ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳ: ಶಂಕಿತ ಕಾಶ್ಮೀರಿ ಉಗ್ರನ ಬಂಧನ

ಕಾಶ್ಮೀರ ಕಣಿವೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ 'ತೆಹ್ರೀಕ್ ಇ ಮುಜಾಹಿದ್ದೀನ್' ಸಂಘಟನೆಯ ಸದಸ್ಯನೆಂದು ಶಂಕಿಸಲಾದ ಜಾವೇದ್ ಮುನ್ಷಿಯನ್ನು ಜಮ್ಮು- ಕಾಶ್ಮೀರ ಪೊಲೀಸರು ಮತ್ತು ಬಂಗಾಳ ಪೊಲೀಸರ ಜಂಟಿ ತಂಡ ಬಂಧಿಸಿದೆ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಭಾನುವಾರ ಶಂಕಿತ ಕಾಶ್ಮೀರದ ಉಗ್ರನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಶ್ಮೀರ ಕಣಿವೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ 'ತೆಹ್ರೀಕ್ ಇ ಮುಜಾಹಿದ್ದೀನ್' ಸಂಘಟನೆಯ ಸದಸ್ಯನೆಂದು ಶಂಕಿಸಲಾದ ಜಾವೇದ್ ಮುನ್ಷಿಯನ್ನು ಜಮ್ಮು- ಕಾಶ್ಮೀರ ಪೊಲೀಸರು ಮತ್ತು ಬಂಗಾಳ ಪೊಲೀಸರ ಜಂಟಿ ತಂಡ ಬಂಧಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕಣಿವೆಯಲ್ಲಿ ವಿಧ್ವಂಸಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಉಗ್ರ ಹಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಬೇಕಾಗಿದ್ದ. ಜಮ್ಮು-ಕಾಶ್ಮೀರ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿನ ಇತರ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ ತೆಹೀಕ್ ಇ- ಮುಜಾಹಿದ್ದೀನ್ ಸಂಘಟನೆ ಪಾಕಿಸ್ತಾನದಿಂದ ನಿಯಂತ್ರಿಸುತಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.

ಜಾವೇದ್ ಶ್ರೀನಗರದ ನಿವಾಸಿಯಾಗಿದ್ದರೂ, ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಆತ ಹೊಂದಿರುವ ಸಂಪರ್ಕದ ಬಗ್ಗೆ ನಮಗೆ ತಿಳಿದಿರಲಿಲ್ಲ ಮತ್ತು ಆರೋಪಗಳು ನಿಜವೆಂದು ಕಂಡುಬಂದರೆ ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಜಾವೇದ್ ಸಂಬಂಧಿಕರು ಹೇಳಿದ್ದಾರೆ.

ಬಂಧಿತ ವ್ಯಕ್ತಿಯನ್ನು ಶೀಘ್ರದಲ್ಲೇ ಟ್ರಾನ್ಸಿಟ್ ರಿಮಾಂಡ್‌ಗಾಗಿ ಅಲಿಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇತ್ತೀಚಿಗೆ ಸಿಲಿಗುರಿಯಲ್ಲಿ ಬಾಂಗ್ಲಾದೇಶದ ಅನ್ಸಾರ್ ಅಲ್ ಇಸ್ಲಾಮ್ ಉಗ್ರ ಸಂಘಟನೆಯ 8 ಮಂದಿಯನ್ನು ಬಂಧಿಸಲಾಗಿತ್ತು. ಬಂಧಿತ ಎಂಟು ಜನರಲ್ಲಿ ಇಬ್ಬರು ಮುರ್ಷಿದಾಬಾದ್ ಜಿಲ್ಲೆಯವರಾಗಿದ್ದು, ಉಳಿದವರನ್ನು ಬಂಗಾಳ, ಕೇರಳ ಮತ್ತು ಅಸ್ಸಾಂ ಪೊಲೀಸರು ಬಂಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್