ಉಮರ್ ಖಾಲಿದ್ TNIE
ದೇಶ

ದೆಹಲಿ ಗಲಭೆ ಆರೋಪಿ JNU ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು!

ಕುಟುಂಬ ವಿವಾಹದಲ್ಲಿ ಪಾಲ್ಗೊಳ್ಳಲು ಉಮರ್ ಖಾಲಿದ್ 10 ದಿನಗಳ ಮಧ್ಯಂತರ ಜಾಮೀನು ಕೋರಿದ್ದು ನ್ಯಾಯಾಲಯ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು ನೀಡಿದೆ.

ನವದೆಹಲಿ: ದೆಹಲಿ ಗಲಭೆ ಪ್ರಕರಣದ ಆರೋಪಿ JNU ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‌ಗೆ ಕರ್ಕರ್‌ದೂಮ ನ್ಯಾಯಾಲಯ ಬುಧವಾರ ಮಧ್ಯಂತರ ಜಾಮೀನು ನೀಡಿದೆ. ಕುಟುಂಬ ವಿವಾಹದಲ್ಲಿ ಪಾಲ್ಗೊಳ್ಳಲು ಉಮರ್ ಖಾಲಿದ್ 10 ದಿನಗಳ ಮಧ್ಯಂತರ ಜಾಮೀನು ಕೋರಿದ್ದು ನ್ಯಾಯಾಲಯ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು ನೀಡಿದೆ.

ಉಮರ್ ಖಾಲಿದ್ ನನ್ನು 4 ವರ್ಷಗಳ ಹಿಂದೆ ಬಂಧಿಸಲಾಗಿತ್ತು. ಉಮರ್ ಖಾಲಿದ್ ಕ್ರಿಮಿನಲ್ ಪಿತೂರಿ ಮತ್ತು ಗಲಭೆ ಸೇರಿದಂತೆ ಹಲವಾರು ಆರೋಪಗಳನ್ನು ಎದುರಿಸುತ್ತಿದ್ದಾರೆ.

ಉಮರ್ ಖಾಲಿದ್ ಅವರ ಜಾಮೀನು ಅರ್ಜಿಯನ್ನು ಈಗಾಗಲೇ ಕೆಳ ನ್ಯಾಯಾಲಯವು ತಿರಸ್ಕರಿಸಿತ್ತು. ಅದರ ನಂತರ ಉಮರ್ ಖಾಲಿದ್ ಪರವಾಗಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಯಿತು.

ಕೆಳ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಒಮರ್‌ಗೆ ಸುಪ್ರೀಂ ಕೋರ್ಟ್ ಸಲಹೆ ನೀಡಿತ್ತು. ಉಮರ್ ಖಾಲಿದ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಯುಎಪಿಎ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಇದಲ್ಲದೇ ಇನ್ನೂ ಹಲವು ಪ್ರಕರಣಗಳು ದಾಖಲಾಗಿವೆ. ಉಮರ್ ಖಾಲಿದ್ ಅವರು ತಮ್ಮ ಸೋದರ ಸಂಬಂಧಿ ಸಹೋದರ ಮತ್ತು ಸಹೋದರಿಯ ವಿವಾಹದಲ್ಲಿ ಪಾಲ್ಗೊಳ್ಳಲು 10 ದಿನಗಳ ಮಧ್ಯಂತರ ಜಾಮೀನು ಕೋರಿದ್ದರು.

ಡಿಸೆಂಬರ್ 7ರಂದು ಉಮರ್ ಖಾಲಿದ್ ಅವರ ಸಾಮಾನ್ಯ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಲಾಯಿತು. ಉಮರ್ ಖಾಲಿದ್ ವಿರುದ್ಧ ಯಾವುದೇ ಆರೋಪಗಳಿಲ್ಲ ಎಂದು ಉಮರ್ ಖಾಲಿದ್ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT