ಪಿವಿ ಸಿಂಧು ಜೊತೆಗೆ ವೆಂಕಟದತ್ತ ಸಾಯಿ 
ದೇಶ

ಉದಯಪುರದ ಐಷಾರಾಮಿ ರೆಸಾರ್ಟ್‌ನಲ್ಲಿ ಪಿವಿ ಸಿಂಧು ವಿವಾಹ; ಡಿಸೆಂಬರ್ 24 ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ

ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಭಾನುವಾರ ರಾಜಸ್ಥಾನದ ಉದಯಪುರದಲ್ಲಿರುವ ಐಷಾರಾಮಿ ರೆಸಾರ್ಟ್ ರಾಫೆಲ್ಸ್‌ನಲ್ಲಿ ತನ್ನ ನಿಶ್ಚಿತ ವರ ವೆಂಕಟದತ್ತ ಸಾಯಿ ಅವರೊಂದಿಗೆ ವಿವಾಹವಾಗಲಿದ್ದಾರೆ.

ಉದಯಪುರ: ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಭಾನುವಾರ ರಾಜಸ್ಥಾನದ ಉದಯಪುರದಲ್ಲಿರುವ ಐಷಾರಾಮಿ ರೆಸಾರ್ಟ್ ರಾಫೆಲ್ಸ್‌ನಲ್ಲಿ ತನ್ನ ನಿಶ್ಚಿತ ವರ ವೆಂಕಟದತ್ತ ಸಾಯಿ ಅವರೊಂದಿಗೆ ವಿವಾಹವಾಗಲಿದ್ದಾರೆ.

ವೆಂಕಟದತ್ತ ಸಾಯಿ ಅವರು ಹೈದರಾಬಾದ್ ಮೂಲದ, ಪೊಸಿಡೆಕ್ಸ್ ಟೆಕ್ನಾಲಜೀಸ್‌ನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ.

ವಿವಾಹದ ನಂತರ, ಡಿಸೆಂಬರ್ 24 ರಂದು ಸಿಂಧು ಅವರ ತವರಾದ ಹೈದರಾಬಾದ್‌ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ಡಿಸೆಂಬರ್ 20 ರಂದು ಸಂಗೀತ ಕಾರ್ಯಕ್ರಮ ಮತ್ತು ಮರುದಿನ ಹಳದಿ, ಪೆಲ್ಲಿಕೂತುರು ಮತ್ತು ಮೆಹೆಂದಿ ಶಾಸ್ತ್ರಗಳು ಅದ್ಧೂರಿಯಾಗಿ ನಡೆದಿವೆ.

ಇತ್ತೀಚೆಗೆ, ಲಖನೌದಲ್ಲಿ ನಡೆದ ಸೈಯದ್ ಮೋದಿ ಇಂಡಿಯಾ ಇಂಟರ್‌ನ್ಯಾಶನಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಫೈನಲ್‌ನಲ್ಲಿ ಚೀನಾದ ವು ಲುವೊ ಯು ಅವರನ್ನು ಸೋಲಿಸುವ ಮೂಲಕ 29 ವರ್ಷದ ಸಿಂಧು ಎರಡು ವರ್ಷಗಳಿಂದ ತನ್ನ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ (BWF) ವರ್ಲ್ಡ್ ಟೂರ್ ಬರವನ್ನು ಕೊನೆಗೊಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್