ಸಾಂದರ್ಭಿಕ ಚಿತ್ರ 
ದೇಶ

ಬಿಕಾನೇರ್‌: ಮದ್ದುಗುಂಡುಗಳನ್ನು ಟ್ಯಾಂಕ್‌ಗೆ ತುಂಬುತ್ತಿದ್ದಾಗ ಸ್ಫೋಟ; ಇಬ್ಬರು ಸೈನಿಕರು ಸಾವು

ಸೈನಿಕರು ಮದ್ದುಗುಂಡುಗಳನ್ನು ಲೋಡ್ ಮಾಡುವಾಗ ಚಾರ್ಜರ್ ಸ್ಫೋಟಗೊಂಡಿದೆ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಅಮಿತಾಭ್ ಶರ್ಮಾ ಅವರು ಹೇಳಿದ್ದಾರೆ.

ಬಿಕಾನೇರ್‌: ರಾಜಸ್ಥಾನದ ಬಿಕಾನೇರ್‌ನ ಮಹಾಜನ್ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಬುಧವಾರ ಟ್ಯಾಂಕ್‌ನಲ್ಲಿ ಮದ್ದುಗುಂಡುಗಳನ್ನು ತುಂಬುತ್ತಿದ್ದಾಗ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಇದು ಈ ವಾರ ನಡೆದ ಎರಡನೇ ಘಟನೆಯಾಗಿದೆ.

ಸೈನಿಕರು ಮದ್ದುಗುಂಡುಗಳನ್ನು ಲೋಡ್ ಮಾಡುವಾಗ ಚಾರ್ಜರ್ ಸ್ಫೋಟಗೊಂಡಿದೆ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಅಮಿತಾಭ್ ಶರ್ಮಾ ಅವರು ಹೇಳಿದ್ದಾರೆ.

ಘಟನೆಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸ್ಫೋಟದ ಬಗ್ಗೆ ಮಾಹಿತಿ ಬಂದ ತಕ್ಷಣ ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

"ಮೂವರು ಸೈನಿಕರು ಟ್ಯಾಂಕ್‌ನೊಂದಿಗೆ ಅಭ್ಯಾಸ ನಡೆಸುತ್ತಿದ್ದರು. ಸ್ಫೋಟದಲ್ಲಿ ಅಶುತೋಷ್ ಮಿಶ್ರಾ ಮತ್ತು ಜಿತೇಂದ್ರ ಸಾವನ್ನಪ್ಪಿದ್ದಾರೆ. ಗಾಯಗೊಂಡ ಯೋಧನನ್ನು ಹೆಲಿಕಾಪ್ಟರ್‌ನಲ್ಲಿ ಚಂಡೀಗಢಕ್ಕೆ ಕರೆದೊಯ್ಯಲಾಗಿದೆ" ಎಂದು ಸರ್ಕಲ್ ಆಫೀಸರ್ ಲುಂಕರನ್‌ಸರ್(ಬಿಕಾನೇರ್) ನರೇಂದ್ರ ಕುಮಾರ್ ಪೂನಿಯಾ ಅವರು ತಿಳಿಸಿದ್ದಾರೆ.

ಮಿಶ್ರಾ ಅವರು ಉತ್ತರ ಪ್ರದೇಶದ ಡಿಯೋರಿಯಾದವರಾಗಿದ್ದು, ಜಿತೇಂದ್ರ ಅವರು ರಾಜಸ್ಥಾನದ ದೌಸಾದವರಾಗಿದ್ದಾರೆ. ಇಬ್ಬರ ಮೃತದೇಹಗಳನ್ನು ಸೂರತ್‌ಗಢ ಸೇನಾ ಠಾಣೆಗೆ ಕೊಂಡೊಯ್ಯಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್