ಅಪಘಾತಕ್ಕೆ ಕಾರಣವಾದ ಟ್ರಕ್. 
ದೇಶ

ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್: ಇಬ್ಬರು ಮಕ್ಕಳು ಸೇರಿ ಮೂವರ ದುರ್ಮರಣ, 6 ಮಂದಿಗೆ ಗಾಯ

ವಘೋಲಿ ಪ್ರದೇಶದ ಫುಟ್‌ಪಾತ್‌ನಲ್ಲಿ ಮಧ್ಯರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಘಟನೆಯ ನಂತರ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಣೆ: ಪಾದಚಾರಿ ಮಾರ್ಗದಲ್ಲಿ ಮಲಗಿದ್ದವರ ಮೇಲೆ ಟ್ರಕ್ ವೊಂದು ಹರಿದ ಪರಿಣ್ಮ ಇಬ್ಬರು ಮಕ್ಕಳು ಸೇರಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆ ನಗರದಲ್ಲಿ ಸೋಮವಾರ ಬೆಳಗಿನ ಜಾವ ನಡೆದಿದೆ.

ಮೃತರನ್ನು ವೈಭವಿ ಪವಾರ್ (1), ವೈಭವ್ ಪವಾರ್ (2) ಮತ್ತು ವಿಶಾಲ್ ಪವಾರ್ (22) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸಸೂನ್ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಕೊಡಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಘೋಲಿ ಪ್ರದೇಶದ ಫುಟ್‌ಪಾತ್‌ನಲ್ಲಿ ಮಧ್ಯರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಘಟನೆಯ ನಂತರ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಶ್ನಂದ್ ಫಾಟಾ ಪ್ರದೇಶದ ಬಳಿಯ ಫುಟ್‌ಪಾತ್‌ನಲ್ಲಿ ಹಲವರು ಮಲಗಿದ್ದರು, ಬಹುತೇಕ ಮಂದಿ ದಿನಗೂಲಿ ಕಾರ್ಮಿಕರಾಗಿದ್ದಾರೆಂದು ತಿಳಿದುಬಂದಿದೆ.

ಚಾಲಕನನ್ನು ಬಂಧಿಸಲಾಗಿದೆ. ಘಟನೆ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)