ವಕೀಲ ರಾಮದಾಸ್ 
ದೇಶ

ಹೈದರಾಬಾದ್‌: ನಟ ಅಲ್ಲು ಅರ್ಜುನ್ ನಿವಾಸದ ಮೇಲೆ ಕಲ್ಲು ತೂರಾಟ; ಆರು ಆರೋಪಿಗಳಿಗೆ ಜಾಮೀನು

ಹೈದರಾಬಾದ್‌ನಲ್ಲಿರುವ ನಟ ಅಲ್ಲು ಅರ್ಜುನ್ ಅವರ ಜುಬಿಲಿ ಹಿಲ್ಸ್ ನಿವಾಸದ ಮೇಲೆ ಕಲ್ಲುತೂರಾಟ ನಡೆಸಿ ಧ್ವಂಸಗೊಳಿಸಿದ ಆರೋಪ ಹೊತ್ತಿರುವ ಆರು ಆರೋಪಿಗಳಿಗೆ ಜಾಮೀನು ದೊರಕಿದೆ.

ಹೈದರಾಬಾದ್: ಹೈದರಾಬಾದ್‌ನಲ್ಲಿರುವ ನಟ ಅಲ್ಲು ಅರ್ಜುನ್ ಅವರ ಜುಬಿಲಿ ಹಿಲ್ಸ್ ನಿವಾಸದ ಮೇಲೆ ಕಲ್ಲುತೂರಾಟ ನಡೆಸಿ ಧ್ವಂಸಗೊಳಿಸಿದ ಆರೋಪ ಹೊತ್ತಿರುವ ಆರು ಆರೋಪಿಗಳಿಗೆ ಜಾಮೀನು ದೊರಕಿದೆ. ಆರೋಪಿಗಳನ್ನು ಸೋಮವಾರ ಬೆಳಿಗ್ಗೆ ಹೈದರಾಬಾದ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ವಕೀಲರು ತಿಳಿಸಿದ್ದಾರೆ.

ಆರೋಪಿಗಳ ಪರ ವಾದ ಮಂಡಿಸಿದ ವಕೀಲ ರಾಮದಾಸ್, ಉಸ್ಮಾನಿಯಾ ವಿಶ್ವವಿದ್ಯಾಲಯದ ಈ ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದು, ಆತ್ಮರಕ್ಷಣೆಗಾಗಿ ವಿದ್ಯಾರ್ಥಿಗಳು ಮುಂದಾಗಿದ್ದಾರೆ ಎಂದಿದ್ದಾರೆ.

'ಉಸ್ಮಾನಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಪೊಲೀಸ್ ಪಡೆ ಅವರ ಮೇಲೆ ದಾಳಿ ನಡೆಸಿದಾಗ ಅವರು ತಮ್ಮ ಆತ್ಮರಕ್ಷಣೆಗಾಗಿ ಈ ರೀತಿ ವರ್ತಿಸಿದ್ದಾರೆ. ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇಂದು ಆರೋಪಿಗಳು ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು. ಬಳಿಕ ಆರು ಜನರಿಗೆ ಯಾವುದೇ ಷರತ್ತುಗಳಿಲ್ಲದೆ ಮತ್ತು ದಂಡವಿಲ್ಲದೆ ಜಾಮೀನು ನೀಡಲಾಗಿದೆ' ಎಂದು ರಾಮದಾಸ್ ಎಎನ್‌ಐಗೆ ತಿಳಿಸಿದ್ದಾರೆ.

ಹೈದರಾಬಾದ್‌ನ ಪಶ್ಚಿಮ ವಲಯದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಪ್ರಕಾರ, ಭಾನುವಾರ ಸಂಜೆ ಕೆಲವು ವ್ಯಕ್ತಿಗಳು ಫಲಕಗಳನ್ನು ಹಿಡಿದುಕೊಂಡು ಇದ್ದಕ್ಕಿದ್ದಂತೆ ಜುಬಿಲಿ ಹಿಲ್ಸ್‌ನಲ್ಲಿರುವ ನಟ ಅಲ್ಲು ಅರ್ಜುನ್ ಅವರ ನಿವಾಸಕ್ಕೆ ಧಾವಿಸಿ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು.

ಅವರಲ್ಲಿ ಒಬ್ಬಾತ ಕಾಂಪೌಂಡ್ ಏರಿ ಟೊಮೆಟೊಗಳನ್ನು ಎಸೆಯಲು ಪ್ರಾರಂಭಿಸಿದನು. ಆರು ಜನರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಅವರು ಉಸ್ಮಾನಿಯಾ ವಿಶ್ವವಿದ್ಯಾಲಯದ ಜಂಟಿ ಕ್ರಿಯಾ ಸಮಿತಿಯ (OUJAC) ಭಾಗವೆಂದು ಹೇಳಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಧ್ಯಾ ಚಿತ್ರಮಂದಿರ ಕಾಲ್ತುಳಿತ ಪ್ರಕರಣದಲ್ಲಿ ಮಹಿಳೆ ರೇವತಿ ಸಾವಿಗೆ ಮತ್ತು ಆತನ ಮಗ ಸಾಯಿ ತೇಜಾ ಅಸ್ವಸ್ಥನಾಗಲು ಅಲ್ಲು ಅರ್ಜುನ್ ನೇರ ಕಾರಣ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರು ಮನೆ ಮೇಲೆ ಕಲ್ಲು, ಟೊಮೊಟೊ ಎಸೆದು, ಮನೆ ಮುಂದಿದ್ದ ಹೂವಿನ ಕುಂಡಗಳನ್ನು ಒಡೆದುಹಾಕಿದ್ದರು. ಈ ಆರೋಪದ ಮೇಲೆ ಉಸ್ಮಾನಿಯಾ ವಿಶ್ವವಿದ್ಯಾಲಯದ ಜಂಟಿ ಕ್ರಿಯಾ ಸಮಿತಿಯ (OU-JAC) ಆರು ಸದಸ್ಯರ ವಿರುದ್ಧ ಪ್ರಕರಣ ದಾಖಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ

SCROLL FOR NEXT