ಪ್ರಾತಿನಿಧಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಹುಟ್ಟುಹಬ್ಬಕ್ಕೆಂದು ಕರೆದು ವಿವಸ್ತ್ರಗೊಳಿಸಿ ಹಲ್ಲೆ; ಮನನೊಂದು ದಲಿತ ಬಾಲಕ ಆತ್ಮಹತ್ಯೆ!

ಜಾತಿ ನಿಂದನೆ ಮತ್ತು ಕಿರುಕುಳ ನೀಡಿದ್ದರಿಂದ ಮನನೊಂದ ಅಪ್ರಾಪ್ತ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ನಡೆದಿದೆ.

ಬಸ್ತಿ: ಜಾತಿ ನಿಂದನೆ ಮತ್ತು ಕಿರುಕುಳ ನೀಡಿದ್ದರಿಂದ ಮನನೊಂದ ಅಪ್ರಾಪ್ತ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ನಡೆದಿದೆ. ಘಟನೆಯ ನಂತರ, ಪೊಲೀಸರು ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಸರ್ಕಲ್ ಆಫೀಸರ್ (ಸಿಒ) ಪ್ರದೀಪ್ ಕುಮಾರ್ ತ್ರಿಪಾಠಿ, 'ಆದಿತ್ಯ ಎಂಬ ಬಾಲಕ ನೇಣು ಬಿಗಿದುಕೊಂಡಿದ್ದಾನೆ ಮತ್ತು ಪಿಎಸ್ ಕಪ್ತಂಗಂಜ್‌ನಲ್ಲಿ ಪ್ರಕರಣ ದಾಖಲಿಸಲಾಗಿದೆ. ಪರಸ್ಪರ ಭಿನ್ನಾಭಿಪ್ರಾಯವೇ ಕಾರಣ ಎಂದು ಶಂಕಿಸಲಾಗಿದೆ' ಎಂದಿದ್ದಾರೆ.

ಆದರೆ, ಸಾವಿಗೂ ಮುನ್ನ ಆದಿತ್ಯನಿಗೆ ತೀವ್ರ ಕಿರುಕುಳ ನೀಡಲಾಗಿದೆ ಎಂದು ಸಂತ್ರಸ್ತನ ಕುಟುಂಬದವರು ಆರೋಪಿಸಿದ್ದಾರೆ.

ಆತನ ಚಿಕ್ಕಪ್ಪ ವಿಜಯ್ ಕುಮಾರ್ ಪ್ರಕಾರ, ಅಪ್ರಾಪ್ತನನ್ನು ಗ್ರಾಮದಲ್ಲಿ ನಡೆದ ಹುಟ್ಟುಹಬ್ಬದ ಪಾರ್ಟಿಗೆ ಆಹ್ವಾನಿಸಲಾಗಿತ್ತು, ಅಲ್ಲಿ ಆತನ ಮೇಲೆ ಹಲ್ಲೆ ನಡೆಸಲಾಗಿದೆ. ಇದೆಲ್ಲ ಪೂರ್ವ ಯೋಜಿತವೋ ಗೊತ್ತಿಲ್ಲ. ಆದರೆ, ಆತನನ್ನು ವಿವಸ್ತ್ರಗೊಳಿಸಿ ಥಳಿಸಲಾಗಿದೆ ಮತ್ತು ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ದೂರನ್ನು ದಾಖಲಿಸಿಕೊಂಡಿಲ್ಲ' ಎಂದು ಆರೋಪಿಸಿದ್ದಾರೆ.

ಆತನ ಚಿಕ್ಕಪ್ಪ ವಿಜಯ್ ಕುಮಾರ್ ಪ್ರಕಾರ, ಅಪ್ರಾಪ್ತನನ್ನು ಗ್ರಾಮದಲ್ಲಿ ನಡೆದ ಹುಟ್ಟುಹಬ್ಬದ ಪಾರ್ಟಿಗೆ ಆಹ್ವಾನಿಸಲಾಗಿತ್ತು, ಅಲ್ಲಿ ಆತನ ಮೇಲೆ ಹಲ್ಲೆ ನಡೆಸಲಾಗಿದೆ. ಇದೆಲ್ಲ ಪೂರ್ವ ಯೋಜಿತವೋ ಗೊತ್ತಿಲ್ಲ. ಆದರೆ, ಆತನನ್ನು ವಿವಸ್ತ್ರಗೊಳಿಸಿ ಥಳಿಸಲಾಗಿದೆ ಮತ್ತು ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ದೂರನ್ನು ದಾಖಲಿಸಿಕೊಂಡಿಲ್ಲ' ಎಂದು ಆರೋಪಿಸಿದ್ದಾರೆ.

'ಡಿಸೆಂಬರ್ 20 ರಂದು ಘಟನೆ ಸಂಭವಿಸಿದೆ. ಆದರೆ, ಮರುದಿನ ನಮಗೆ ವಿಷಯ ತಿಳಿಯಿತು. ಆದಿತ್ಯ ತಡರಾತ್ರಿ ಮನೆಗೆ ಬಂದಿದ್ದಾನೆ ಮತ್ತು ಮರುದಿನ ಬೆಳಿಗ್ಗೆ ಘಟನೆಯನ್ನು ವಿವರಿಸಿದ್ದಾನೆ. ನಾವು ಎಷ್ಟೇ ಪ್ರಯತ್ನಪಟ್ಟರೂ, ಮೂರು ದಿನಗಳಾದರೂ ಅಧಿಕಾರಿಗಳು ನಮ್ಮ ದೂರನ್ನು ದಾಖಲಿಸಿಕೊಂಡಿಲ್ಲ. ಕಿರುಕುಳ ನೀಡಿದ್ದೇ ಆತನ ಆತ್ಮಹತ್ಯೆಗೆ ಕಾರಣವಾಯಿತು' ಎಂದಿದ್ದಾರೆ.

ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT