ವ್ಯಕ್ತಿ ಶವ ಪರಿಶೀಲಿಸುತ್ತಿರುವ ಪೊಲೀಸರು PTI
ದೇಶ

ಪಾರ್ಸೆಲ್ ತೆರೆದು ನೋಡಿ ಬೆಚ್ಚಿಬಿದ್ದ ಮಹಿಳೆ: ಅಪರಿಚಿತ ವ್ಯಕ್ತಿಯ ಶವದ ಜೊತೆಗೆ 1.30 ಕೋಟಿ ಹಣಕ್ಕೆ ಬೇಡಿಕೆ!

ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಮಹಿಳೆಯೊಬ್ಬರು ಅಪರಿಚಿತ ವ್ಯಕ್ತಿಯ ಶವವನ್ನು ಹೊಂದಿರುವ ಪಾರ್ಸೆಲ್ ನೋಡಿ ಆಘಾತಕ್ಕೊಳಗಾಗಿದ್ದರು. ಪಶ್ಚಿಮ ಗೋದಾವರಿ ಜಿಲ್ಲೆಯ ಉಂಡಿ ಮಂಡಲದ ಯಂಡಗಂಡಿ ಗ್ರಾಮದಲ್ಲಿ ಈ ಭಯಾನಕ ಘಟನೆ ನಡೆದಿದೆ.

ಅಮರಾವತಿ: ಉತ್ತರ ಪ್ರದೇಶ ಮತ್ತು ಬಿಹಾರಗಳಲ್ಲಿ ಇಂತಹ ಕುಕೃತ್ಯಗಳು ನಡೆಸುವುದು ಸಾಮಾನ್ಯ. ಆದರೆ ದಕ್ಷಿಣ ರಾಜ್ಯದಲ್ಲಿ ಸುಲಿಗೆ ಬೇಡಿಕೆ ಪೊಲೀಸ್ ಇಲಾಖೆಯಲ್ಲಿ ಪ್ರಶ್ನಾರ್ಥಕ ಚಿಹ್ನೆಯನ್ನು ಹುಟ್ಟುಹಾಕಿದೆ ಮಾತ್ರವಲ್ಲದೆ ಸರ್ಕಾರವನ್ನು ಬೆಚ್ಚಿಬೀಳಿಸಿದೆ. ಮಹಿಳೆಯೊಬ್ಬರು ಎಲೆಕ್ಟ್ರಿಕಲ್ ಸಾಮಾನುಗಳ ಹೆಸರಿನ ಪಾರ್ಸೆಲ್‌ನಲ್ಲಿ ಪುರುಷನ ಶವ ಪತ್ತೆಯಾಗಿದೆ. ಇದೇ ಅಲ್ಲದೆ ಮೃತದೇಹದ ಜೊತೆಗೆ ಮಹಿಳೆಗೆ ಪಾರ್ಸೆಲ್‌ನಲ್ಲಿ ಪತ್ರವೂ ಸಿಕ್ಕಿದ್ದು, ಅದರಲ್ಲಿ 1.3 ಕೋಟಿ ರೂಪಾಯಿ ನೀಡುವಂತೆ ಬೆದರಿಸಿದ್ದಾರೆ.

ವಾಸ್ತವವಾಗಿ, ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಮಹಿಳೆಯೊಬ್ಬರು ಅಪರಿಚಿತ ವ್ಯಕ್ತಿಯ ಶವವನ್ನು ಹೊಂದಿರುವ ಪಾರ್ಸೆಲ್ ನೋಡಿ ಆಘಾತಕ್ಕೊಳಗಾಗಿದ್ದರು. ಪಶ್ಚಿಮ ಗೋದಾವರಿ ಜಿಲ್ಲೆಯ ಉಂಡಿ ಮಂಡಲದ ಯಂಡಗಂಡಿ ಗ್ರಾಮದಲ್ಲಿ ಈ ಭಯಾನಕ ಘಟನೆ ನಡೆದಿದೆ. ನಾಗ ತುಳಸಿ ಎಂಬ ಮಹಿಳೆ ಮನೆ ಕಟ್ಟಲು ಆರ್ಥಿಕ ಸಹಾಯಕ್ಕಾಗಿ ಕ್ಷತ್ರಿಯ ಸೇವಾ ಸಮಿತಿಗೆ ಅರ್ಜಿ ಸಲ್ಲಿಸಿದ್ದರು. ಸಮಿತಿಯು ಮಹಿಳೆಗೆ ಟೈಲ್ಸ್ ಕಳುಹಿಸಿತ್ತು.

ಮಹಿಳೆ ಮತ್ತೆ ಕ್ಷತ್ರಿಯ ಸೇವಾ ಸಮಿತಿಗೆ ಕಟ್ಟಡ ನಿರ್ಮಾಣಕ್ಕೆ ನೆರವು ನೀಡುವಂತೆ ಮನವಿ ಮಾಡಿದ್ದರು. ಸಮಿತಿಯು ವಿದ್ಯುತ್ ಉಪಕರಣಗಳನ್ನು ಒದಗಿಸುವ ಭರವಸೆ ನೀಡಿತ್ತು ಎಂದು ವರದಿಯಾಗಿದೆ. ಮಹಿಳೆಗೆ ಲೈಟ್‌ಗಳು, ಫ್ಯಾನ್‌ಗಳು ಮತ್ತು ಸ್ವಿಚ್‌ಗಳನ್ನು ಒದಗಿಸಲಾಗುವುದು ಎಂದು ವಾಟ್ಸಾಪ್‌ನಲ್ಲಿ ಸಂದೇಶ ಬಂದಿತ್ತು. ಗುರುವಾರ ರಾತ್ರಿ ವ್ಯಕ್ತಿಯೊಬ್ಬ ಮಹಿಳೆಯ ಮನೆ ಬಾಗಿಲಿಗೆ ಬಾಕ್ಸ್ ತಲುಪಿಸಿ ಅದರಲ್ಲಿ ವಿದ್ಯುತ್ ಉಪಕರಣಗಳಿವೆ ಎಂದು ಹೇಳಿ ಹೊರಟು ಹೋಗಿದ್ದನು.

ಸ್ವಲ್ಪ ಸಮಯದ ನಂತರ, ತುಳಸಿ ಪಾರ್ಸೆಲ್ ತೆರೆದು ಅದರಲ್ಲಿ ವ್ಯಕ್ತಿಯ ಮೃತ ದೇಹವನ್ನು ನೋಡಿ ಆಘಾತಕ್ಕೊಳಗಾದರು. ಈ ಇಡೀ ಘಟನೆಯಿಂದ ಅವರ ಮನೆಯವರು ಕೂಡ ಆತಂಕಗೊಂಡಿದ್ದರು. ಈ ಸಂಪೂರ್ಣ ವಿಷಯವನ್ನು ತಕ್ಷಣವೇ ಪೊಲೀಸರಿಗೆ ತಿಳಿಸಿದ್ದು ಸ್ಥಳಕ್ಕಾಗಮಿಸಿ ಪೊಲೀಸರು ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅದ್ನಾನ್ ನಯೀಮ್ ಅಸ್ಮಿ ಕೂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾರ್ಸೆಲ್‌ನಲ್ಲಿ ಪತ್ರವೊಂದು ಪತ್ತೆಯಾಗಿದ್ದು, ಅದರಲ್ಲಿ 1.30 ಕೋಟಿ ರೂ.ಗೆ ಬೇಡಿಕೆ ಇಡಲಾಗಿದ್ದು, ಬೇಡಿಕೆ ಈಡೇರಿಸದಿದ್ದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕುಟುಂಬಕ್ಕೆ ಎಚ್ಚರಿಕೆ ನೀಡಿದ್ದಾರೆ. ಪಾರ್ಸೆಲ್ ತಲುಪಿಸಿದ ವ್ಯಕ್ತಿಯನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಪೊಲೀಸರ ಪ್ರಕಾರ ಇದು ಸುಮಾರು 45 ವರ್ಷದ ವ್ಯಕ್ತಿಯ ಮೃತದೇಹ. 4-5 ದಿನಗಳ ಹಿಂದೆ ವ್ಯಕ್ತಿ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇದು ಕೊಲೆ ಪ್ರಕರಣವೇ ಎಂಬುದನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT