ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ 
ದೇಶ

ಮುಂದಿನ ವರ್ಷ ಫೆಬ್ರವರಿಯಲ್ಲಿ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕ ಸಾಧ್ಯತೆ

ಪ್ರಸ್ತುತ ಕೇಂದ್ರ ಆರೋಗ್ಯ ಸಚಿವರೂ ಆಗಿರುವ ಜೆಪಿ ನಡ್ಡಾ ಅವರು ಫೆಬ್ರವರಿ 2020 ರಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.

ನವದೆಹಲಿ: ಮುಂದಿನ ವರ್ಷ ಫೆಬ್ರವರಿ ಅಂತ್ಯದ ವೇಳೆಗೆ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಈಗ ನಡೆಯುತ್ತಿರುವ ಕೇಸರಿ ಪಕ್ಷದ ಸಾಂಸ್ಥಿಕ ಚುನಾವಣೆಯು ಜನವರಿ ಮಧ್ಯದ ವೇಳೆಗೆ ಅರ್ಧಕ್ಕಿಂತ ಹೆಚ್ಚು ರಾಜ್ಯ ಘಟಕಗಳಲ್ಲಿ ಮತದಾನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದು ಪಕ್ಷದ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡುತ್ತದೆ.

ಬಿಜೆಪಿಯ ಸುಮಾರು ಶೇ. 60 ರಷ್ಟು ರಾಜ್ಯ ಘಟಕದ ಅಧ್ಯಕ್ಷರ ಅಧಿಕಾರಾವಧಿ ಮುಗಿದಿದ್ದು, ಮುಂದಿನ ತಿಂಗಳು ರಾಜ್ಯ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ಸಾಧ್ಯತೆಯಿದೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಬಿಜೆಪಿಯ ಸಂವಿಧಾನವು ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗುವ ಮುನ್ನ, ಕನಿಷ್ಠ ಅರ್ಧದಷ್ಟು ರಾಜ್ಯ ಘಟಕಗಳಲ್ಲಿ ಸಾಂಸ್ಥಿಕ ಚುನಾವಣೆಗಳನ್ನು ಪೂರ್ಣಗೊಳಿಸಬೇಕು ಎಂಬ ಷರತ್ತು ವಿಧಿಸಲಾಗಿದೆ.

"ಫೆಬ್ರವರಿ ಅಂತ್ಯದ ವೇಳೆಗೆ ಹೊಸ ಬಿಜೆಪಿ ಅಧ್ಯಕ್ಷರು ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ" ಎಂದು ಅವರು ತಿಳಿಸಿದ್ದಾರೆ.

ಬಿಜೆಪಿಯ ನೂತನ ಅಧ್ಯಕ್ಷರು ಪ್ರಸ್ತುತ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಯಾಗಬಹುದೇ ಎಂಬ ಪ್ರಶ್ನೆಗೆ, ಅದು ಸರ್ಕಾರದಿಂದ ಆಗಿರಬಹುದು ಅಥವಾ ಸಂಘಟನೆಯಿಂದ ಆಗಿರಬಹುದು, ಇನ್ನೂ ಯಾವುದನ್ನೂ ಅಂತಿಮಗೊಳಿಸಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಕೇಂದ್ರ ಆರೋಗ್ಯ ಸಚಿವರೂ ಆಗಿರುವ ಜೆಪಿ ನಡ್ಡಾ ಅವರು ಫೆಬ್ರವರಿ 2020 ರಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!