ಸಾಂದರ್ಭಿಕ ಚಿತ್ರ 
ದೇಶ

ಭಾರತದ ಈ ನಗರದಲ್ಲಿ ಭಿಕ್ಷುಕರಿಗೆ ಹಣ ನೀಡಿದರೆ ಬೀಳುತ್ತೆ ಕೇಸ್​, ಜೈಲಿಗೆ ಹೋಗಬೇಕಾಗುತ್ತೆ ಎಚ್ಚರ!

ಭಿಕ್ಷಾಟನೆ ವಿರುದ್ಧ ಜಾಗೃತಿ ಅಭಿಯಾನವು ಡಿಸೆಂಬರ್ 2024 ರ ಅಂತ್ಯದವರೆಗೆ ಮುಂದುವರಿಯುತ್ತದೆ ಎಂದು ಜಿಲ್ಲಾಧಿಕಾರಿ ಆಶಿಶ್ ಸಿಂಗ್ ತಿಳಿಸಿದ್ದಾರೆ.

ಇಂದೋರ್: ಭಾರತದ ಸ್ವಚ್ಛ ನಗರ ಎಂದೇ ಖ್ಯಾತಿ ಗಳಿಸಿರುವ ಮಧ್ಯ ಪ್ರದೇಶದ ಇಂದೋರ್, ಈಗ ಭಿಕ್ಷಾಟನೆ ಮುಕ್ತವಾಗಲು ಪಣ ತೊಟ್ಟಿದೆ. ನಗರದ ಬೀದಿಗಳು ಭಿಕ್ಷುಕರಿಂದ ಮುಕ್ತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ತೀವ್ರ ಕ್ರಮಕ್ಕೆ ಮುಂದಾಗಿರುವ ಇಂದೋರ್ ಜಿಲ್ಲಾಡಳಿತ, ಜನವರಿ 1, 2025 ರಿಂದ ನಗರದಲ್ಲಿ ಭಿಕ್ಷುಕರಿಗೆ ಭಿಕ್ಷೆ ನೀಡುವವರ ವಿರುದ್ಧವೇ ಎಫ್‌ಐಆರ್ ದಾಖಲಿಸಲು ನಿರ್ಧರಿಸಿದೆ.

ಭಿಕ್ಷಾಟನೆ ವಿರುದ್ಧ ಜಾಗೃತಿ ಅಭಿಯಾನವು ಡಿಸೆಂಬರ್ 2024 ರ ಅಂತ್ಯದವರೆಗೆ ಮುಂದುವರಿಯುತ್ತದೆ ಎಂದು ಜಿಲ್ಲಾಧಿಕಾರಿ ಆಶಿಶ್ ಸಿಂಗ್ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಿಂಗ್, ನಿವಾಸಿಗಳು ಭಿಕ್ಷೆ ನೀಡುವುದನ್ನು ತಡೆಯಲು ಒತ್ತಾಯಿಸಿದರು. "ಇಂಧೋರ್‌ನ ಎಲ್ಲಾ ನಿವಾಸಿಗಳಿಗೆ ಮನವಿ ಮಾಡುತ್ತೇನೆ. ಭಿಕ್ಷೆ ನೀಡುವ ಮೂಲಕ ಪಾಪದಲ್ಲಿ ಪಾಲುದಾರರಾಗಬೇಡಿ. ಜನವರಿ 1 ರಿಂದ ಯಾರಾದರೂ ಭಿಕ್ಷೆ ನೀಡುತ್ತಿರುವುದು ಕಂಡುಬಂದರೆ, ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಈ ಕ್ರಮವು ಇಂದೋರ್ ಸೇರಿದಂತೆ 10 ನಗರಗಳನ್ನು ಭಿಕ್ಷಾಟನೆಯಿಂದ ಮುಕ್ತಗೊಳಿಸುವ ಗುರಿಯನ್ನು ಹೊಂದಿರುವ ಸ್ಮೈಲ್ (ಲೈವ್ಲಿಹುಡ್ ಮತ್ತು ಎಂಟರ್‌ಪ್ರೈಸ್‌ಗಾಗಿ ಅಂಚಿನಲ್ಲಿರುವ ವ್ಯಕ್ತಿಗಳಿಗೆ ಬೆಂಬಲ) ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದ ಪ್ರಾಯೋಗಿಕ ಯೋಜನೆಯ ಭಾಗವಾಗಿದೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ವಿಶಾಲ ಉಪಕ್ರಮದ ಭಾಗವಾಗಿ ಇಂದೋರ್ ಅನ್ನು ಭಿಕ್ಷುಕ ಮುಕ್ತಗೊಳಿಸುವ ಗುರಿಯನ್ನು ಈ ನಿರ್ಧಾರ ಹೊಂದಿದೆ.

ರಾಜ್ಯ ಸರ್ಕಾರಗಳು, ಸ್ಥಳೀಯ ಅಧಿಕಾರಿಗಳು ಮತ್ತು ಸ್ವಯಂಸೇವಾ ಸಂಸ್ಥೆಗಳ ಮೂಲಕ ಜಾರಿಗೊಳಿಸಲಾದ ಈ ಯೋಜನೆಯು ಜಾಗೃತಿ ಮೂಡಿಸುವಿಕೆ, ಗುರುತಿಸುವಿಕೆ, ಪುನರ್ವಸತಿ, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದು, ಸಮಾಲೋಚನೆ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಸುಸ್ಥಿರ ಪರಿಹಾರದಂತಹ ಹಲವಾರು ಸೇವೆಗಳನ್ನು ಒದಗಿಸುತ್ತದೆ.

ಜನವರಿ 1, 2025ರಿಂದ ಅನ್ವಯವಾಗುವಂತೆ, ಇಂದೋರ್ ಜಿಲ್ಲಾ ವ್ಯಾಪ್ತಿಯಲ್ಲಿನ ಭಿಕ್ಷುಕರಿಗೆ ಭಿಕ್ಷೆ ನೀಡುವುದು ಅಥವಾ ಇನ್ಯಾವುದಾದರೂ ರೀತಿಯಲ್ಲಿ ಸಹಾಯಹಸ್ತ ಚಾಚುವುದನ್ನು ನಿಷೇಧಿಸಿ, ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿರುವ ಭಿಕ್ಷುಕರಿಗೆ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT