ಪ್ರಿಯಾಂಕಾ ಗಾಂಧಿಗೆ ಗಿಫ್ಟ್ ನೀಡಲಾದ ಬ್ಯಾಗ್ 
ದೇಶ

ಸಂಸದೆ ಪ್ರಿಯಾಂಕಾ ಗಾಂಧಿಗೆ '1984 ದಂಗೆ' ನೆನಪಿಸುವ ಬ್ಯಾಗ್ ಗಿಫ್ಟ್ ನೀಡಿದ ಬಿಜೆಪಿ ಸಂಸದೆ!

ವಯನಾಡು ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಇತ್ತೀಚಿಗೆ ಲೋಕಸಭಾ ಕಲಾಪದ ವೇಳೆ ಪ್ಯಾಲೇಸ್ತಿನ್‌ ಮತ್ತು ಬಾಂಗ್ಲಾದೇಶ ಉಲ್ಲೇಖಿಸುವ ಬ್ಯಾಗ್ ಹಿಡಿದು ಬಂದಿದ್ದು, ದೊಡ್ಡ ಸುದ್ದಿಯಾಗಿತ್ತು. ಇದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.

ನವದೆಹಲಿ: ಬಿಜೆಪಿ ಸಂಸದೆ ಅಪರಾಜಿತಾ ಸಾರಂಗಿ ಅವರು ಶುಕ್ರವಾರ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕೆಂಪು ಬಣ್ಣದಲ್ಲಿ '1984' ಎಂದು ಬರೆದ ಬ್ಯಾಗ್ ವೊಂದನ್ನು ಗಿಫ್ಟ್ ಆಗಿ ನೀಡಿದ್ದಾರೆ.

ವಯನಾಡು ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಇತ್ತೀಚಿಗೆ ಲೋಕಸಭಾ ಕಲಾಪದ ವೇಳೆ ಪ್ಯಾಲೇಸ್ತಿನ್‌ ಮತ್ತು ಬಾಂಗ್ಲಾದೇಶ ಉಲ್ಲೇಖಿಸುವ ಬ್ಯಾಗ್ ಹಿಡಿದು ಬಂದಿದ್ದು, ದೊಡ್ಡ ಸುದ್ದಿಯಾಗಿತ್ತು. ಇದಕ್ಕೆ ಪಾಕಿಸ್ತಾನದ ರಾಜಕಾರಣಿಯೊಬ್ಬರು ಶ್ಲಾಘಿಸಿದರೆ, ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.

ಈ ವಿಚಾರ ಸುದ್ದಿಯಲ್ಲಿರುವಾಗಲೇ ಈಗ ಬಿಜೆಪಿ ಸಂಸದೆ ಅಪರಾಜಿತ ಸಾರಂಗಿ ಅವರು ಪ್ರಿಯಾಂಕಾ ಗಾಂಧಿಯವರಿಗೆ ಬ್ಯಾಗೊಂದನ್ನು ಗಿಫ್ಟ್ ನೀಡಿದ್ದಾರೆ.

ಭುವನೇಶ್ವರ್ ಸಂಸದೆಯಾಗಿರುವ ಸಾರಂಗಿ, ಪಾರ್ಲಿಮೆಂಟ್ ಕಾರಿಡಾರ್ ನಲ್ಲಿ ಪ್ರಿಯಾಂಕಾ ಗಾಂಧಿ ಅವರಿಗೆ ಬ್ಯಾಗ್ ನೀಡಿದ್ದಾರೆ. ಸಾರಂಗಿಯಿಂದ ಬ್ಯಾಗ್ ಪಡೆದ ಪ್ರಿಯಾಂಕಾ ಗಾಂಧಿ, ಅದರ ಮೇಲೆ ಏನು ಬರೆಯಲಾಗಿದೆ ಎಂಬುದನ್ನು ಗಮನಿಸದೇ ಹಾಗೆಯೇ ಮುಂದೆ ಸಾಗಿದ್ದಾರೆ. ಈ ಬ್ಯಾಗಿನ ಮೇಲೆ 1984 ಎಂದು ಬರೆಯಲಾಗಿದೆ.

ಪ್ರಿಯಾಂಕಾ ಗಾಂಧಿ ಅಜ್ಜಿ ಇಂದಿರಾಗಾಂಧಿ ಸಾವಿನ ನಂತರ ಈ ಸಿಖ್ ದಂಗೆ ನಡೆದಿತ್ತು, ಇದಾರಲ್ಲಿ ಸಿಖ್ ಸಮುದಾಯವನ್ನು ಹುಡುಕಿ ಹುಡುಕಿ ಹತ್ಯೆ ಮಾಡಲಾಗಿತ್ತು. ಇಂದಿರಾಗಾಂಧಿ ಹತ್ಯೆಗೆ ಪ್ರತೀಕಾರವಾಗಿ ಈ ಸಿಖ್ ಹತ್ಯಾಕಾಂಡ ನಡೆದಿತ್ತು. ಹಲವು ಕಾಂಗ್ರೆಸ್ ನಾಯಕರು ಈ ದಂಗೆಯಲ್ಲಿ ಭಾಗಿಯಾದ ಆರೋಪವಿತ್ತು.

1984ರ ದಂಗೆ ಕುರಿತು ನೆನಪಿಸುವ ಬ್ಯಾಗ್ ನ್ನು ಉಡುಗೊರೆಯಾಗಿ ನೀಡಲಾಗಿದೆ. ಈ ವಿಷಯವನ್ನು ಸಹ ಪ್ರಿಯಾಂಕಾ ಗಾಂಧಿ ತನ್ನ ಬ್ಯಾಗ್ ನೊಂದಿಗೆ ಪ್ರಸ್ತಾಪಿಸಲಿ ಎಂದು ಬಿಜೆಪಿ ಸಂಸದೆ ಹೇಳಿದ್ದಾರೆ. ಪ್ಯಾಲೆಸ್ತೀನ್ ಜನರಿಗೆ ಬೆಂಬಲ ಸೂಚಿಸುವ ಸಲುವಾಗಿ ಸೋಮವಾರ ಪ್ರಿಯಾಂಕಾ ಗಾಂಧಿ ಸಂಸತ್ತಿಗೆ ಪ್ಯಾಲೆಸ್ತೀನ್ ಎಂದು ಬರೆದ ಬ್ಯಾಗ್ ನೊಂದಿಗೆ ಬಂದಿದ್ದರು. ಮಂಗಳವಾರ ಬಾಂಗ್ಲಾದೇಶದಲ್ಲಿನ ಅಲ್ಪಸಂಖ್ಯಾತ ಹಿಂದೂ ಮತ್ತು ಕ್ರಿಶ್ಚಿಯನ್ನರ ಪರವಾಗಿ ನಿಲ್ಲಿ ಎಂಬ ಸಂದೇಶವಿರುವ ಬ್ಯಾಗ್ ನೊಂದಿಗೆ ಪ್ರಿಯಾಂಕಾ ಗಾಂಧಿ ಸಂಸತ್ತಿಗೆ ಬಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ ಮತ್ತು ಚೀನಾ 'ಸ್ನೇಹಿತರಾಗಿರುವುದೇ' ಸರಿಯಾದ ಆಯ್ಕೆ: ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

Dharmasthala Case: NIA ತನಿಖೆ ಅಗತ್ಯವಿಲ್ಲ, SITಗೆ ಸ್ವಾತಂತ್ರ್ಯ ನೀಡಲಾಗಿದೆ; ಸಿಎಂ ಸಿದ್ದರಾಮಯ್ಯ

ಆಪರೇಷನ್ ಸಿಂಧೂರ ವೇಳೆಯ 'ಅಪವಿತ್ರ ಮೈತ್ರಿ'ಯನ್ನು ಸದ್ದಿಲ್ಲದೆ ಒಪ್ಪಿಕೊಂಡ ಮೋದಿ ಸರ್ಕಾರ! ಚೀನಾ ಆಕ್ರಮಣವನ್ನು ಕಾನೂನುಬದ್ಧಗೊಳಿಸುತ್ತಿದ್ದೆಯೇ? ಕಾಂಗ್ರೆಸ್

ಬೆಂಗಳೂರು: ಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡಿದ BMTC ಬಸ್ ಕಂಡೆಕ್ಟರ್; ನೆಟ್ಟಿಗರು ಆಕ್ರೋಶ, Video!

ಮಕ್ಕಳ ಕಣ್ಣೀರಿಗೂ ಕರಗದ ಮನಸ್ಸು: ವಿಚ್ಛೇನದ ನೀಡಿ ಪ್ರಿಯಕರನ ಜೊತೆ ಹೋಗುತ್ತಿದ್ದ ತಾಯಿಯನ್ನು ಪರಿ ಪರಿಯಾಗಿ ಬೇಡಿದ ಮಕ್ಕಳು, Video!

SCROLL FOR NEXT