ನವದೆಹಲಿ: ಮುಂದಿನ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಮಾಜಿ CJI ಡಿವೈ ಚಂದ್ರಚೂಡ್ ಅವರನ್ನು ಪರಿಗಣಿಸಲಾಗಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ವರದಿಗಳು ಸತ್ಯವಲ್ಲಾ ಎಂದು ಚಂದ್ರಚೂಡ್ ಅವರು ಪ್ರತಿಕ್ರಿಯಿಸಿದ್ದಾರೆ.
ಪ್ರಸ್ತುತ ನಿವೃತ್ತ ಜೀವನವನ್ನು ಎಂಜಾಯ್ ಮಾಡುತ್ತಿರುವುದಾಗಿ ದೇಶದ 50ನೇ ಸಿಜೆಐ ಆಗಿದ್ದ ಚಂದ್ರಚೂಡ್ ಅವರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ನವೆಂಬರ್ 10 ರಂದು ಅವರು ಸೇವೆಯಿಂದ ನಿವೃತ್ತಿಯಾಗಿದ್ದರು.
ಮಾಜಿ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ಅವರ ಅಧಿಕಾರವಧಿ ಜೂನ್ 1 ರಂದು ಪೂರ್ಣಗೊಂಡ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನ ಖಾಲಿಯಿದೆ.
ಮುಂದಿನ NHRC ಅಧ್ಯಕ್ಷರ ಆಯ್ಕೆ ಸಂಬಂಧ ಡಿಸೆಂಬರ್ 18 ರಂದು ನಡೆದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ರಾಜ್ಯಸಭೆ ಮತ್ತು ಲೋಕಸಭೆಯ ವಿಪಕ್ಷ ನಾಯಕರಾದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಪಾಲ್ಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ.