ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್: ಡಂಪರ್ ಟ್ರಕ್‌ಗೆ ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ 6 ಸಾವು, 10 ಮಂದಿಗೆ ಗಾಯ

ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ತ್ರಪಾಜ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರ್ಷದ್ ಪಟೇಲ್ ಅವರು ತಿಳಿಸಿದ್ದಾರೆ.

ಭಾವನಗರ: ಗುಜರಾತ್‌ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಖಾಸಗಿ ಬಸ್ ವೊಂದು ಡಂಪರ್ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಸುಮಾರು 10 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ತ್ರಪಾಜ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರ್ಷದ್ ಪಟೇಲ್ ಅವರು ತಿಳಿಸಿದ್ದಾರೆ.

ಭಾವನಗರದಿಂದ ಮಹುವಾ ಕಡೆಗೆ ತೆರಳುತ್ತಿದ್ದ ಬಸ್ ಹಿಂದಿನಿಂದ ಡಂಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಎಂಟರಿಂದ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ಡಿಕ್ಕಿಯ ರಭಸಕ್ಕೆ ಬಸ್ಸಿನ ಬಲಭಾಗದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT