ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವುದು. 
ದೇಶ

ಮೊಹಾಲಿಯಲ್ಲಿ ಬಹುಮಹಡಿ ಕಟ್ಟಡ ಕುಸಿತ: ಇಬ್ಬರ ಸಾವು, ಹಲವರು ಸಿಲುಕಿರುವ ಶಂಕೆ, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿ

ನಿನ್ನೆ (ಶನಿವಾರ) ಸಂಜೆ ವೇಳೆಗೆ 4 ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳಡಿ ಕನಿಷ್ಠ ಐವರು ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.

ಚಂಡೀಗಢ: ಪಂಜಾಬ್‌ನ ಮೊಹಾಲಿ ಜಿಲ್ಲೆಯ ಸೊಹಾನಾ ಗ್ರಾಮದಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದಿದ್ದು, ಇಬ್ಬರು ಮೃತಪಟ್ಟು ಹಲವರು ಸಿಲುಕಿರುವ ಘಟನೆ ಶನಿವಾರ ನಡೆದಿದೆ.

ದೃಷ್ಟಿ ವರ್ಮಾ (20) ಮೃತ ಮಹಿಳೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಅವರನ್ನು ರಕ್ಷಿಸಿ ಸೊಹಾನಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆ (ಶನಿವಾರ) ಸಂಜೆ ವೇಳೆಗೆ 4 ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳಡಿ ಕನಿಷ್ಠ ಐವರು ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ಇದೀಗ ಮತ್ತೋರ್ವ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಇದರೊಂದಿಗೆ ಘಟನೆಯಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.

ಸದ್ಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಘಟನೆ ಸಂಬಂಧ ಕಟ್ಟಡದ ಮಾಲೀಕರಾದ ಪರ್ವಿಂದರ್ ಸಿಂಗ್‌ ಮತ್ತು ಗಗನ್‌ದೀಪ್ ಸಿಂಗ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 105ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೊಹಾಲಿ ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ ದೀಪಕ್ ಪರೀಕ್ ತಿಳಿಸಿದ್ದಾರೆ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು, ಕಟ್ಟಡದ ಕುಸಿತದ ಹಿಂದಿನ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಾಹಿಬ್ಜಾದಾ ಅಜಿತ್ ಸಿಂಗ್ ನಗರದಲ್ಲಿ ಬಹುಮಹಡಿ ಕಟ್ಟಡ ಕುಸಿತದ ಸುದ್ದಿ ಅತೀವ್ರ ನೋವು ತಂದಿದ್ದು, ಸಂಪೂರ್ಣ ಆಡಳಿತ ಮತ್ತು ಇತರ ರಕ್ಷಣಾ ಕಾರ್ಯಾಚರಣೆ ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ನಿರ್ಣಯಕ್ಕೆ ಒಪ್ಪಬೇಕು, ವರಿಷ್ಠರು ಹೇಳಿದಾಗ ದೆಹಲಿಗೆ ಹೋಗುವೆ: ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಪ್ರತಿಕ್ರಿಯೆ; ಡಿಕೆಶಿ ಆಪ್ತರ ನಡೆಗೆ CM ತೀವ್ರ ಅಸಮಾಧಾನ

ರಾಜ್ಯದಲ್ಲಿ ಯಾರೂ ನಿರೀಕ್ಷಿಸದಂತಹ "ಸ್ಫೋಟಕ" ರಾಜಕೀಯ ಬೆಳವಣಿಗೆ: ಕುಮಾರಸ್ವಾಮಿ ಭವಿಷ್ಯ

'ಸಿಎಂ ಕುರ್ಚಿ' ಕದನದ ನಡುವೆ ವರದಿಗಾರರ ಪ್ರಶ್ನೆಗೆ ಕೆರಳಿದ ಡಿಕೆಶಿ! ಹೇಳಿದ್ದೇನು?

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ: ನಾಯಕ ಯಾರು? ರಿಷಭ್ ಪಂತ್ ಅಥವಾ ಕೆಎಲ್ ರಾಹುಲ್! ನಾಳೆ ನಿರ್ಧಾರ

"ನಾವೂ ಕಲಿಯಬೇಕು": ಮಾಮ್ದಾನಿ-ಟ್ರಂಪ್ ಭೇಟಿಯ ಬಗ್ಗೆ ತರೂರ್ ಪೋಸ್ಟ್; ನೀವು ಹೇಳಿದ್ದು ಸರಿ ಆದರೆ ರಾಹುಲ್ ಗೆ ಇದೆಲ್ಲಾ ಅರ್ಥ ಆಗತ್ತಾ?: BJP

SCROLL FOR NEXT