ಸಂಸತ್ ಆವರಣದಲ್ಲಿ ಹೈಡ್ರಾಮಾ-ಗಾಯಗೊಂಡ ಬಿಜೆಪಿ ಸಂಸದ 
ದೇಶ

ಸಂಸತ್ ಆವರಣದಲ್ಲಿ ಬಿಜೆಪಿ-ಕಾಂಗ್ರೆಸ್ ಜಟಾಪಟಿ ಪ್ರಕರಣ: ಗಾಯಗೊಂಡಿದ್ದ ಇಬ್ಬರು BJP ಸಂಸದರು ಆಸ್ಪತ್ರೆಯಿಂದ ಡಿಸ್ಚಾರ್ಜ್

ಒಡಿಶಾದ ಪ್ರತಾಪ್ ಸಾರಂಗಿ (69) ಮತ್ತು ಉತ್ತರ ಪ್ರದೇಶದ ಮುಖೇಶ್ ರಜಪೂತ್ ಅವರು ರಾಮ್ ಮನೋಹರ್ ಲೋಹಿಯಾ (ಆರ್‌ಎಂಎಲ್) ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ನವದೆಹಲಿ: 'ಸಂವಿಧಾನ ಶಿಲ್ಪಿ' ಡಾ. ಬಿ.ಆರ್‌ ಅಂಬೇಡ್ಕರ್‌ ಅವರ ವಿಚಾರವಾಗಿ ಸಂಸತ್ ಭವನದ ಆವರಣದಲ್ಲಿ ನಡೆದ ಪ್ರತಿಭಟನೆ ವೇಳೆ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಬಿಜೆಪಿ ಸಂಸದರು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಒಡಿಶಾದ ಪ್ರತಾಪ್ ಸಾರಂಗಿ (69) ಮತ್ತು ಉತ್ತರ ಪ್ರದೇಶದ ಮುಖೇಶ್ ರಜಪೂತ್ ಅವರು ರಾಮ್ ಮನೋಹರ್ ಲೋಹಿಯಾ (ಆರ್‌ಎಂಎಲ್) ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇಬ್ಬರು ಸಂಸದರ ಆರೋಗ್ಯ ಸ್ಥಿತಿ ಈಗ ಸುಧಾರಿಸಿದ್ದು, ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇಬ್ಬರಿಗೂ ಐಸಿಯುನಲ್ಲಿರಿಸಿ ನಿಗಾ ಇರಿಸಲಾಗಿತ್ತು. ಶನಿವಾರ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಸಾರಂಗಿ ಅವರಿಗೆ ಹೃದಯದ ಸಮಸ್ಯೆ ಇದ್ದು, ಸ್ಟೆಂಟ್ ಹಾಕಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಎಂಆರ್‌ಐ ಮತ್ತು ಸಿಟಿ ಸ್ಕ್ಯಾನ್‌ಗಳಲ್ಲಿ ದೊಡ್ಡ ಸಮಸ್ಯೆಗಳು ಕಂಡು ಬಂದಿಲ್ಲ. ಆಸ್ಪತ್ರೆಗೆ ಕರೆತಂದಾಗ ಸಾರಂಗಿ ಅವರ ತಲೆಯಿಂದ ತೀವ್ರ ರಕ್ತಸ್ರಾವವಾಗುತ್ತಿತ್ತು. ಹಣೆಯ ಮೇಲೆ ಆಳವಾಗ ಗಾಯವಾಗಿತ್ತು. ನಂತರ ಹೊಲಿಗೆ ಹಾಕಬೇಕಾಗಿತ್ತು. ರಜಪೂತ್ ಅವರ ತಲೆಗೂ ಗಾಯವಾಗಿತ್ತು, ಪ್ರಜ್ಞೆ ಕಳೆದುಕೊಂಡಿದ್ದರು. ಆದರೆ, ಆಸ್ಪತ್ರೆಗೆ ಕರೆತರುವಾಗ ಪ್ರಜ್ಞೆ ಬಂದಿತ್ತು. ರಕ್ತದೊತ್ತಡದ ಹೆಚ್ಚಾಗಿರುವುದು ಕಂಡು ಬಂದಿತ್ತು. ಇಬ್ಬರ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನ್‌ಗಳಲ್ಲಿ ದೊಡ್ಡ ಸಮಸ್ಯೆಗಳೇನು ಕಂಡುಬಂದಿರಲಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Blast: ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಬಂಧನ!

ಬಾಬಾ ಸಿದ್ದಿಕಿ ಕೊಲೆ: ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಅಮೆರಿಕದಿಂದ ಗಡೀಪಾರು!

POCSO case: ಯಡಿಯೂರಪ್ಪಗೆ ಸಂಕಷ್ಟ, ಡಿ. 2 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್!

ಮೆದುಳು ತಿನ್ನುವ ಅಮೀಬಾ: ಶಬರಿಮಲೆ ಭಕ್ತರಿಗೆ ರಾಜ್ಯ ಆರೋಗ್ಯ ಇಲಾಖೆಯ ಮಾರ್ಗಸೂಚಿ, ಮುನ್ನೆಚ್ಚರಿಕೆ ಕ್ರಮಗಳೇನು?

Chikkaballapur: ಅಡ್ಡಾದಿಡ್ಡಿ ಸ್ಕೂಟಿ ಚಾಲನೆ; ಪ್ರಶ್ನಿಸಿದ ಬೈಕ್​​ ಸವಾರನಿಗೆ ಚಾಕು ಇರಿತ, ಪೊಲೀಸ್ ಠಾಣೆಯಲ್ಲೇ ಲೇಡಿ ಹೈಡ್ರಾಮಾ, Video

SCROLL FOR NEXT