ನಟ ಅಲ್ಲು ಅರ್ಜುನ್ 
ದೇಶ

ಪುಷ್ಪ-2 ಕಾಲ್ತುಳಿತದಲ್ಲಿ ಗಾಯಗೊಂಡ 9 ವರ್ಷದ ಬಾಲಕನ ಮೆದುಳು ನಿಷ್ಕ್ರಿಯ: ಅಲ್ಲು ಅರ್ಜುನ್ ಗೆ ಮತ್ತೊಂದು ಸಂಕಷ್ಟ

ಸದ್ಯ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆ ದೀರ್ಘಾವಧಿಯಾಗುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.

ಹೈದರಾಬಾದ್: ಪುಷ್ಪ 2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಸಾವನಪ್ಪಿದ ಮಹಿಳೆಯ 9 ವರ್ಷದ ಮಗ ಶ್ರೀತೇಜಾಗೆ ಬ್ರೈನ್‌ ಡೆಡ್ ಆಗಿದ್ದು, ಇದರಿಂದ ಅಲ್ಲು ಅರ್ಜುನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಕುರಿತು ಹೈದ್ರಾಬಾದ್ ಸಿಟಿ ಪೊಲೀಸ್ ಕಮಿಷನರ್ ಸಿ.ವಿ ಆನಂದ್ ಮಾಹಿತಿ ನೀಡಿದ್ದಾರೆ.

ಬಾಲಕ ದಾಖಲಾಗಿದ್ದ ಕಿಮ್ಸ್‌ ಆಸ್ಪತ್ರೆಗೆ ಪೊಲೀಸ್‌ ಕಮಿಷನರ್‌ ಭೇಟಿ ನೀಡಿದ್ದರು. ಬಳಿಕ ಮಾತನಾಡಿದ ಅವರು ಕಾಲ್ತುಳಿತದ ಸಂದರ್ಭದಲ್ಲಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಬಾಲಕ ಶ್ರೀತೇಜ ಸ್ಥಿತಿ ಮತ್ತಷ್ಟು ಗಂಭೀರವಾಗಿತ್ತು. ಇದೀಗ ಬಾಲಕನ ಮೆದುಳು ನಿಷ್ಕ್ರಿಯಗೊಂಡಿದೆ. ಸದ್ಯ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆ ದೀರ್ಘಾವಧಿಯಾಗುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಶ್ರೀತೇಜಾ ಅವರ ಆರೋಗ್ಯದ ಕುರಿತು ಶೀಘ್ರದಲ್ಲೇ ವೈದ್ಯಕೀಯ ಬುಲೆಟಿನ್ ಅನ್ನು ಸಹ ವೈದ್ಯರು ಬಿಡುಗಡೆ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಆರೋಗ್ಯ ಕಾರ್ಯದರ್ಶಿ ಡಾ.ಕ್ರಿಸ್ಟಿನಾ, ನಾವು ಪ್ರತಿ ದಿನ ಶ್ರೀ ತೇಜಾ ಆರೋಗ್ಯ ಪರಿಸ್ಥಿತಿ ಮಾನಿಟರ್ ಮಾಡುತ್ತಿದ್ದೇವೆ. ಆದಷ್ಟು ಬೇಗ ಶ್ರೀ ತೇಜ ಗುಣಮುಖರಾಗಲಿ ಎಂಬುವುದು ನಮ್ಮ ಬಯಕೆ. ಇದಕ್ಕಾಗಿ ಎಲ್ಲಾ ಪ್ರಯತ್ನ ಮಾಡುತ್ತೇವೆ. ವೈದ್ಯರ ತಂಡ ಸಂಪೂರ್ಣ ನಿಗಾ ವಹಿಸಿದೆ ಎಂದು ಡಾ.ಕ್ರಿಸ್ಟಿನಾ ಹೇಳಿದ್ದಾರೆ. ಶ್ರೀ ತೇಜಾ ಉಳಿಸಲು ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ. ಶ್ರೀ ತೇಜಾ ತಂದೆ ಜೊತೆ ಚರ್ಚಿಸಲಾಗಿದೆ. ಶ್ರೀ ತೇಜಾ ತಂದೆಗೆ ಎಲ್ಲಾ ನೆರವು ನೀಡಲಾಗುತ್ತದೆ. ಶ್ರೀ ತೇಜಾ ಚಿಕಿತ್ಸೆಯ ಸಂಪೂರ್ಣ ವೆಚ್ಚ ಸರ್ಕಾರ ಭರಿಸಲಿದೆ. ಚಿಕಿತ್ಸೆಯ ಮಾಹಿತಿ ನೀಡಲಾಗಿದೆ. ಪ್ರತಿ ಅಪ್‌ಡೇಟ್ ನೀಡಲಾಗಿದೆ ಎಂದು ಕಾರ್ಯದರ್ಶಿ ಹೇಳಿದ್ದಾರೆ. ‘ಪುಷ್ಪ 2’ ರಿಲೀಸ್ ವೇಳೆ, ಕಾಲ್ತುಳಿತಕ್ಕೆ ಮೃತ ರೇವತಿ ಪುತ್ರ ಶ್ರೀತೇಜಾ ಕೂಡ ತೀವ್ರ ಗಾಯಗೊಂಡಿದ್ದ, ಈ ಹಿನ್ನೆಲೆ ತುರ್ತು ನಿಗಾ ಘಟಕದಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel