ಪರೀಕ್ಷೆ (ಸಾಂಕೇತಿಕ ಚಿತ್ರ) Online desk
ದೇಶ

5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ 'ನೋ-ಡಿಟೆನ್ಷನ್ ನೀತಿ' ರದ್ದುಗೊಳಿಸಿದ ಕೇಂದ್ರ

2019 ರ ಶಿಕ್ಷಣ ಹಕ್ಕು ಕಾಯಿದೆ(ಆರ್‌ಟಿಇ) ತಿದ್ದುಪಡಿಯ ನಂತರ, ಕನಿಷ್ಠ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಈ ಎರಡು ತರಗತಿಗಳಿಗೆ 'ನೋ-ಡೆಟೆನ್ಷನ್ ನೀತಿ'ಯನ್ನು ತೆಗೆದುಹಾಕಿವೆ.

ನವದೆಹಲಿ: ವರ್ಷಾಂತ್ಯದ ಪರೀಕ್ಷೆಯಲ್ಲಿ ತೇರ್ಗಡೆಯಾಗದ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ 'ನೋ ಡಿಟೆನ್ಷನ್ ನೀತಿ'ಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2019 ರ ಶಿಕ್ಷಣ ಹಕ್ಕು ಕಾಯಿದೆ(ಆರ್‌ಟಿಇ) ತಿದ್ದುಪಡಿಯ ನಂತರ, ಕನಿಷ್ಠ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಈ ಎರಡು ತರಗತಿಗಳಿಗೆ 'ನೋ-ಡೆಟೆನ್ಷನ್ ನೀತಿ'ಯನ್ನು ತೆಗೆದುಹಾಕಿವೆ.

ಗೆಜೆಟ್ ಅಧಿಸೂಚನೆಯ ಪ್ರಕಾರ, ನಿಯಮಿತ ವಾರ್ಷಿಕ ಪರೀಕ್ಷೆ ನಡೆಸಿದ ನಂತರ, ಪರೀಕ್ಷೆಯಲ್ಲಿ ಅನುತ್ತೀರ್ಣವಾದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಸೂಚನೆ ಮತ್ತು ಮರು ಪರೀಕ್ಷೆಗೆ ಅವಕಾಶವನ್ನು ನೀಡಲಾಗುತ್ತದೆ. ಫಲಿತಾಂಶ ಪ್ರಕಟವಾದ ದಿನಾಂಕದಿಂದ ಎರಡು ತಿಂಗಳ ಅವಧಿಯಲ್ಲಿ ಮರು ಪರೀಕ್ಷೆ ನಡೆಸಲಾಗುತ್ತದೆ.

ಮರುಪರೀಕ್ಷೆಯಲ್ಲೂ ಪಾಸ್ ಆಗಲು ವಿಫಲವಾದರೆ, ಆ ವಿದ್ಯಾರ್ಥಿಗಳು ಅದೇ ತರಗತಿಯಲ್ಲಿ ಮುಂದುವರೆಯಲು ಅವಕಾಶ ನೀಡಲಾಗುತ್ತದೆ. ಪ್ರಾಥಮಿಕ ಶಿಕ್ಷಣ ಮುಗಿಯುವವರೆಗೆ ಯಾವುದೇ ಶಾಲೆಯಿಂದ ಯಾವುದೇ ಮಗುವನ್ನು ಹೊರಹಾಕುವಂತಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಗಳ ಪ್ರಕಾರ, ಕೇಂದ್ರೀಯ ವಿದ್ಯಾಲಯಗಳು, ನವೋದಯ ವಿದ್ಯಾಲಯಗಳು ಮತ್ತು ಸೈನಿಕ ಶಾಲೆಗಳು ಸೇರಿದಂತೆ ಕೇಂದ್ರ ಸರ್ಕಾರ ನಡೆಸುತ್ತಿರುವ 3,000 ಶಾಲೆಗಳಿಗೆ ಈ ಅಧಿಸೂಚನೆ ಅನ್ವಯಿಸುತ್ತದೆ.

"ಶಾಲಾ ಶಿಕ್ಷಣವು ರಾಜ್ಯದ ವಿಷಯವಾಗಿರುವುದರಿಂದ, ರಾಜ್ಯಗಳು ಈ ವಿಷಯದಲ್ಲಿ ತಮ್ಮ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಈಗಾಗಲೇ ದೆಹಲಿ ಸೇರಿದಂತೆ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಎರಡು ವರ್ಗಗಳಿಗೆ ನೋ-ಡೆಟೆನ್ಷನ್ ನೀತಿಯನ್ನು ತೆಗೆದುಹಾಕಿವೆ" ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!