ಲಕ್ಷ್ಮಣ ಸವದಿ , ಆದಿತ್ಯ ಠಾಕ್ರೆ 
ದೇಶ

ಮುಂಬೈ ಕೇಂದ್ರಾಡಳಿತ ಪ್ರದೇಶವಾಗಬೇಕು: ಲಕ್ಷ್ಮಣ ಸವದಿ ವಿರುದ್ಧ ಆದಿತ್ಯ ಠಾಕ್ರೆ ಕಿಡಿ!

ಮುಂಬೈಯನ್ನೂ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂಬ ಸವದಿ ಹೇಳಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿದ ಆದಿತ್ಯ ಠಾಕ್ರೆ..

ಮುಂಬೈ: ವಾಣಿಜ್ಯ ನಗರಿ ಮುಂಬೈ ಕ್ರೇಂದ್ರಾಡಳಿತ ಪ್ರದೇಶವಾಗಬೇಕು ಎಂಬ ಕರ್ನಾಟಕದ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ  ವಿರುದ್ಧ ಇಂಡಿಯಾ ಮೈತ್ರಿಕೂಟದ ಶಿವಸೇನಾ (ಯುಬಿಟಿ) ಶಾಸಕ ಆದಿತ್ಯ ಠಾಕ್ರೆ ಕಿಡಿಕಾರಿದ್ದಾರೆ.

ಮಹಾರಾಷ್ಟ್ರದ ನಾಯಕರು ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಹೇಳಿದ್ದಾರೆ. ಹಾಗಿದ್ದರೆ ಮುಂಬೈಯನ್ನೂ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂಬ ಸವದಿ ಹೇಳಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿದ ಆದಿತ್ಯ ಠಾಕ್ರೆ, ಮುಂಬೈಯನ್ನು ಮಹಾರಾಷ್ಟ್ರದಿಂದ ಬೇರ್ಪಡಿಸುವ ಯಾವುದೇ ಪ್ರಯತ್ನ ಸಹಿಸುವುದಿಲ್ಲ ಎಂದರು.

ಸವದಿ ಹೇಳಿಕೆಯನ್ನು ಖಂಡಿಸಿದ ಆದಿತ್ಯ ಠಾಕ್ರೆ, ಕಾಂಗ್ರೆಸ್ ಅಥವಾ ಬಿಜೆಪಿ ಯಾವುದೇ ಪಕ್ಷವಾಗಿರಲಿ, ಮುಂಬೈಯನ್ನು ಮಹಾರಾಷ್ಟ್ರದಿಂದ ಬೇರ್ಪಡಿಸುವ ಪ್ರಯತ್ನವನ್ನು ಶಿವಸೇನಾ (ಯುಬಿಟಿ) ಸಹಿಸುವುದಿಲ್ಲ. ಮುಂಬೈ ನಮ್ಮ ಜನ್ಮಭೂಮಿ. ಮರಾಠರು ಅದನ್ನು ರಕ್ತನೀಡಿ ಕಟ್ಟಿದ್ದಾರೆ. ನಮಗೆ ಮುಂಬೈಯನ್ನೂ ಯಾರೂ ಕೊಟ್ಟಿಲ್ಲ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಶರದ್ ಪವಾರ್ ನೇತೃತ್ವದ ಎನ್ ಸಿಪಿ (ಎಸ್ ಪಿ) ಹಾಗೂ ಶಿವಸೇನಾ (ಯುಬಿಟಿ) ಮಹಾ ವಿಕಾಸ್ ಆಘಾಡಿಯ ಮೈತ್ರಿ ಪಕ್ಷಗಳಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ