ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್  
ದೇಶ

ಸಿಎಂ ಯೋಗಿ ಆದಿತ್ಯನಾಥ್ ಗೆ ಕೊಲೆ ಬೆದರಿಕೆ: ಉತ್ತರ ಪ್ರದೇಶ ವ್ಯಕ್ತಿಯ ಬಂಧನ

ಪೊಲೀಸರ ಪ್ರಕಾರ, ಅನಿಲ್ ಎಂಬ ವ್ಯಕ್ತಿ, 112 ಕ್ಕೆ ಡಯಲ್ ಮಾಡಿ, ಜನವರಿ 26 ರಂದು ಮುಖ್ಯಮಂತ್ರಿಯನ್ನು ಶೂಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಬರೇಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಪೊಲೀಸ್ ಅಧಿಕಾರಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಅನಿಲ್ ಎಂಬ ವ್ಯಕ್ತಿ, ತುರ್ತು ಸೇವಾ ಸಂಖ್ಯೆ 112 ಕ್ಕೆ ಡಯಲ್ ಮಾಡಿ, ಜನವರಿ 26 ರಂದು ಮುಖ್ಯಮಂತ್ರಿಯನ್ನು ಶೂಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಇಜ್ಜತ್‌ನಗರ ಪೊಲೀಸ್ ಠಾಣೆಯ ಉಸ್ತುವಾರಿ ಮತ್ತು ಇತರ ಅಧಿಕಾರಿಗಳಿಗೂ ಬೆದರಿಕೆ ಹಾಕಿದ್ದಾನೆ ಎಂದು ಅವರು ಹೇಳಿದ್ದಾರೆ.

"ಮಂಗಳವಾರ ರಾತ್ರಿ ಬೆದರಿಕೆ ಬಂದ ನಂತರ, ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಆದರೆ ಆರೋಪಿಯ ಫೋನ್ ಸ್ವಿಚ್ ಆಫ್ ಆಗಿತ್ತು.

ರಾತ್ರಿಯಿಡೀ ನಡೆಸಿದ ವ್ಯಾಪಕ ಕಾರ್ಯಾಚರಣೆಯ ನಂತರ, ಅನಿಲ್‌ನನ್ನು ಪತ್ತೆ ಮಾಡಿ ಬುಧವಾರ ಬಂಧಿಸಲಾಯಿತು” ಎಂದು ಇಜ್ಜತ್‌ನಗರ ಪೊಲೀಸ್ ಠಾಣೆಯ ಎಸ್‌ಎಚ್‌ಒ ಧನಂಜಯ್ ಪಾಂಡೆ ತಿಳಿಸಿದ್ದಾರೆ.

ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದೆ. ಗುರುವಾರದ ನಂತರ ಅನಿಲ್ ನನ್ನು ಇಲ್ಲಿನ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!