ್ನು ಪ್ರತಿನಿಧಿಸುತ್ತದೆ. ಕಾರಣ ವಿರೋಧ ಪಕ್ಷಗಳು ಗೆದ್ದಾಗ ಇವಿಎಂಗಳನ್ನು ಉತ್ತಮವೆಂದು ಪರಿಗಣಿಸುತ್ತಾರೆ. ಅದೇ ಸೋತಾಗ ಅವರು ಇವಿಎಂಗಳನ್ನು ದೂರುತ್ತಾರೆ ಎಂದು ಬಿಜೆಪಿ ಹೇಳುತ್ತಿರುತ್ತದೆ.

ಒಮರ್ ಅಬ್ದುಲ್ಲಾ ಅವರು ಸೆಂಟ್ರಲ್ ವಿಸ್ಟಾದಂತಹ ಮೂಲಸೌಕರ್ಯ ಯೋಜನೆಗಳಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು. ದೆಹಲಿಯಲ್ಲಿ ಸೆಂಟ್ರಲ್ ವಿಸ್ಟಾ ಉತ್ತಮ ಯೋಜನೆಯಾಗಿದೆ. ಹೊಸ ಸಂಸತ್ತಿನ ಕಟ್ಟಡವನ್ನು ನಿರ್ಮಿಸುವುದು ಅದ್ಭುತ ಕಲ್ಪನೆ ಎಂದು ನಾನು ನಂಬುತ್ತೇನೆ. ನಮಗೆ ಹೊಸ ಸಂಸತ್ ಭವನ ಬೇಕಿತ್ತು. ಹಿಂದಿನ ಸಂಸತ್ತಿನ ಕಟ್ಟಡವು ಹಳೆಯದಾಗಿತ್ತು ಮತ್ತು ಪ್ರಸ್ತುತ ಅಗತ್ಯಗಳಿಗೆ ಸರಿಹೊಂದುತ್ತಿರಲಿಲ್ಲ ಎಂದು ಹೇಳಿದರು.

ಪಕ್ಷಗಳಿಗೆ ಮತದಾನ ವ್ಯವಸ್ಥೆಯಲ್ಲಿ ವಿಶ್ವಾಸವಿಲ್ಲದಿದ್ದರೆ ಚುನಾವಣೆಗೆ ಸ್ಪರ್ಧಿಸಬಾರದು ಎಂದು ಹೇಳಿದರು. ಪ್ರತಿಪಕ್ಷಗಳು ಮತ್ತು ವಿಶೇಷವಾಗಿ ಕಾಂಗ್ರೆಸ್ ತಮ್ಮ ಚುನಾವಣಾ ಸೋಲಿಗೆ ಇವಿಎಂಗಳನ್ನು ದೂಷಿಸುವುದು ತಪ್ಪೇ? ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಒಮರ್ ಅಬ್ದುಲ್ಲಾ, 'ಇವಿಎಂಗಳಲ್ಲಿ ನಿಮಗೆ ಸಮಸ್ಯೆ ಇದ್ದರೆ, ಪ್ರತಿ ಚುನಾವಣೆಯಲ್ಲೂ ನಿಮಗೆ ಸಮಸ್ಯೆಯಾಗಬೇಕು' ಎಂದು ಹೇಳಿದರು. ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ, ಕಾಂಗ್ರೆಸ್ ಇವಿಎಂಗಳ ಪಾತ್ರ ಮತ್ತು ಚುನಾವಣಾ ಫಲಿತಾಂಶಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಪೇಪರ್ ಬ್ಯಾಲೆಟ್ ಮೂಲಕ ಮತದಾನ ಮಾಡುವಂತೆ ಕಾಂಗ್ರೆಸ್ ನಾಯಕರು ಪ್ರತಿಪಾದಿಸಿದ್ದಾರೆ.

ಒಮರ್ ಅಬ್ದುಲ್ಲಾ ಅವರ ಇತ್ತೀಚಿನ ಹೇಳಿಕೆಗಳು ಅವರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಎಲ್ಲವೂ ಸರಿಯಾಗಿಲ್ಲ ಎಂದು ಸೂಚಿಸುತ್ತದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದವು. ನ್ಯಾಷನಲ್ ಕಾನ್ಫರೆನ್ಸ್ ನಾಯಕರು ಮತ್ತು ಕಾರ್ಯಕರ್ತರು ಚುನಾವಣಾ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ತನ್ನ ಕೆಲಸವನ್ನು ಮಾಡಲಿಲ್ಲ ಮತ್ತು ಸಂಪೂರ್ಣ ಹೊರೆಯನ್ನು ತಮ್ಮ ಪಕ್ಷದ ಮೇಲೆ ಬಿಟ್ಟಿದ್ದರು ಎಂದು ಖಾಸಗಿಯಾಗಿ ಆರೋಪಿಸುತ್ತಿದ್ದಾರೆ. ಅದೇನೇ ಇದ್ದರೂ, 90 ಸದಸ್ಯ ಬಲದ ವಿಧಾನಸಭೆಯಲ್ಲಿ ಎನ್‌ಸಿ 42 ಸ್ಥಾನಗಳನ್ನು ಗೆದ್ದುಕೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT