ಜಾಕೀರ್ ಹುಸೇನ್ 
ದೇಶ

ವಿಶ್ವವಿಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿಧನ!

73 ವರ್ಷದ ಅಮೆರಿಕನ್ ಸಂಗೀತಗಾರ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಅವರನ್ನು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ನವದೆಹಲಿ: ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ಅವರನ್ನು ಹೃದಯ ಸಮಸ್ಯೆಯ ಹಿನ್ನೆಲೆಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

73 ವರ್ಷದ ಅಮೆರಿಕನ್ ಸಂಗೀತಗಾರ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಅವರನ್ನು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದರು.

ಉಸ್ತಾದ್ ಜಾಕಿರ್ ಹುಸೇನ್ ಅವರ ತಂದೆ ಅಲ್ಲಾ ರಖಾ ಕೂಡ ಪ್ರಸಿದ್ಧ ತಬಲಾ ವಾದಕರಾಗಿದ್ದರು. ಪ್ರಸಿದ್ಧ ತಬಲಾ ವಾದಕ ಜಾಕೀರ್ ಹುಸೇನ್ ಅವರು ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಮುಂತಾದ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅಷ್ಟೇ ಅಲ್ಲ, ಆಲ್-ಸ್ಟಾರ್ ಗ್ಲೋಬಲ್ ಕನ್ಸರ್ಟ್‌ನಲ್ಲಿ ಭಾಗವಹಿಸಲು ಮಾಜಿ ಅಧ್ಯಕ್ಷ ಬರಾಕ್ ಒಬಾಮರಿಂದ ಆಹ್ವಾನ ಪಡೆದ ಮೊದಲ ಭಾರತೀಯ ತಬಲಾ ವಾದಕ ಜಾಕಿರ್ ಹುಸೇನ್ ಆಗಿದ್ದಾರೆ.

ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ 1951ರಲ್ಲಿ ಜನಿಸಿದ ಜಾಕೀರ್ ಹುಸೇನ್ ಕೇವಲ 3 ವರ್ಷ ವಯಸ್ಸಿನಲ್ಲೇ ತಬಲಾವನ್ನು ಅಭ್ಯಾಸ ಮಾಡಲು ಪ್ರಾರಂಭಿಸಿದರು. ಅಷ್ಟೇ ಅಲ್ಲ, 7ನೇ ವಯಸ್ಸಿಗೆ ಪರಿಣತೆ ಪಡೆದಿದ್ದು 11ನೇ ವಯಸ್ಸಿನಲ್ಲಿ ಜಾಕಿರ್ ಹುಸೇನ್ ವಿವಿಧ ಸ್ಥಳಗಳಲ್ಲಿ ತಮ್ಮ ಕಾರ್ಯಕ್ರಮಗಳನ್ನು ನೀಡಲು ಪ್ರಾರಂಭಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ